ರಾಯಚೂರು | ಕುಮಾರ್‌ ನಾಯಕ್‌ ಅಂದು ಜಿಲ್ಲಾಧಿಕಾರಿ, ಇಂದು ʼಕೈʼ ಅಭ್ಯರ್ಥಿ

Date:

ಚುನಾವಣೆಯ ಸಂದರ್ಭದಲ್ಲಿ ಜನರು ಸಾಮಾಜಿಕ ಜಾಲತಾಣದಲ್ಲಿ, ಹಳ್ಳಿಗಳಲ್ಲಿ ಮರದ ಕೆಳಗೆ ಕೂತುಕೊಂಡು ಟಿಕೆಟ್ ಅವರಿಗೆ ಸಿಗುತ್ತೆ, ಇವರಿಗೆ ಸಿಗುತ್ತೆ ಎಂದು ಸದಾ ಚರ್ಚೆಯಲ್ಲಿರುತ್ತಾರೆ. ಇನ್ನೊಂದು ಕಡೆ ಅಭ್ಯರ್ಥಿಗಳು ಟಿಕೆಟ್ ಪಡೆಯುವುದರಲ್ಲಿ ಹಿರಿಯ ರಾಜಕೀಯ ವ್ಯಕ್ತಿಗಳ ಬೆನ್ನಿಗೆ ಬಿದ್ದಿರುತ್ತಾರೆ.

ರಾಯಚೂರು ಎಸ್‌ಟಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸತೀಶ್ ಜಾರಕಿಹೊಳಿ ಅಳಿಯ ರವಿ ಪಾಟೀಲ್ ಮತ್ತು ಮಾಜಿ ನಿವೃತ್ತ ಐಎಎಸ್‌ ಅಧಿಕಾರಿ ಜಿ. ಕುಮಾರ್ ನಾಯಕ್ ಅವರ ಮಧ್ಯೆ ಟಿಕೆಟ್‌ಗಾಗಿ ಪೈಪೋಟಿ ಆಗಿತ್ತು. ಕೊನೆಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜಿ. ಕುಮಾರ್ ನಾಯಕ್ ಅವರು ಕಣದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸಮಯದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಬಿ.ವಿ. ನಾಯಕ್ ಬಿಜೆಪಿ ಸೇರಿದ್ದರು. ಕಾಂಗ್ರೆಸ್ ನಾಯಕರು ಹೊಸಬರಿಗೆ ಅವಕಾಶ ಮಾಡಿದ್ದಾರೆ. ಪಕ್ಷದಲ್ಲಿ ಪ್ರಬಲ ಆಕಾಂಕ್ಷಿಗಳಿದ್ದರೂ ಸಹ ಹೊಸ ಪ್ರಯತ್ನಕ್ಕೆ ಪಕ್ಷ ಮುಂದಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಿ. ಕುಮಾರ್ ನಾಯಕ್ ಅವರು ಮೂಲ ಬೆಂಗಳೂರಿನವರು. ಕರ್ನಾಟಕದ ನಾನಾ ಭಾಗದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಅವರು 1990ರಲ್ಲಿ ಐಎಎಸ್‌ನ ಕರ್ನಾಟಕ ಕೇಡರ್‌ಗೆ ಸೇರಿದರು. ಉತ್ತರಕನ್ನಡ ಜಿಲ್ಲೆಯಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. 1999ರಿಂದ 2002ರವರೆಗೆ ಅವರು ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಈ ಅವಧಿಯಲ್ಲಿ ಅವರು ತೀವ್ರ ಬರಗಾಲಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿಭಾಯಿಸಿದ್ದಾರೆ. ಸಾರ್ವಜನಿಕ ಗ್ರಂಥಾಲಯ, ಮಾರುಕಟ್ಟೆ, ಪಾಳುಬಿದ್ದ ಕಟ್ಟಡಗಳು, ಜಿಲ್ಲೆಯ ಶಿಕ್ಷಣ ಸ್ಥಿತಿಯನ್ನು ಸುಧಾರಿಸಲು ರಾಯಚೂರಿನಲ್ಲಿ ವಿಶ್ರಾಂತಿ ಮತ್ತು ಮನರಂಜನೆಗಾಗಿ ಇದ್ದ ಏಕೈಕ ಸ್ಥಳ ಪಟ್ಟಣದ ಸರೋವರ ಆಮ್ ತಲಾಬ್  ಹೆಚ್ಚುವರಿ ಸೌಲಭ್ಯಗಳೊಂದಿಗೆ ಅವರ ಅಧಿಕಾರಾವಧಿಯಲ್ಲಿ ಅಭಿವೃದ್ದಿಯಾದವು.

ಕುಮಾರ್‌ ನಾಯಕ್‌ ರಾಜಕೀಯವಾಗಿ ಜಿಲ್ಲೆಗೆ ಪರಿಚಯವಿಲ್ಲದೇ ಇದ್ದರೂ ಸರ್ಕಾರಿ ಅಧಿಕಾರಿಯಾಗಿ ಜಿಲ್ಲೆಯೊಂದಿಗೆ ಹಳೆ ಸಂಬಂಧ ಕೆಲವು ರಾಜಕಾರಣಿ ಮುಖಂಡರ ಜೊತೆ ನಿರಂತರ ಸಂಪರ್ಕ, ಆವಾಗಾವಾಗ ಜಿಲ್ಲೆಗೆ ಆಗಮಿಸಿ ಕೆಲವು ಮುಖಂಡರನ್ನು ಭೇಟಿಯಾಗಿ ಚರ್ಚಿಸುತ್ತಿದ್ದರು. ಈ ಹಿಡಿತದಿಂದ ರಾಯಚೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಕನಸಿನೊಂದಿಗೆ ಸುಮಾರು ದಿನಗಳಿಂದ ರಾಯಚೂರಿನಲ್ಲಿ ನೆಲೆಯೂರಿ ತಳಮಟ್ಟದಿಂದ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ಜನರು ಅವರ ಕೈ ಹಿಡಿಯುತ್ತಾರಾ ಕಾದು ನೋಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿ ತಿಂಗಳು ನಾನು ಮತ್ತು ಸಿಎಂ ಸೇರಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು....

ಬಿಜೆಪಿ ತನ್ನ ಮೂಗಿನ ನೇರದ ಹಿಂದೂ ದೇಶ ನಿರ್ಮಾಣ ಮಾಡುವುದು ಅಸಾಧ್ಯ: ಸಿಎಂ ಸಿದ್ದರಾಮಯ್ಯ

"ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಸಿಎಂ ಬಿ ಎಸ್...

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಅಲೆ | ಬಿಜೆಪಿಗೆಷ್ಟು ನಷ್ಟ – ಕಾಂಗ್ರೆಸ್‌ಗೆ ಎಷ್ಟು ಲಾಭ?

ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ....