ರಾಜ್‌ಕೋಟ್ ಅಗ್ನಿ ದುರಂತ | ಸಂತ್ರಸ್ತರ ಸಂಬಂಧಿಕರೊಂದಿಗೆ ರಾಹುಲ್‌ ಸಂವಾದ

Date:

ಕಳೆದ ತಿಂಗಳು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಸಂಭವಿಸಿದ ಟಿಆರ್‌ಪಿ ಗೇಮ್ ಝೋನ್ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಸಂಬಂಧಿಕರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದೆ. ತಮ್ಮ ಪಕ್ಷವು ಸಂತ್ರಸ್ತರ ಕುಟುಂಬದ ಜೊತೆಗಿರುವುದಾಗಿ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಮೇ 25ರಂದು ರಾಜ್‌ಕೋಟ್ ನಗರದ ನಾನಾ-ಮಾವಾ ಪ್ರದೇಶದಲ್ಲಿದ್ದ ಗೇಮ್‌ ಝೋನ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿತ್ತು. ದುರಂತ ಘಟನೆಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 27 ಜನರು ಸಾವನ್ನಪ್ಪಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಾವನ್ನಪ್ಪಿದವರ ಕುಟುಂಬಸ್ಥರೊಂದಿಗೆ ಸಂವಾದ ನಡೆಸಿರುವ ರಾಹುಲ್, ಮೃತರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂವಾದದ ವೇಳೆ, ಗುಜರಾತ್ ಕಾಂಗ್ರೆಸ್‌ ಅಧ್ಯಕ್ಷ ಶಕ್ತಿಸಿಂಗ್ ಗೋಹಿಲ್ ಅವರು ದೆಹಲಿಯಲ್ಲಿ ಗಾಂಧಿ ಅವರೊಂದಿಗೆ ಇದ್ದರು. ಸಂತ್ರಸ್ತರ ಸಂಬಂಧಿಕರೊಂದಿಗೆ ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಪಕ್ಷದ ನಾಯಕ ಲಾಲ್ಜಿ ದೇಸಾಯಿ ಸೇರಿದಂತೆ ಇತರರು ಸಂವಾದದಲ್ಲಿ ಭಾಗವಹಿಸಿ, ಜೊತೆಗಿದ್ದರು.

ಘಟನೆ ನಡೆದು ಒಂದು ತಿಂಗಳಾದರೂ, ಬಿಜೆಪಿ ಸರ್ಕಾರವು ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಿಲ್ಲವೆಂದು ಆರೋಪಿಸಿರುವ ಕಾಂಗ್ರೆಸ್‌, ಜೂನ್ 25ರಂದು ‘ರಾಜ್‌ಕೋಟ್‌ ಬಂದ್‌’ಗೆ ಕರೆ ನೀಡಿದೆ. ಸಂತ್ರಸ್ತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಸೇರಿದಂತೆ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.

ದುರಂತ ನಡೆದ ಬಳಿಕ, ಘಟನೆಗೆ ಕಾರಣಗಳು ಹಾಗೂ ಲೋಪದೋಷಗಳ ಬಗ್ಗೆ ತನಿಖೆ ನಡೆಸಲು ಗುಜರಾತ್ ಸರ್ಕಾರವು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಈವರೆಗೆ ಗೇಮ್‌ ‍ಝೋನ್‌ನ ಐವರು ಮಾಲೀಕರು ಮತ್ತು ಆರು ಸರ್ಕಾರಿ ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...