- ರಾಜ್ಯಸಭೆಯಲ್ಲಿ 215 ಮಂದಿಯಿಂದ ಮಹಿಳಾ ಮೀಸಲಾತಿ ಮಸೂದೆ ಪರ ಮತ; ಅಂಗೀಕಾರ
- ನಿಗದಿತ ಐದು ದಿನಗಳಿಗಿಂತ ಒಂದು ದಿನ ಮೊದಲೇ ಮುಕ್ತಾಯಗೊಂಡ ವಿಶೇಷ ಅಧಿವೇಶನ
ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಒದಗಿಸುವ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲೂ ಗುರುವಾರ ತಡರಾತ್ರಿ ಅಂಗೀಕಾರಗೊಂಡಿದೆ.
ರಾಜ್ಯಸಭೆಯಲ್ಲಿ 215 ಮಂದಿ ಮಸೂದೆ ಪರ ಮತ ಚಲಾವಣೆ ಮಾಡಿದ್ದಾರೆ. ಆದರೆ, ಮಸೂದೆ ವಿರುದ್ಧ ಯಾವುದೇ ಮತಗಳು ಚಲಾವಣೆಯಾಗಿಲ್ಲ. ಇದರೊಂದಿಗೆ ಸಂಸತ್ತಿನ ಉಭಯ ಸದನಗಳಲ್ಲಿಯೂ ಮಸೂದೆ ಅಂಗೀಕಾರವಾಗಿದ್ದು, ಇನ್ನು ಮಸೂದೆ ಅಂಗೀಕಾರಕ್ಕೆ ರಾಷ್ಟ್ರಪತಿ ಅಂಕಿತ ಮಾತ್ರ ಬಾಕಿ ಉಳಿದಿದೆ. ಇದರೊಂದಿಗೆ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
Rajya Sabha passes Women's Reservation Bill
— ANI (@ANI) September 21, 2023
215 MPs vote in favour and 0 MPs vote against pic.twitter.com/hfKD09fwj9
27 ವರ್ಷಗಳ ಬಳಿಕ ಉಭಯ ಸದನಗಳಲ್ಲೂ ಬಹುಚರ್ಚಿತ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿದ್ದು, ದೇಶದ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಿ ಗುರುತಿಸಿದೆ.
ಸುಮಾರು 11 ಗಂಟೆಗಳ ಚರ್ಚೆಯ ನಂತರ ಮಹಿಳಾ ಮೀಸಲಾತಿ ಮಸೂದೆಯು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ಈ ಮಸೂದೆಯನ್ನು ಲೋಕಸಭೆ ಬುಧವಾರ ಅಂಗೀಕರಿಸಿತ್ತು.
ರಾಷ್ಟ್ರಪತಿ ಅಂಕಿತವಾದ ಬಳಿಕ ಇನ್ನು ಮುಂದೆ ಇದು ಕಾನೂನಾಗಿ ಜಾರಿಗೆ ಬರಲಿದೆ. ಲೋಕಸಭೆಯಲ್ಲಿ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಾನೂನಾಗಿ ಜಾರಿಯಾಗಲಿದೆ. ನೂತನ ಸಂಸತ್ ಭವನದಲ್ಲಿ ಅಂಗೀಕಾರಗೊಂಡ ಮೊದಲ ಮಸೂದೆ ಇದಾಗಿದೆ.
Had the honor of meeting our dynamic women MPs who are absolutely thrilled at the passage of the Nari Shakti Vandan Adhiniyam.
— Narendra Modi (@narendramodi) September 21, 2023
It is gladdening to see the torchbearers of change come together to celebrate the very legislation they have championed.
With the passage of the Nari… pic.twitter.com/et8bukQ6Nj
ಮಸೂದೆ ಅಂಗೀಕರಿಸಿದ ನಂತರ ಮಾತನಾಡಿದ ರಾಜ್ಯಸಭಾ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಇದು ಐತಿಹಾಸಿಕ ಸಾಧನೆಯಾಗಿದೆ ಎಂದು ಹೇಳಿದರು. ನಂತರ ರಾಜ್ಯಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
ನಿಗದಿಯಂತೆ ಸೆಪ್ಟೆಂಬರ್ 22ರ ಶುಕ್ರವಾರದ ತನಕ ಸಂಸತ್ ಉಭಯ ಸದನಗಳ ವಿಶೇಷ ಅಧಿವೇಶನ ನಡೆಯಬೇಕಿತ್ತು. ಆದರೆ ಗುರುವಾರವೇ ಅಧಿವೇಶನ ಮುಕ್ತಾಯಗೊಂಡಿದೆ.
ಮಸೂದೆ ಅಂಗೀಕಾರಗೊಂಡ ಬಳಿಕ ನೂತನ ಸಂಸತ್ ಭವನದ ಹೊರಗಡೆ ಒಟ್ಟುಗೂಡಿದ ಹೆಚ್ಚಿನ ಮಹಿಳಾ ಸಂಸದರು, ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದರು. ಆ ಬಳಿಕ ಟ್ವೀಟ್ ಮಾಡಿದ ಪ್ರಧಾನಿ, ಮಸೂದೆ ಅಂಗೀಕಾರಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ.