ಬೆಳೆ ಪರಿಹಾರಕ್ಕೆ ಸರ್ಕಾರ ₹500 ಕೊಟ್ಟರೆ ದೊಡ್ಡದು, ಅದು ಏನಕ್ಕೂ ಸಾಲಲ್ಲ: ಸಚಿವರ ಮುಂದೆ ರೈತನ ಅಳಲು

Date:

ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣದಲ್ಲಿ ಬುಧವಾರ ತಾಲೂಕಿನ ಬರಪೀಡಿತ ಪ್ರದೇಶಗಳ ವೀಕ್ಷಣೆ ಮತ್ತು ರೈತರ ಜೊತೆ ಸಮಾಲೋಚನೆ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆಯಿತು.

- Advertisement -

ಈ ವೇಳೆ ರಾಮೋಹಳ್ಳಿಯ ರೈತ ರಾಮಚಂದ್ರ ಎಂಬುವವರು, ”ನಾವು ಬಿತ್ತನೆ ಮಾಡಿದ್ದರೂ ಮಳೆ‌‌ ಇಲ್ಲದೆ ಬೆಳೆ ಬರುವ ಗ್ಯಾರಂಟಿ‌ ಇಲ್ಲ. ನೀವು ಕೊಡುವ ಬರ ಪರಿಹಾರದ ಚೆಕ್ ಕೇವಲ ₹100, ₹150. ಹೆಚ್ಚಿಗೆ ಎಂದರೆ ₹500 ಕೊಟ್ಟರೆ ದೊಡ್ಡದು. ಇದು ಯಾವುದಕ್ಕೂ ಸಾಲುವುದಿಲ್ಲ. ಬೆಳೆಹಾನಿ ಮತ್ತು ಬರ ಪರಿಹಾರವು ರೈತರ ನಷ್ಟ ತುಂಬಿ ಕೊಡುವಂತಿರಬೇಕು” ಎಂದು ತನ್ನ ಅಳಲನ್ನು ತೋಡಿಕೊಂಡ ಬೆಳವಣಿಗೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಇದೇ ವೇಳೆ ಸಮಾಲೋಚನೆ ಕಾರ್ಯಕ್ರಮದಲ್ಲಿ ಹಲವು ಮಂದಿ ರೈತರು, ‘ಹಾರೋಹಳ್ಳಿ ಹಲವು ವಿಷಯದಲ್ಲಿ ಹಿಂದುಳಿದಿದೆ. ತಾಲೂಕು ಕಚೇರಿಗಳು, ಆಸ್ಪತ್ರೆ, ಶಾಲಾ- ಕಾಲೇಜು ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಕೈಗಾರಿಕಾ ಪ್ರದೇಶವಿದ್ದರೂ ಜನ ಇಂದಿಗೂ ತಮ್ಮ ಕಸುಬನ್ನೇ ಅವಲಂಬಿಸಿದ್ದಾರೆ. ಬರದಿಂದ ತತ್ತರಿಸಿರುವ ಅವರ ನೆರವಿಗೆ ಸರ್ಕಾರ ಬರಬೇಕು’ ಎಂದು ಒತ್ತಾಯಿಸಿದರು.

Harohalli

ಇದಕ್ಕೆ ಸ್ಪಂದಿಸಿದ ಸಚಿವ ರಾಮಲಿಂಗಾರೆಡ್ಡಿ, ‘ಕೇಂದ್ರ ಸರ್ಕಾರ ಸ್ಪಂದಿಸದಿದ್ದರೂ, ರಾಜ್ಯ ಸರ್ಕಾರ ಸದಾ ರೈತರ ಪರವಾಗಿರಲಿದೆ. ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ, ಹೊಸ ತಾಲೂಕು ಆಗಿರುವ ಹಾರೋಹಳ್ಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿದ್ದ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮಾತನಾಡಿ, ‘ನಾವೆಲ್ಲರೂ ರೈತಾಪಿ ವರ್ಗದವರು. ರೇಷ್ಮೆ ಮತ್ತು ಹಾಲು ಉತ್ಪಾದನೆಯೇ ನಮ್ಮ ಬದುಕಿಗೆ ಆಧಾರ. ಈ ಸಲ ಬರದಿಂದಾಗಿ ಇವುಗಳ ಮೇಲೆ ಕರಿಮೋಡ ಆವರಿಸಿದೆ. ಮಳೆ ಕೊರತೆಯಿಂದಾಗಿ ಬಿತ್ತನೆ ಕುಂಠಿತವಾಗಿದೆ. ಹಾಲು ಖರೀದಿ ದರ ಕಡಿತ ಮಾಡಿರುವುದು ಹೈನುಗಾರಿಕೆ ನೆಚ್ಚಿಕೊಂಡಿರುವವರಿಗೆ ಹೊಡೆತ ಕೊಟ್ಟಿದೆ. ರೇಷ್ಮೆಗೆ ಪ್ರೋತ್ಸಾಹ ಸಿಗುವ ನಿರೀಕ್ಷೆಯಲ್ಲಿ ರೈತರು ಇದ್ದಾರೆ’ ಎಂದು ಸಚಿವರಲ್ಲಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...