ರಾಮಮಂದಿರಕ್ಕಾಗಿ ಹೋರಾಟ ಮಾಡಿದವರನ್ನೇ ಹೊರಗಿಟ್ಟು ಉದ್ಘಾಟನೆ: ಹಿಂದೂ ಮಹಾಸಭಾ ಅಸಮಾಧಾನ

Date:

  • ಪ್ರಾಣ ಪ್ರತಿಷ್ಠಾ ಶಾಸ್ತ್ರಕ್ಕೆ ವಿರುದ್ಧ, ಭಾಗವಹಿಸುವ ಎಲ್ಲರಿಗೂ ಶಾಪ ತಟ್ಟಲಿದೆ: ರಾಜೇಶ್ ಪವಿತ್ರನ್
  • ರಾಮಮಂದಿರವನ್ನು ಚುನಾವಣಾ ಸರಕನ್ನಾಗಿ ಮಾಡಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ

ಜ.22ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆಯ ವಿಚಾರದ ಬಗ್ಗೆ ಹಿಂದೂ ಮಹಾಸಭಾ ಕೂಡ ವಿರೋಧ ವ್ಯಕ್ತಪಡಿಸಿದ್ದು, “ಶ್ರೀರಾಮನ ಮಂದಿರವನ್ನು ಅಪೂರ್ಣಾವಸ್ಥೆಯಲ್ಲಿರುವಾಗ ಉದ್ಘಾಟನೆ ಮಾಡುತ್ತಿರುವುದು ಧರ್ಮಶಾಸ್ತ್ರಕ್ಕೆ ಮಾಡಿದ ಅಪಚಾರವಾಗಿದೆ” ಎಂದು ಹೇಳಿದೆ.

- Advertisement -

ಮಂಗಳೂರಿನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಕರ್ನಾಟಕದ ಸಂಸ್ಥಾಪಕ ರಾಜೇಶ್ ಪವಿತ್ರನ್, “ಶ್ರೀರಾಮನ ಮಂದಿರವನ್ನು ಅಪೂರ್ಣಾವಸ್ಥೆಯಲ್ಲಿರುವಾಗ ಉದ್ಘಾಟನೆ ಮಾಡುತ್ತಿರುವುದು ಧರ್ಮಶಾಸ್ತ್ರಕ್ಕೆ ಮಾಡುತ್ತಿರುವ ಅಪಚಾರ. ಹಾಗಾಗಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ಶಾಪ ತಟ್ಟಲಿದೆ. ಹೋರಾಟ ಮಾಡಿದವರನ್ನೇ ಹೊರಗಿಟ್ಟು ತರಾತುರಿಯಲ್ಲಿ ಉದ್ಘಾಟಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ಪ್ರಭು ಶ್ರೀರಾಮಚಂದ್ರನನ್ನು ಚುನಾವಣಾ ಸರಕನ್ನಾಗಿ ಮಾಡಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶ್ರೀರಾಮನ ಶಾಪ ತಟ್ಟುತ್ತದೆ. ಕರ್ನಾಟಕದಲ್ಲಿ ಆದ ಸ್ಥಿತಿಯೇ ಕೇಂದ್ರದಲ್ಲೂ ಆಗಬಹುದು. ಮಂದಿರ ಪೂರ್ತಿಯಾಗುವ ಮುನ್ನವೇ ತರಾತುರಿಯಲ್ಲಿ ನಡೆಸುವುದರ ಉದ್ದೇಶ ಏನು” ಎಂದು ಪ್ರಶ್ನಿಸಿದ್ದಾರೆ.

hindu maha sabha

“ರಾಮ ಜನ್ಮಭೂಮಿಯ ಮೂಲ ವಕಾಲತ್ತುದಾರರು ಹಿಂದೂ ಮಹಾಸಭಾ ಆಗಿದ್ದು, ರಾಮಮಂದಿರ ಉದ್ಘಾಟನೆಗೆ ಹಿಂದೂ ಮಹಾಸಭಾ ಹಾಗೂ ನಿರ್ಮೋಯಿ ಅಖಾರವನ್ನು ಆಹ್ವಾನಿಸಿಲ್ಲ. ಇದು ಕೇಂದ್ರ ಸರ್ಕಾರದ ಸ್ವಾರ್ಥ ರಾಜಕಾರಣವನ್ನು ತೋರಿಸುತ್ತದೆ” ಎಂದು ರಾಜೇಶ್ ಪವಿತ್ರನ್ ಆರೋಪಿಸಿದ್ದಾರೆ.

“ಹಿಂದೂ ಮಹಾಸಭಾ ರಾಮನ ವಿಚಾರದಲ್ಲಿ ಯಾವತ್ತಿಗೂ ರಾಜಕೀಯ ಮಾಡಿಲ್ಲ. ಬಿಜೆಪಿ ಶ್ರೀರಾಮನ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಅದನ್ನು ನಾವು ಒಪ್ಪುವುದಿಲ್ಲ. ರಾಮಮಂದಿರದ ಪೂರ್ಣ ಪ್ರಮಾಣದ ಕಾರ್ಯ ಇನ್ನೂ ಆಗಿಲ್ಲ. ಆದರೂ ಮುಂದಿನ ಚುನಾವಣೆಯ ದೃಷ್ಟಿಯಲ್ಲಿಟ್ಟುಕೊಂಡು ಉದ್ಘಾಟನೆ ಮಾಡಲಾಗುತ್ತಿದೆ. ಇದು ಶಾಸ್ತ್ರಕ್ಕೆ ವಿರುದ್ಧವಾದದ್ದು. ಇದೇ ಮಾತನ್ನು ಹೇಳಿರುವ ಶಂಕರಾಚಾರ್ಯ ಪೀಠದ ಸ್ವಾಮೀಜಿಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಬಿಜೆಪಿ ಬೆಂಬಲಿಗರು ಅವಹೇಳನ ಮಾಡುತ್ತಿದ್ದಾರೆ. ಇದು ಖಂಡನೀಯ” ಎಂದು ತಿಳಿಸಿದರು.

“ಹಿಂದುತ್ವವನ್ನು ಯಾರಿಗೂ ಯಾರೂ ಗುತ್ತಿಗೆ ಕೊಟ್ಟಿಲ್ಲ. ನಮ್ಮ ಹೋರಾಟದ ಫಲವಾಗಿ ಬಿಜೆಪಿ ಇಂದು ಅಧಿಕಾರದಲ್ಲಿದೆ. ರಾಮಮಂದಿರ ಹೋರಾಟದ ಹಿಂದಿನ ಟ್ರಸ್ಟ್‌ ಅನ್ನು ವಿಸರ್ಜಿಸಿ, ಬೇರೆಯದೇ ಒಂದು ಟ್ರಸ್ಟ್‌ ಮಾಡಿದ್ದಾರೆ. ಹೋರಾಟ ಮಾಡಿದವರನ್ನೇ ಹೊರಗಿಟ್ಟು ತರಾತುರಿಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಾಗುತ್ತಿದೆ. ನಾವೇನು ಬೇರೆ ದೇಶದಿಂದ ಬಂದವರೇ?” ಎಂದು ರಾಜೇಶ್ ಪವಿತ್ರನ್ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಲ್ಕಿಸ್ ಬಾನೊ ಪ್ರಕರಣ | ಅನಾರೋಗ್ಯ, ಬೆಳೆ ಕೊಯ್ಲು ನೆಪ: ಶರಣಾಗತಿಗೆ ಕಾಲಾವಕಾಶ ಕೋರಿದ ಅಪರಾಧಿಗಳು

