ಮಳೆಹಾನಿ | ಪರಿಹಾರ ಕ್ರಮ ತ್ವರಿತವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಸೂಚನೆ

Date:

  • 67 ಮಂದಿ ಪ್ರಾಣಹಾನಿ ಆಗಿದ್ದು, 60 ಮಂದಿಯ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ
  • 487 ಜಾನುವಾರು ಸಾವು, 1,400 ಮನೆಗಳಿಗೆ ಹಾನಿ, 20,160 ಹೆಕ್ಟೇರ್ ಬೆಳೆ ಹಾನಿ

ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಮತ್ತು ಅದಕ್ಕೆ ಕೈಗೊಳ್ಳಬೇಕಾದ ಪರಿಹಾರ ಕ್ರಮದ ಕುರಿತು ಅಧಿಕಾರಿಗಳ ಜೊತೆಗೆ ಚರ್ಚಿಸಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಬೆಂಗಳೂರಿನ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜನವರಿ, ಮಾರ್ಚ್, ಮೇ ನಲ್ಲಿ ಕೆಲ ಜಿಲ್ಲೆಯಲ್ಲಿ ಮಳೆ ಆಗಿದೆ. 67 ಮಂದಿ ಪ್ರಾಣಹಾನಿ ಆಗಿದ್ದು, ಅದರಲ್ಲಿ 60 ಮಂದಿಯ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ. ಉಳಿದವರಿಗೆ ಪರಿಹಾರ ನೀಡುತ್ತೇವೆ. 487 ಜಾನುವಾರು ಪ್ರಕೃತಿ ವಿಕೋಪಕ್ಕೆ ಬಲಿಯಾಗಿವೆ. ಪರಿಹಾರ ನೀಡುವ ಕಾರ್ಯ ಆಗಲಿದೆ. 1,400 ಮನೆಗಳಿಗೆ ಮಳೆಯಿಂದ ಭಾಗಶಃ ಹಾನಿ ಆಗಿದೆ. 20,160 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿದೆ ಎಂದು ವಿವರಿಸಿದರು.

ಪ್ರಾಣ ಹಾನಿಗೆ ಪರಿಹಾರವನ್ನು ಎರಡು ದಿನಗಳಲ್ಲಿ ನೀಡಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಬೆಳೆಹಾನಿಗೆ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆ ಆಗಲಿದೆ. ಪರಿಹಾರ ಪೋರ್ಟಲ್ ಆರಂಭಿಸಲು ಸೂಚಿಸಿದ್ದೇವೆ. ಅಧಿಕಾರಿಗಳಿಗೂ ಮಾಹಿತಿ ನೀಡುವಂತೆ ಸೂಚಿಸಿದ್ದೇವೆ. ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಪರಿಹಾರದ ಮೊತ್ತ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

₹538 ಕೋಟಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಲಭ್ಯವಿದೆ. ಕೊರತೆ ಇರುವಲ್ಲಿ ಒಂದೆರಡು ದಿನದಲ್ಲಿ ತಲುಪಿಸುತ್ತೇವೆ. ಇದು ತಕ್ಷಣದ ಕೆಲಸ. ಉಳಿದಂತೆ ಕಳೆದ ಎರಡು ವರ್ಷದಲ್ಲಿ ಅತಿಯಾದ ಮಳೆಯಿಂದ ದೊಡ್ಡ ಹಾನಿ ಆಗಿತ್ತು. ಈ ಸಾರಿ ಮುನ್ನೆಚ್ಚರಿಕೆ ಕೈಗೊಳ್ಳಲಿದ್ದೇವೆ. ಬೆಂಗಳೂರು, ಕೊಡಗು, ಮಂಗಳೂರು, ಬೆಳಗಾವಿ, ರಾಯಚೂರು ಜಿಲ್ಲೆಯಲ್ಲಿ ರಕ್ಷಣಾ ತಂಡ ನಿಯೋಜಿತವಾಗಲಿದೆ ಎಂದು ಮಾಹಿತಿ ನೀಡಿದರು.

ಹವಾಮಾನ ಮುನ್ಸೂಚನೆ ನಮಗೆ ತಿಳಿದರೂ ನಾವು ಜನರಿಗೆ ತಲುಪಿಸಲು ಆಗುತ್ತಿಲ್ಲ. ತಲುಪಿಸಿದರೂ ಜನ ಗಮನಿಸುವುದಿಲ್ಲ. ತಂತ್ರಜ್ಞಾನ ಇದ್ದರೂ ಸದ್ಬಳಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಮುಂದೆ ಆಗಬಹುದಾದ ಅನಾಹುತ ತಪ್ಪಿಸಲು ಸೂಚಿಸಿದ್ದೇನೆ ಎಂಬ ಎಂದರು.

ಎಲ್ಲ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದರು. ಇನ್ನು ಮುಂದೆ ತಕ್ಷಣ ಕ್ರಮ ಕೈಗೊಳ್ಳಲು ಸಿದ್ಧರಾಗಿ ಎಂದಿದ್ದೇವೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಮಳೆ ಆಗಲಿದೆ ಎಂದಿದ್ದಾರೆ. ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಜೂನ್ ನಲ್ಲಿ ಕಡಿಮೆ ಮಳೆ ಆಗಬಹುದು. ಉಳಿದಂತೆ ವಾಡಿಕೆಯಂತೆ ಆಗಲಿದೆ ಹಾಗೂ ಆಗಲಿ ಎಂಬುದು ಆಶಯ. ವಿಜ್ಞಾನಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಸರ್ಕಾರಿ ಭೂಮಿ ಕಬಳಿಕೆ | ನಿ. ನ್ಯಾಯಾಧೀಶರಿಂದ ಮರುಪರಿಶೀಲನೆಗೆ ಸೂಚನೆ : ಕೃಷ್ಣ ಭೈರೇಗೌಡ

ಎನ್‌ಡಿಆರ್‌ಎಫ್‌ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ಪ್ರಾಮಾಣಿಕವಾಗಿ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇವೆ. ಇಲಾಖೆಯಲ್ಲಿ ಒಂದಿಷ್ಟು ತಾಂತ್ರಿಕ ಸಮಸ್ಯೆ ಇದೆ. ಇದನ್ನೆಲ್ಲಾ ಬಗೆಹರಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪಹಣಿ ವಿಚಾರದಲ್ಲಿ ರೈತರಿಗೆ ಅನ್ಯಾಯ ಆಗಬಾರದು. ನಿಧಾನವಾಗಿ ಸಮಸ್ಯೆ ಬಗೆಹರಿಸಿಕೊಂಡು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದರು.

ತಕ್ಷಣಕ್ಕೆ ಕೈಗೊಳ್ಳಬಹುದಾದ ಕ್ರಮ ಮತ್ತು ಮಳೆ ಯಾವ ರೀತಿ ಆಗಬಹುದು ಎಂಬುದನ್ನು ಚರ್ಚಿಸಿದ್ದೇನೆ. ಹಿಂದಿನ ಸರ್ಕಾರದ ಮನೆ ಹಾನಿ ಪರಿಹಾರ ವಿಚಾರ ಚರ್ಚಿಸಿಲ್ಲ. ಮುಂದೆ ಗಮನಿಸುತ್ತೇನೆ. ಮನೆಗೆ ₹5 ಲಕ್ಷ ಹೋಗಿಲ್ಲ. ₹1 ಲಕ್ಷ ಹೋಗಿದೆ ಎಂಬ ಮಾಹಿತಿ ಇದೆ. ಇದನ್ನು 15 ದಿನದಲ್ಲಿ ಚರ್ಚಿಸಿ ಮಾಹಿತಿ ನೀಡುತ್ತೇನೆ ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯಮಿಗೆ ಬೆದರಿಕೆ | ಹೆಚ್‌ ಡಿ ಕುಮಾರಸ್ವಾಮಿ, ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಎಫ್​ಐಆರ್

50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ವಿಜಯ್...

ಗದಗ | ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು; ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರಿಂದ ಪ್ರಕಟಣೆ

ಕೊಪ್ಪಳ ರೈಲ್ವೆ ನಿಲ್ದಾಣದ ರೈಲ್ವೆ ಯಾರ್ಡ್‌ನ ರೈಲ್ವೆ ಕಿ.ಮಿ ನಂ-115/000ರಲ್ಲಿ ಅಕ್ಟೋಬರ್...

ದಾವಣಗೆರೆ | ಗಾಂಧಿ ಜಯಂತಿ ಆಚರಣೆ

ಭಾರತಕ್ಕೆ ಸ್ವಾತಂತ್ರ್ಯಕ್ಕೆ ತಂದುಕೊಟ್ಟ ಗಾಂಧೀಜಿಯವರ ಸತ್ಯ ಮತ್ತು ಅಹಿಂಸಾ ತತ್ವಗಳು ಇಂದಿಗೂ...

ಮಂಡ್ಯ | ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿ

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಬೀದಿ...