ರಾಮೇಶ್ವರ ಕೆಫೆ ಬಾಂಬ್ ಪ್ರಕರಣ | ಅಗತ್ಯ ಬಿದ್ದರೆ ತನಿಖೆ ಎನ್‌ಐಎಗೆ ವಹಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Date:

“ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಮೇಶ್ವರ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆರೋಪಿ ಇನ್ನೂ ಸಿಕ್ಕಿಲ್ಲ. ತನಿಖೆ ಚುರುಕಾಗಿ ನಡೆಯುತ್ತಿದೆ” ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಇದೊಂದು ಸಿಲ್ಲಿ ಘಟನೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ” ಎಂದರು.

‘ಬ್ರಾಂಡ್ ಬೆಂಗಳೂರು, ಈಗ ಬಾಂಬ್ ಬೆಂಗಳೂರು ಆಗಿದೆ’ ಎಂದು ಬಿಜೆಪಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಅವರ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು. 2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು. ಇದು ಎನ್.ಐ.ಎ, ಕೇಂದ್ರದ ಗುಪ್ತಚರ ಇಲಾಖೆಯವರ ವೈಫಲ್ಯವಲ್ಲವೇ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ರಾಮೇಶ್ವರಂ ಕೆಫೆ ಪ್ರಕರಣ | ಕಪೋಲಕಲ್ಪಿತ ವರದಿ ಬಿತ್ತರಿಸದಿರಿ: ಮಾಧ್ಯಮಗಳಿಗೆ ಕಮಿಷನರ್ ಎಚ್ಚರಿಕೆ

“ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಬಿಜೆಪಿಯವರು ರಾಜಕೀಯ ಮಾಡಬಾರದು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಹಾಗೂ ಬಿಜೆಪಿ ಕಚೇರಿ ಮುಂದೆಯೇ ಸ್ಫೋಟವಾಗಿತ್ತು. ಆಗ ಬಿಜೆಪಿ ಅಧಿಕಾರದಲ್ಲಿದ್ದರು” ಎಂದು ಸಿಎಂ ಸಿದ್ದರಾಮಯ್ಯ ನೆನಪಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯ ಮಲ್ಯ- ಕಳ್ಳನೋ, ಸುಳ್ಳನೋ, ವಂಚಕನೋ ಅಥವಾ ಸಂತನೋ?

ವಿಜಯ ಮಲ್ಯ ಮೇಲಿರುವುದು ಸಾಲ ತೀರಿಸದ ಆರೋಪವೊಂದೇ ಅಲ್ಲ. ಅವರ ಮೇಲೆ...

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಗುಡುಗಿ ಹಾಡಿದ ಕವಿ ಸಿದ್ದಲಿಂಗಯ್ಯ: ಅಗ್ರಹಾರ ಕೃಷ್ಣಮೂರ್ತಿಯವರ ನುಡಿನಮನ

ಜೂ. 11ರಂದು ಕವಿ ಸಿದ್ದಲಿಂಗಯ್ಯನವರು ಇಲ್ಲವಾದ ದಿನ. ಅವರೊಂದಿಗೆ ಒಡನಾಡಿದ ಅಗ್ರಹಾರ...

ದೆಹಲಿ ಮಾಜಿ ಸಿಎಂ ಆತಿಶಿ ಬಂಧಿಸಲಾಗಿದೆ ಎಂದ ಎಎಪಿ: ಪೊಲೀಸರ ನಕಾರ

ದೆಹಲಿಯ ಕಲ್ಕಾಜಿಯ ಭೂಮಿಹೀನ್ ಶಿಬಿರದ ನಿವಾಸಿಗಳನ್ನು ಭೇಟಿ ಮಾಡಲು ಹೋದಾಗ ದೆಹಲಿ...

Download Eedina App Android / iOS

X