ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದ ಎಬ್ಬಿಸಿದ ‘ಭಯೋತ್ಪಾದಕ’ ಹೇಳಿಕೆ | ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹ

Date:

Advertisements
  • ಬಿಎಸ್‌ಪಿಯ ಮುಸ್ಲಿಂ ಸಂಸದ ದಾನಿಶ್ ಅಲಿಯನ್ನು ಭಯೋತ್ಪಾದಕ ಎಂದು ಕರೆದಿದ್ದ ರಮೇಶ್ ಬಿಧುರಿ
  • ನನ್ನಂತಹ ಚುನಾಯಿತ ಸದಸ್ಯನ ಸ್ಥಿತಿ ಹೀಗಾದರೆ ಸಾಮಾನ್ಯ ವ್ಯಕ್ತಿಯ ಸ್ಥಿತಿ ಏನು? ದಾನಿಶ್ ಅಲಿ

ಬಿಎಸ್‌ಪಿಯ ಮುಸ್ಲಿಂ ಸಂಸದ ದಾನಿಶ್ ಅಲಿಯನ್ನು ಬಿಜೆಪಿಯ ಸಂಸದ ರಮೇಶ್ ಬಿಧುರಿ ಸಂಸತ್ತಿನ ವಿಶೇಷ ಅಧಿವೇಶನದಲ್ಲೇ ‘ಭಯೋತ್ಪಾದಕ’ ಎಂದು ಕರೆದು, ಹೀಯಾಳಿಸಿರುವ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದ ಎಬ್ಬಿಸಿದೆ.

ಬಿಜೆಪಿಯ ದೆಹಲಿ ಸಂಸದನಾಗಿರುವ ರಮೇಶ್ ಬಿಧುರಿ ಅವರು ಲೋಕಸಭೆಯಲ್ಲಿ ತಮ್ಮ ಮಾತಿನ ವೇಳೆ ಸಂಸತ್ತಿನ ಸಹೋದ್ಯೋಗಿ ಬಹುಜನ ಸಮಾಜ ಪಕ್ಷದ ದಾನಿಶ್ ಅಲಿ ಅವರನ್ನು “ಯೇ ಉಗ್ರವಾದಿ, ಯೇ ಆತಂಕ್ವಾದಿ, ಮುಲ್ಲಾ ಆತಂಕವಾದಿ, ಭರ್ವಾ (ವೇಶ್ಯಾವಾಟಿಕೆ ದಂಧೆ ನಡೆಸುವವ) ಮತ್ತು ಕತ್ವಾ (ಮುಂಜಿ ಮಾಡಿಸಿದವ)” ಎಂದು ಹಿಂದಿಯಲ್ಲಿ ಉಲ್ಲೇಖಿಸಿ, ಅವಮಾನಗೈದ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಹೊಸ ಸಂಸತ್‌ನ ಮೊದಲ ಅಧಿವೇಶನದಲ್ಲೇ ನಡೆದ ಈ ಬೆಳವಣಿಗೆ, ಈಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸುದ್ದಿಯಾಗಿದೆ. ಅಲ್-ಜಝೀರಾ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಮಾಧ್ಯಮಗಳು ಇದನ್ನು ವರದಿ ಮಾಡಿದೆ.

Advertisements

ಇನ್ನು ಈ ಘಟನೆಯ ಬಗ್ಗೆ ಲೋಕಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿರುವ ದಾನಿಶ್ ಅಲಿ, “ನನ್ನಂತಹ ಚುನಾಯಿತ ಜನಪ್ರತಿನಿಧಿಯ ಸ್ಥಿತಿಯೇ ಹೀಗಿರುವಾಗ ಸಾಮಾನ್ಯ ವ್ಯಕ್ತಿಯ ಸ್ಥಿತಿ ಏನಾಗಬಹುದು? ಸ್ಪೀಕರ್ ವಿಚಾರಣೆ ನಡೆಸಿ ನನಗೆ ನ್ಯಾಯ ಸಿಗುತ್ತದೆ ಎಂದು ನಂಬುತ್ತೇನೆ. ಒಂದು ವೇಳೆ ನ್ಯಾಯ ಸಿಗದೇ ಇದ್ದರೆ ನಾನು ಸಂಸತ್ತನ್ನು ತೊರೆಯಲು ಯೋಚಿಸುತ್ತಿದ್ದೇನೆ. ಏಕೆಂದರೆ ಇದನ್ನು ನನಗೆ ಸಹಿಸಲಾಗುತ್ತಿಲ್ಲ” ಎಂದು ತಿಳಿಸಿದ್ದಾರೆ.

“ನಾನು ಈಗಾಗಲೇ ಲೋಕಸಭಾ ಸ್ಪೀಕರ್ ಅವರಿಗೆ ನೀಡಿರುವ ಪತ್ರದಲ್ಲಿ ಬಿಜೆಪಿಯ ಸಂಸದ ರಮೇಶ್ ಬಿಧುರಿ ನೀಡಿರುವ ಹೇಳಿಕೆಯನ್ನು ಕಡತದಿಂದ ತೆಗೆಯಲು ಹಾಗೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದೇನೆ. ಈ ಬಗ್ಗೆ ಎಲ್ಲ ದಾಖಲೆಗಳನ್ನು ನೀಡಿದ್ದೇವೆ. ಮೊದಲ ಬಾರಿಗೆ ದೇಶದ ಸಂಸತ್‌ನ ಇತಿಹಾಸದಲ್ಲಿ ಚುನಾಯಿತ ಸಂಸದನೋರ್ವನಿಗೆ ಈ ರೀತಿಯ ಭಾಷೆಯನ್ನು ಬಳಸಲಾಗಿದೆ. ನನ್ನ ಮನಸ್ಸಿಗೆ ತೀವ್ರ ನೋವುಂಟಾಗಿದೆ” ಎಂದು ತಮಗಾದ ನೋವನ್ನು ಮಾಧ್ಯಮಗಳ ಮುಂದೆ ತೋಡಿಕೊಂಡಿದ್ದಾರೆ.

“ಬಿಜೆಪಿ ಹೈಕಮಾಂಡ್ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳುತ್ತಾ ಅಥವಾ ಭಡ್ತಿ ನೀಡಿ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರಾ ಎಂದು ನೋಡಬೇಕಿದೆ. ಏಕೆಂದರೆ ಈ ರೀತಿ ದ್ವೇಷ ಹರಡುವುದು ಅವರ ನಡುವೆ ಪೈಪೋಟಿಯಾಗಿ ಪರಿಣಮಿಸಿದೆ. ಬಿಜೆಪಿ ನಾಯಕರು ಹೊರಗೆ ಮಾತ್ರವಲ್ಲದೆ ಸಂಸತ್ತಿನ ಒಳಗೂ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರೆ ಏನರ್ಥ?” ಎಂದು ಬಿಎಸ್‌ಪಿಯ ಸಂಸದ ದಾನಿಶ್ ಅಲಿ ಕೇಳಿದರು.

ಇದು ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಹೆಚ್ಚಳವಾಗುತ್ತಿರುವ ದ್ವೇಷ ಭಾಷಣಕ್ಕೆ ಸ್ಪಷ್ಟ ಉದಾಹರಣೆ ಎಂದಿರುವ ಹಲವು ನೆಟ್ಟಿಗರು, ಬಿಜೆಪಿ ಸಂಸದನ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಅಧಿವೇಶನದಲ್ಲೇ ಸಂಸದ ದಾನಿಶ್ ಅಲಿಯನ್ನು ‘ಭಯೋತ್ಪಾದಕ’ ಎಂದ ಬಿಜೆಪಿ ಸಂಸದ ರಮೇಶ್ ಬಿಧುರಿ!

ಈ ನಡುವೆ #ArrestRameshBidhuri ಎಂಬ ಹ್ಯಾಷ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದ್ದು, ಬಿಜೆಪಿ ಸಂಸದನನ್ನು ಬಂಧಿಸಿ, ಸಂಸದ ಸ್ಥಾನದಿಂದ ಉಚ್ಛಾಟಿಸುವಂತೆ ಆಗ್ರಹಿಸಿದ್ದಾರೆ.

ಲೋಕಸಭೆಯಲ್ಲಿ ಚಂದ್ರಯಾನದ ಯಶಸ್ಸು ಕುರಿತು ಚರ್ಚೆಯ ಸಂದರ್ಭದಲ್ಲಿ ರಮೇಶ್‌ ಬಿಧುರಿ ಆಕ್ಷೇಪಾರ್ಹ ಪದಗಳನ್ನು ಬಳಸಿರುವ ಬಗ್ಗೆ ಸ್ಪೀಕರ್‌ ಓಂ ಬಿರ್ಲಾ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

“ಇದು ಸಂಪೂರ್ಣ ನಾಚಿಕೆಗೇಡಿನ ಸಂಗತಿ. ರಾಜನಾಥ್ ಸಿಂಗ್ ಅವರ ಕ್ಷಮೆಯಾಚನೆ ಸ್ವೀಕಾರಾರ್ಹವಲ್ಲ ಮತ್ತು ಅರೆಮನಸ್ಸಿನದು. ಇದು ಸಂಸತ್ತಿಗೆ ಮಾಡಿದ ಅವಮಾನ. ಇದು ಅಮಾನತುಗೊಳಿಸಬಹುದಾದ ಸ್ಪಷ್ಟ ಪ್ರಕರಣ. ಬಿಧುರಿ ಹೇಳಿಕೆಯಿಂದ ಪ್ರತಿಯೊಬ್ಬ ಭಾರತೀಯನಿಗೂ ಅವಮಾನವಾಗಿದೆ” ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಈ ನಡುವೆ ಸಂಸದ ರಮೇಶ್ ಬಿಧುರಿಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶೋಕಾಸ್ ನೋಟಿಸ್ ಜಾರಿ ಮಾಡಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X