‘ಆಧುನಿಕ ಭಾರತದಲ್ಲಿ ಮೋದಿ ಪಾತ್ರ’ದ ನಿರ್ಲಕ್ಷ್ಯ: 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ ನಿಷೇಧಿಸಿದ ರಾಜಸ್ಥಾನ ಶಿಕ್ಷಣ ಸಚಿವ

Date:

Advertisements

ರಾಜಸ್ಥಾನದಲ್ಲಿ ಶೈಕ್ಷಣಿಕ ವಿಷಯದ ಕುರಿತು ಚರ್ಚೆ ಮತ್ತೆ ಆರಂಭವಾಗಿದೆ. 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ ‘ಆಜಾದಿ ಕೆ ಬಾದ್ ಕಾ ಸ್ವರ್ಣಿಮ್ ಭಾರತ್’ (ಸ್ವಾತಂತ್ರ್ಯದ ನಂತರ ಸುವರ್ಣ ಭಾರತ) ಮೇಲೆ ಶಿಕ್ಷಣ ಸಚಿವ ಮದನ್ ದಿಲಾವರ್ ನಿಷೇಧ ಹೇರಿದ್ದಾರೆ. ಪಠ್ಯಪುಸ್ತಕದಲ್ಲಿ ‘ಆಧುನಿಕ ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆಗಳನ್ನು, ಪಾತ್ರವನ್ನು’ ನಿರ್ಲಕ್ಷಿಸಲಾಗಿದೆ. ಕಾಂಗ್ರೆಸ್ ನಾಯಕರನ್ನು ಅಸಮಾನವಾಗಿ ವೈಭವೀಕರಿಸಲಾಗಿದೆ ಎಂದು ಶಿಕ್ಷಣ ಸಚಿವರು ಆರೋಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ದಿಲಾವರ್, “ಪುಸ್ತಕವು ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆಗಳ ಬಗ್ಗೆ ಕೇವಲ ಒಂದು ಸಣ್ಣ ಉಲ್ಲೇಖವನ್ನು ಮಾತ್ರ ಹೊಂದಿದೆ. ಇದು ಆಧುನಿಕ ಭಾರತವನ್ನು ರೂಪಿಸುವಲ್ಲಿ ಅವರ ಪಾತ್ರವನ್ನು ಸಂಪೂರ್ಣವಾಗಿ ಬದಿಗಿಡುತ್ತದೆ. ಕಾಂಗ್ರೆಸ್ ದೇಶಕ್ಕಾಗಿ ಎಲ್ಲವನ್ನೂ ಮಾಡಿದೆ ಎಂದು ಬಿಂಬಿಸುವಂತೆ ಇಡೀ ಪುಸ್ತಕವನ್ನು ವಿನ್ಯಾಸಗೊಳಿಸಲಾಗಿದೆ ಎಂಬಂತೆ ತೋರುತ್ತದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ವಿವಿಯ ದೌಲತ್ ರಾಮ್ ಕಾಲೇಜು ಕೇಸರೀಕರಣ: ವಿದ್ಯಾರ್ಥಿಗಳು ಹೇಳುವುದೇನು?

ಒಬ್ಬ ಲೂಟಿಕೋರ ಮತ್ತು ಅತ್ಯಾಚಾರಿಯಾಗಿರುವ ಮೊಘಲ್ ಚಕ್ರವರ್ತಿ ಅಕ್ಬರ್‌ನಂತಹ ವ್ಯಕ್ತಿಗಳ ಉಲ್ಲೇಖ ರಾಜಸ್ಥಾನದಲ್ಲಿ ಶಾಲಾ ಶಿಕ್ಷಣದ ಭಾಗವಾಗಬಾರದು ಎಂದೂ ಈ ವೇಳೆಯೇ ಹೇಳಿದ್ದಾರೆ.

ಈ ನಡುವೆ ರಾಜಸ್ಥಾನ ರಾಜ್ಯ ಪಠ್ಯಪುಸ್ತಕ ಮಂಡಳಿಯು 2025ರ ಶೈಕ್ಷಣಿಕ ಅವಧಿಗೆ ಈಗಾಗಲೇ ಪುಸ್ತಕದ 4.90 ಲಕ್ಷ ಪ್ರತಿಗಳನ್ನು ಮುದ್ರಿಸಿದೆ. ಸುಮಾರು 19,700 ಶಾಲೆಗಳಿಗೆ ವಿತರಣೆ ಪ್ರಗತಿಯಲ್ಲಿದ್ದು, ಸುಮಾರು ಶೇಕಡ 80 ಪುಸ್ತಕಗಳನ್ನು ಈಗಾಗಲೇ ರವಾನಿಸಲಾಗಿದೆ.ಸರಕಾರದ ಔಪಚಾರಿಕ ಅನುಮೋದನೆಯನ್ನು ಪಡೆದ ನಂತರವೇ ಪುಸ್ತಕಗಳನ್ನು ಮುದ್ರಿಸಲಾಗಿದೆ ಎಂದು ಮಂಡಳಿಯ ಅಧಿಕಾರಿಗಳು ಹೇಳಿದ್ದಾರೆ.

ರಾಜಸ್ಥಾನ ಮಾಧ್ಯಮಿಕ ಶಿಕ್ಷಣ ಮಂಡಳಿಯು ಪ್ರಕಟಿಸಿದ ಪಠ್ಯಪುಸ್ತಕವು ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಿಂದ ಬಳಕೆಯಲ್ಲಿದೆ. ಇದನ್ನು 11 ಮತ್ತು 12ನೇ ತರಗತಿಗಳಲ್ಲಿ ಎರಡು ಭಾಗಗಳಲ್ಲಿ ಕಲಿಸಲಾಗುತ್ತದೆ.

ಅಧಿಕಾರಿಗಳು ಹೇಳುವಂತೆ ಪ್ರಸ್ತುತ ಆವೃತ್ತಿಯು ಹಿಂದಿನ ಆವೃತ್ತಿಯ ಮರುಮುದ್ರಣ. ಆದಾಗ್ಯೂ, ಪಠ್ಯಪುಸ್ತಕದ ಭಾಗ 2 ನಿರ್ದಿಷ್ಟ ವಿವಾದವನ್ನು ಹುಟ್ಟುಹಾಕಿದೆ. ಈ ಪುಸ್ತಕದ ಮುಖಪುಟದಲ್ಲಿ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ಛಾಯಾಚಿತ್ರಗಳಿವೆ.

ಇನ್ನು ಈಗಾಗಲೇ ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗಿದ್ದು ಈಗ ಪಠ್ಯಪುಸ್ತಕಕ್ಕೆ ನಿಷೇಧ ಹೇರುವ ಟೀಕೆಯ ಬಗ್ಗೆ ದಿಲಾವರ್ ಪ್ರತಿಕ್ರಿಯಿಸಿದ್ದು, “ವಿಷವು ಲಕ್ಷ ರೂಪಾಯಿಗಳ ಮೌಲ್ಯದ್ದಾಗಿದ್ದರೆ, ಅದನ್ನು ನೀವು ಸೇವಿಸುತ್ತೀರಾ? ಕಾಂಗ್ರೆಸ್ ಮಾಡಿದ್ದು ಇದನ್ನೇ. ಗಾಂಧಿ ಕುಟುಂಬವನ್ನು ವೈಭವೀಕರಿಸಲು ಸಾರ್ವಜನಿಕ ಹಣವನ್ನು ಖರ್ಚು ಮಾಡಿದೆ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಾನು-ಭಾಸ್ತಿ ಜೋಡಿ- ಕನ್ನಡಕ್ಕೆ ಬೂಕರ್ ಗೆದ್ದ ಮೋಡಿ

“ಒಂದು ದಶಕಕ್ಕೂ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರೂ, ನರೇಂದ್ರ ಮೋದಿಯವರ ಸಾಧನೆಗಳನ್ನು ಅಷ್ಟೇನೂ ಉಲ್ಲೇಖಿಸಲಾಗಿಲ್ಲ. ಅವರು 370 ನೇ ವಿಧಿಯನ್ನು ರದ್ದುಗೊಳಿಸಿದ್ದಾರೆ, ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಮತ್ತು ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಆದರೂ, ಈ ಪುಸ್ತಕವು ಅವರ ಬಗ್ಗೆ ಹೆಚ್ಚು ಮಾಹಿತಿ ಹೊಂದಿಲ್ಲ. ಮತ್ತೊಂದೆಡೆ, ಕಾಂಗ್ರೆಸ್ ಪ್ರಧಾನ ಮಂತ್ರಿಗಳ ಬಗ್ಗೆ ಪುಟ ತುಂಬಾ ಮಾಹಿತಿಯಿದೆ. ಈ ನಿಟ್ಟಿನಲ್ಲಿ ಪಠ್ಯಪುಸ್ತಕವನ್ನು ನಿಷೇಧಿಸುವ ನಿರ್ಧಾರ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪಠ್ಯಪುಸ್ತಕಗಳ ಕೇಸರಿಕರಣ ನಿರಂತರವಾಗಿ ಸಾಗುತ್ತಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಪಠ್ಯದಿಂದ ಮುಸ್ಲಿಮ್ ರಾಜರುಗಳ ಮಾಹಿತಿಯನ್ನು ತೆಗೆದುಹಾಕಲಾಗಿದೆ. ಪ್ರಗತಿಪರರು ಬಿಜೆಪಿ ಸರ್ಕಾರದ ಈ ಕ್ರಮವನ್ನು ಖಂಡಿಸುತ್ತಾ ಬಂದಿದ್ದಾರೆ. ಇನ್ನು ಕರ್ನಾಟಕದಲ್ಲಿಯೂ 2022-23ರ ಸಾಲಿನ ಶಾಲಾ ಪಠ್ಯಪುಸ್ತಕವನ್ನು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಪರ ಒಲವಿರುವ ಬಲಪಂಥೀಯ ಲೇಖಕ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಪರಿಷ್ಕರಿಸಲಾಗಿದೆ. ಈ ವೇಳೆ ಸಮಿತಿಯು ನಾಡಿನ ಖ್ಯಾತ ಸಾಹಿತಿಗಳಾದ ಪಿ.ಲಂಕೇಶ್‌, ಸಾರಾ ಅಬೂಬಕ್ಕರ್‌, ಡಾ.ಜಿ.ರಾಮಕೃಷ್ಣ ಅವರ ಬರಹಗಳು ಸೇರಿದಂತೆ, ಸಮಾಜ ಸುಧಾರಕ ನಾರಾಯಣ ಗುರು, ಕ್ರಾಂತಿಕಾರಿ ನಾಯಕ ಭಗತ್‌‌ಸಿಂಗ್‌, ಸಾಮಾಜಿಕ ನ್ಯಾಯದ ಹರಿಕಾರ ಪೆರಿಯಾರ್‌‌ ಸೇರಿದಂತೆ ಹಲವಾರು ಮಹಾತ್ಮರ ಪರಿಚಯಿಸುವ ಪಠ್ಯಗಳನ್ನು ಕೈಬಿಟ್ಟಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

Download Eedina App Android / iOS

X