ಹಣದುಬ್ಬರ ಹೆಚ್ಚಳ; ಆದರೆ ಬಂಡವಾಳಶಾಹಿಗಳ ಬೆಳೆಸುತ್ತಿರುವ ಮೋದಿ ಸರ್ಕಾರ: ರಾಹುಲ್ ಗಾಂಧಿ

Date:

ದೇಶದಲ್ಲಿ ಹಣದುಬ್ಬರ ಅಧಿಕವಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಬಂಡವಾಳಶಾಹಿಗಳನ್ನು ಬೆಳೆಸುತ್ತಿದೆ ಎಂದು ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

- Advertisement -

ತನ್ನ ವಿಧಾನಸಭಾ ಕ್ಷೇತ್ರ ರಾಯ್‌ಬರೇಲಿಗೆ ರಾಹುಲ್ ಗಾಂಧಿ ಎರಡು ದಿನ ಭೇಟಿ ನೀಡಿದ್ದು, ಮೊದಲು ಚುರುವ ಗಡಿಯಲ್ಲಿರುವ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿದರು. ದೇವಾಲಯದಲ್ಲಿ ಸ್ವಲ್ಪ ಸಮಯ ಕಳೆದ ಬಳಿಕ ಬಚ್ರಾವಣ್‌ ಕಡೆ ತೆರಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಚುನಾವಣಾ ಆಯುಕ್ತರ ನಡುರಾತ್ರಿಯ ಆಯ್ಕೆ ಅಗೌರವದಿಂದ ಕೂಡಿದೆ: ರಾಹುಲ್ ಗಾಂಧಿ

ಬಚ್ರಾವಣ್ ಬಳಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುತ್ತಿದೆ. ಜೊತೆಗೆ ಬಂಡವಾಳಶಾಹಿಗಳ ಬೆಳವಣಿಗೆಗೆ ಸಹಾಯ ಮಾಡುತ್ತಿದೆ” ಎಂದು ದೂರಿದ್ದಾರೆ.

“ಹಣದುಬ್ಬರವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ ಬಿಜೆಪಿ ಸರ್ಕಾರ ಬರೀ ಬಂಡವಾಳಶಾಹಿಗಳ ಬೆಳವಣಿಗೆಗೆ ಸಹಾಯ ಮಾಡುವುದರಲ್ಲೇ ಮಗ್ನವಾಗಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಹಿಂದು ಧರ್ಮದಿಂದ ರಾಹುಲ್ ಗಾಂಧಿಗೆ ಬಹಿಷ್ಕಾರ; ಹಿಂದುತ್ವವಾದಿಗಳ ಹುನ್ನಾರ!

ಈ ನಡುವೆ ರಾಹುಲ್ ಗಾಂಧಿ ಭೇಟಿಯ ವೇಳೆ ತಮ್ಮನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು ಎಂದು ಕೆಲವು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ, ಗೃಹಬಂಧನದ ಬಗ್ಗೆ ಪೊಲೀಸರು ಯಾವುದೇ ದೃಢೀಕರಣ ನೀಡಿಲ್ಲ.

“25 ಕಾರ್ಯಕರ್ತರೊಂದಿಗೆ ನಮ್ಮನ್ನು ನಗರ ಪಂಚಾಯತ್ ಕಚೇರಿಯಲ್ಲಿ ಬಂಧನದಲ್ಲಿ ಇರಿಸಲಾಗಿದೆ. ರಾಯ್‌ಬರೇಲಿಯ ಜನರು ಅವರನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿರುವುದರಿಂದ ಇಲ್ಲಿಯೇ ಇದ್ದು, ಜನರ ಸಮಸ್ಯೆಗಳನ್ನು ಆಲಿಸುವುದು, ಅವುಗಳನ್ನು ಪರಿಹರಿಸುವುದು ಸಂಸದರ ಜವಾಬ್ದಾರಿಯಾಗಿದೆ. ರಾಹುಲ್ ಗಾಂಧಿ ಸಾರ್ವಜನಿಕರ ಬಗ್ಗೆ ಗಮನ ಹರಿಸುತ್ತಿಲ್ಲ” ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪ್ರವೇಶ್ ವರ್ಮಾ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...