ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸು; ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್

Date:

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ” ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸಂದೇಶ ಪ್ರಕಟಿಸಿದ್ದಾರೆ.

“ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತೆರಳದೇ ಇರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಯಾರೂ ಆಹ್ವಾನ ಇದ್ದರೂ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ತೆರಳದೇ ಇರಲು ನಿರ್ಧರಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮ ಎಂದೂ ಕಾಂಗ್ರೆಸ್​ನ ಕೆಲವು ನಾಯಕರು ಟೀಕಿಸಿದ್ದಾರೆ. ಈ ಮಧ್ಯೆ, ರಾಮ ಮಂದಿರಕ್ಕೆ ದೇಣಿಗೆ ನೀಡಿದವರಲ್ಲಿ ಅನೇಕ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂಬುದು ಗಮನಾರ್ಹ. ಈ ಎಲ್ಲ ಬೆಳವಣಿಗೆಗಳ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಶುಭ ಕೋರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಂಬೇಡ್ಕರ್ ಜಯಂತಿಯಂದು ಮಾಂಸ ಮಾರಾಟ ನಿಷೇಧ; ಖಂಡನೆ

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏಪ್ರಿಲ್ 14ರಂದು ರಾಯಚೂರು ಜಿಲ್ಲೆಯ...

ಕುಮಾರಸ್ವಾಮಿ ರಾಜ್ಯದ ಹೆಣ್ಣು ಮಕ್ಕಳ ಕ್ಷಮೆ ಕೇಳಲೇಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ

"ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿಯ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ...

ಮೋದಿ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದ ಕೆ.ಎಸ್.ಈಶ್ವರಪ್ಪ

ರಾಜ್ಯ ಬಿಜೆಪಿಯ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...