ಅಧರ್ಮದ ಕೆಲಸ ಮಾಡಿ ನಾಟಕೀಯ ಪೂಜೆ ಮಾಡಿದರೆ ದೇವರು ಒಪ್ಪಲ್ಲ: ಸಿಎಂ ಸಿದ್ದರಾಮಯ್ಯ

Date:

ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮನ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

“ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನಿಗೆ ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

“ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು” ಎಂದು ವಿವರಿಸಿದರು.

“ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ” ಎಂದು ವಿವರಿಸಿದರು.

“ಪರಿಶಿಷ್ಟ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು. ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ” ಎಂದು ವಚನಗಳನ್ನು ಉದಾಹರಿಸಿದರು.

ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಎನ್ನುತ್ತಾ ತಾವೂ ಜೈ ಶ್ರೀರಾಮ್ ಘೋಷಣೆ ಕೂಗಿ ನೆರೆದಿದ್ದ ಸಾರ್ವಜನಿಕರಿಗೂ ಘೋಷಣೆ ಕೂಗಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ಸಿಎಂ ಹೆಸರಲ್ಲೇ ರಾಮ: ಮಂಜುಳಾ ಲಿಂಬಾವಳಿ

“ತಮ್ಮ ಹೆಸರಲ್ಲೇ ರಾಮನನ್ನು ಹೊಂದಿರುವ ಸಿದ್ದರಾಮಣ್ಣನವರಿಂದ ರಾಮನ ಗುಡಿ ಉದ್ಘಾಟನೆ ಆಗಿರುವುದು ಬಹಳ ಖುಷಿಯ ವಿಷಯ” ಎಂದು ಮಹದೇವಪುರ ಶಾಸಕಿ ಮಂಜುಳಾ ಲಿಂಬಾವಳಿ ಅವರು ಅತ್ಯಂತ ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಮಂಜುಳಾ ಅರವಿಂದ ಲಿಂಬಾವಳಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಅರವಿಂದ ಲಿಂಬಾವಳಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಿ: ಪ್ರಧಾನಿ ಮೋದಿಗೆ ಬಿಜೆಪಿ ಶಾಸಕ ಯತ್ನಾಳ್‌ ಪತ್ರ

ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌...

ಬಿಜೆಪಿ ಕೋಮುದ್ವೇಷ ಮತ್ತು ವಕ್ಫ್ ಆಸ್ತಿ ವಿವಾದ

ರಾಜ್ಯದಲ್ಲಿ ಒಂದಿಲ್ಲೊಂದು ವಿಚಾರ ಮುನ್ನೆಲೆಗೆ ಬರುತ್ತಿವೆ, ಚರ್ಚೆಯಾಗುತ್ತಿವೆ. ಆಡಳಿತಾರೂಢ ಕಾಂಗ್ರೆಸ್ ವಿರುದ್ಧ...

ನಾನ್ಸೆನ್ಸ್‌ ಅಣ್ಣಾಮಲೈ | ವಾಯುಮಾಲಿನ್ಯಕ್ಕೆ ಬಿಜೆಪಿ ಅಧ್ಯಕ್ಷನ ಪ್ರಚೋದನೆ

''ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ದೀಪಾವಳಿ ದಿನದಂದು ಸಾಕಷ್ಟು ಪಟಾಕಿ ಹೊಡೆಯಿರಿ''...

ಕಾಂಗ್ರೆಸ್ ಕುತಂತ್ರದಿಂದ ಎರಡು ಭಾರಿ ಸೋತಿದ್ದೇನೆ, ಭಾಷಣದ ವೇಳೆ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ

ಎರಡು ಭಾರಿ ನಾನು ಚುನಾವಣೆಯಲ್ಲಿ ಸೋತಿದ್ದೇನೆ. ನಾನು ಏನು ತಪ್ಪು ಮಾಡಿದ್ದೇನೆ...