“ನಿಮ್ಮದೇ ಸರ್ಕಾರವಿದ್ದರೂ ನಿಮಗೆ ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಅನ್ನುವ ಭಯವೇ ಅಥವಾ ನಾವು ಇಷ್ಟು ವರ್ಷ ಏನೂ ಮಾಡಿಲ್ಲ ಕೊನೆಯ ಪಕ್ಷ ರಾಮನ ಹೆಸರಿನಲ್ಲಾದರೂ ಗೆಲ್ಲುವ ತಂತ್ರಗಾರಿಕೆಯೇ?” ಎಂದು ಕೇಳಿದ ಅವರು, “ಕಾಂಗ್ರೆಸ್ ಮತ್ತು ಬಿಜೆಪಿಯ ನಡುವೆ ಏನೂ ವ್ಯತ್ಯಾಸವಿಲ್ಲ. ಕೇವಲ ಓಲೈಕೆಗಾಗಿ ಮತ್ತು ಚುನಾವಣೆಗಾಗಿ ಮಾಡುತ್ತಿದ್ದಾರೆ. ಇದನ್ನು ನಾವು ಪ್ರಶ್ನಿಸುತ್ತಿದ್ದೇವೆ” ಎಂದು ಹೇಳಿದರು.

ರಾಮ ಸೇತು ರಾಷ್ಟ್ರೀಯ ಸ್ಮಾರಕ ಎಂದು ಇನ್ನೂ ಯಾಕೆ ಘೋಷಿಸಿಲ್ಲ?
ಸುದ್ದಿಗೋಷ್ಠಿಯಲ್ಲಿ ಇದೇ ವೇಳೆ ರಾಮ ಸೇತು ವಿಚಾರವನ್ನು ಪ್ರಸ್ತಾಪಿಸಿದ ಹಿಂದೂ ಮಹಾಸಭಾ ನಾಯಕ, “ರಾಮ ಸೇತುವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲು ಬಿಜೆಪಿಯದ್ದೇ ಸಂಸದರಾಗಿರುವ ಡಾ. ಸುಬ್ರಮಣಿಯನ್ ಸ್ವಾಮಿಯವರು ಕಳೆದ ಐದು ವರ್ಷಗಳಿಂದ ಗೋಗರೆಯುತ್ತಿದ್ದಾರೆ. ಪ್ರಧಾನಿಯ ಬಳಿ ಈ ಬಗ್ಗೆ ಅವರು ಮನವಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಇನ್ನೂ ಯಾಕೆ ತೀರ್ಮಾನ ಕೈಗೊಂಡಿಲ್ಲ. ಅದು ಹಿಂದುತ್ವದ ವಿಚಾರ ಅಲ್ಲವೇ? ಅದರಲ್ಲಿ ಲಾಭವಿಲ್ಲವ, ಚುನಾವಣೆಯಲ್ಲಿ ಏನೂ ಪ್ರಯೋಜನವಿಲ್ಲವೆಂದು ಯೋಚಿಸಿದ್ದೀರಾ?” ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಜ.22ರಂದು ರಾಮ ಮಹೋತ್ಸವ
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮವನ್ನು ಸಂಭ್ರಮಿಸುವ ಸಲುವಾಗಿ ಜ.22ರಂದು ಮಂಗಳೂರಿನ ಪಿವಿಎಸ್ ವೃತ್ತದ ಬಳಿ ಇರುವ ಲಕ್ಷ್ಮೀ ನಾರಾಯಣ ದೇವಸ್ಥಾನದ ವಠಾರದಲ್ಲಿ ರಾಮ ಮಹೋತ್ಸವವನ್ನು ಆಚರಿಸಲಾಗುವುದು. ಮಂದಿರದ ಪುನರ್ ನಿರ್ಮಾಣಕ್ಕೆ ತ್ಯಾಗ ಬಲಿದಾನ ಮಾಡಿದವರನ್ನು ನೆನಪು ಮಾಡುವ ದೃಷ್ಟಿಯಿಂದ ಕರಸೇವಕರನ್ನು ಗೌರವಿಸಿ, ಸನ್ಮಾನಿಸಲಿದ್ದೇವೆ ಎಂದು ಇದೇ ವೇಳೆ ರಾಜೇಶ್ ಪವಿತ್ರನ್ ಮಾಹಿತಿ ನೀಡಿದರು.

ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷ ಎಲ್‌.ಕೆ. ಸುವರ್ಣ, ಖಜಾಂಚಿ ಲೋಕೇಶ್ ಉಳ್ಳಾಲ್, ಹಿಮಾಂಶು ಶರ್ಮ, ಪ್ರವೀಣ್ ಚಂದ್ರರಾವ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...