ಬ್ರೇಕಿಂಗ್ ನ್ಯೂಸ್ | ರಾಹುಲ್‌ಗಾಂಧಿ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭಾ ಸ್ಪೀಕರ್

Date:

ಲೋಕಸಭಾ ಸದಸ್ಯತ್ವದಿಂದ ಅನರ್ಹರಾಗಿದ್ದ ರಾಹುಲ್‌ ಗಾಂಧಿ ಅವರು ತಮ್ಮ ಸಂಸದ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ರಾಹುಲ್‌ ಅನರ್ಹತೆ ಆದೇಶವನ್ನು ಹಿಂಪಡೆದುಕೊಂಡಿದ್ದಾರೆ.

ಮೋದಿ ಉಪನಾಮ ಟೀಕೆ ಪ್ರಕರಣದಲ್ಲಿ ಸೂರತ್‌ ನ್ಯಾಯಾಲಯವು ರಾಹುಲ್‌ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ಬೆನ್ನಲ್ಲೇ, ರಾಹುಲ್‌ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಲೋಕಸಭಾ ಸ್ಪೀಕರ್ ಆದೇಶಿದ್ದರು.

ರಾಹುಲ್‌ಗಾಂಧಿ ತಮ್ಮ ವಿರುದ್ಧ ಜೈಲು ಶಿಕ್ಷೆ ಮತ್ತು ಅನರ್ಹತೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಶಿಕ್ಷೆ ಮತ್ತು ಅರ್ನಹತೆಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿ ಶುಕ್ರವಾರ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ, ಅವರ ಸಂಸತ್ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಮರು ಸ್ಥಾಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ರಾಹುಲ್‌, ‘ಎಲ್ಲ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ’ ಎಂದಿದ್ದರು. ಅವರ ಈ ಹೇಳಿಕೆಯ ವಿರುದ್ಧ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಎಂಬವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಗಪುರ್ ಉದ್ಯಮಿಗಳು ಹೂಡಿಕೆಗೆ ಮುಂದೆ ಬಂದರೆ ಭೂಮಿ ಒದಗಿಸಲು ಸಿದ್ಧ: ಸಚಿವ ಎಂ ಬಿ ಪಾಟೀಲ್

‌ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ಅವರಿಗೆ...

ಇಂದು ನಡೆಯಲಿದೆ ಹೈ ಪ್ರೊಫೈಲ್‌ ಕೇಸುಗಳ ವಿಚಾರಣೆ; ಸಂಪೂರ್ಣ ಮಾಹಿತಿ ಇಲ್ಲಿದೆ

ಇಂದು ನಾಲ್ಕು ಹೈಪ್ರೊಫೈಲ್‌ ಕೇಸುಗಳ ವಿಚಾರಣೆ ಹೈಕೋರ್ಟ್‌ ಸೇರಿದಂತೆ ವಿವಿಧ ಕೋರ್ಟ್‌ಗಳಲ್ಲಿ...

ಲೈಂಗಿಕ ದೌರ್ಜನ್ಯ | ಸಿ ಪಿ ಯೋಗೇಶ್ವರ್ ಆಪ್ತ ಟಿ ಎಸ್‌ ರಾಜು ವಿರುದ್ಧ ದೂರು ದಾಖಲು, ಆರೋಪಿ ಪರಾರಿ

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ...

ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ...