ಕರ್ನಾಟಕದ ಗೆಲುವಿನ ಪಯಣ ಪಂಚ ರಾಜ್ಯಗಳಿಗೂ ವಿಸ್ತರಿಸಲಿದೆ: ರಾಹುಲ್‌ ಗಾಂಧಿ  

Date:

Advertisements

ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಿಜೋರಾಂನಲ್ಲಿ ನಡೆಯುವ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಲಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೂ ಅಚ್ಚರಿ ಕಾದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು.

ನವದೆಹಲಿಯಲ್ಲಿ ಅಸ್ಸಾಂನ ಪ್ರತಿದಿನ್ ಮೀಡಿಯಾ ನೆಟ್‌ವರ್ಕ್ ಆಯೋಜಿಸಿದ್ದ ‘ದಿ ಕಾನ್‌ಕ್ಲೇವ್ 2023’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ನಾವು ಏನು ಮಾಡಿದ್ದೇವೆ, ಬಿಜೆಪಿಯು ನಿರೂಪಣೆಯನ್ನು ವ್ಯಾಖ್ಯಾನಿಸಲು ಸಾಧ್ಯವಾಗದ ರೀತಿಯಲ್ಲಿ ನಾವು ಚುನಾವಣೆಯನ್ನು ಎದುರಿಸಿದ್ದೇವೆ. ಇಂದು ನೀವು ನೋಡುತ್ತಿರುವ ಸಂಸದ ಬಿಧುರಿ, ತದನಂತರ ಇದ್ದಕ್ಕಿದ್ದಂತೆ ಪ್ರತ್ಯಕ್ಷಗೊಳ್ಳುವ ನಿಶಿಕಾಂತ್ ದುಬೆ. ಬಿಜೆಪಿಯ ಇವರೆಲ್ಲರೂ ಜಾತಿ ಗಣತಿಯ ಕಲ್ಪನೆಯನ್ನು ವಿಚಲಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಜಾತಿ ಗಣತಿ ಕಲ್ಪನೆಯು ಜನರು ಬಯಸುತ್ತಿರುವ ಮೂಲಭೂತ ವಿಷಯ ಎಂದು ಅವರಿಗೆ ತಿಳಿದಿದೆ. ಈ ಗಮನವನ್ನು ಬೇರೆ ಸೆಳೆಯುವುದಕ್ಕೆ ಜನರಲ್ಲಿ ಕೋಮು ಭಾವನೆಗಳನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಷಸರ್ಪದ ಸಂತತಿಯ ಸಖ್ಯವೇ ಸುಖವಾಯಿತಾ ಕುಮಾರಣ್ಣ!?

Advertisements

“ಬಿಜೆಪಿಯು ನಮ್ಮ ಉದ್ದೇಶಗಳನ್ನು ವಿಸ್ತರಿಸಲು ಅವಕಾಶ ನೀಡದೆ ವಿಚಲಿತಗೊಳಿಸುವ ಮೂಲಕ ಚುನಾವಣೆಗಳನ್ನು ಗೆಲ್ಲುತ್ತದೆ. ಅದನ್ನು ಹೇಗೆ ಎದುರಿಸಬೇಕೆಂದು ನಾವು ಕಲಿತಿದ್ದೇವೆ. ಈಗ, ಬಿಜೆಪಿ ಏನು ಮಾಡಲು ಪ್ರಯತ್ನಿಸಿದರೂ, ನಾವು ಅವರ ಕುತಂತ್ರವನ್ನು ನಿಯಂತ್ರಿಸುತ್ತೇವೆ. ಕರ್ನಾಟಕ ವಿಧಾನಸಭಾ ಚುನಾವಣೆ ಗೆಲುವಿನ ಮೂಲಕ ಕಾಂಗ್ರೆಸ್ ಮಹತ್ವದ ಪಾಠವೊಂದನ್ನು ಕಲಿತಿದೆ. ಮುಂದಿನ ಪಂಚ ರಾಜ್ಯಗಳಿಗೂ ನಮ್ಮ ಜಯ ಸಾಗಲಿದೆ” ಎಂದು ರಾಹುಲ್‌ ಗಾಂಧಿ ಹೇಳಿದರು.

“ಅದಾನಿ ಅವರು ನಮ್ಮ ದೇಶದ ಪ್ರಮುಖ ಕೈಗಾರಿಕೆಗಳ ನಿಯಂತ್ರಣವನ್ನು ಹೊಂದಿದ್ದಾರೆ. ಅವರು ಮಾಧ್ಯಮದ ಗಮನಾರ್ಹ ಭಾಗವನ್ನು ಸಹ ನಿಯಂತ್ರಿಸುತ್ತಾರೆ. ಬಿಜೆಪಿಯು ಇದರಿಂದ ಗಣನೀಯ ಪ್ರಮಾಣದ ಲಾಭವನ್ನು ಪಡೆಯುತ್ತಿದೆ. ಯಾವುದೇ ಉದ್ಯಮಿ ವಿರೋಧ ಪಕ್ಷವನ್ನು ಬೆಂಬಲಿಸಿದಾಗ ಅವರಿಗೆ ಏನಾಗುತ್ತದೆ ಎಂದು ದಯವಿಟ್ಟು ಅದೇ ಉದ್ಯಮಿಯನ್ನು ಒಮ್ಮೆ ಕೇಳಿ. ಈ ಸವಾಲುಗಳ ನಡುವೆಯೂ ನಾವು ಉತ್ತಮ ಪ್ರದರ್ಶನ ನೀಡುತ್ತಿದ್ದೇವೆ. ನಾವು ಒಂದಾಗಿದ್ದೇವೆ. ವಿರೋಧ ಪಕ್ಷಗಳು ಈ ರೀತಿ ಕೆಲಸ ಮಾಡುವುದನ್ನು ನಾನು ಹಿಂದೆಂದೂ ನೋಡಿಲ್ಲ” ಎಂದು ರಾಹುಲ್‌ ತಿಳಿಸಿದರು.

“ಭಾರತದಲ್ಲಿನ ಪ್ರಮುಖ ಸಮಸ್ಯೆಗಳೆಂದರೆ ಸಂಪತ್ತಿನ ಕೇಂದ್ರೀಕರಣ, ಸಂಪತ್ತಿನಲ್ಲಿ ಭಾರಿ ಅಸಮಾನತೆ, ಬೃಹತ್ ನಿರುದ್ಯೋಗ, ದಲಿತರು, ಒಬಿಸಿ ಮತ್ತು ಬುಡಕಟ್ಟು ಸಮುದಾಯಗಳಿಗೆ ಭಾರಿ ಅನ್ಯಾಯ ಮತ್ತು ಬೆಲೆ ಏರಿಕೆಗಳಾಗಿವೆ. ನಾವು ಭಾರತದ ಕಲ್ಪನೆಯನ್ನು ರಕ್ಷಿಸಲು ಹೋರಾಡುತ್ತಿದ್ದೇವೆ. ಅದಕ್ಕಾಗಿಯೇ ನಾವು ನಮ್ಮ ಹೆಸರನ್ನು ಇಂಡಿಯಾ ಎಂದು ಇಟ್ಟುಕೊಂಡಿದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X