ರಾಮೇಶ್ವರಂ ಕೆಫೆ ಸ್ಫೋಟ ಘಟನೆಗೆ ಕಾಂಗ್ರೆಸ್‌ನ ಓಲೈಕೆ ರಾಜಕಾರಣವೇ ಕಾರಣ: ವಿಪಕ್ಷ ನಾಯಕ ಆರ್.ಅಶೋಕ್

Date:

  • ಬ್ರ್ಯಾಂಡ್ ಬೆಂಗಳೂರು ರೂಪಿಸದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ
  • ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ

“ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಘಟನೆ ನಡೆದಿದೆ” ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

- Advertisement -

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಅವರು, “ನಾವೆಲ್ಲರೂ ತಲೆತಗ್ಗಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಂತಿಯ ತೋಟವನ್ನು ಕೆಡಿಸುವ ಭಯೋತ್ಪಾದಕ ಚಟುವಟಿಕೆ ರಾಜಧಾನಿಯಲ್ಲಿ ನಡೆದಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ತಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಬೇಕು. ನೀವು ಮತ‌ ಹಾಕಿ, ನಾವು ನಿಮ್ಮನ್ನು ರಕ್ಷಿಸುತ್ತೇವೆ ಎಂಬಂತಹ ಮನಸ್ಥಿತಿಯನ್ನು ಸೃಷ್ಟಿಸಲಾಗಿದೆ. ಈ ಮೂಲಕ ಭಯೋತ್ಪಾದಕ ತಂಡಕ್ಕೆ ರಹದಾರಿ ನೀಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ. ಬಾಂಬ್ ಬೆಂಗಳೂರು ಎಂಬ ಕಳಂಕವನ್ನು ತರುವುದು ಬೇಡ. ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ದೇಶ, ವಿದೇಶಗಳ ಕಂಪನಿಗಳ ಜನರು ಬರುತ್ತಾರೆ. ಬೆಂಗಳೂರಿನ ವರ್ಚಸ್ಸು ಕಡಿಮೆ ಮಾಡಿ, ಅಭದ್ರತೆ ಮೂಡಿಸಿ, ಹೂಡಿಕೆ ಇಳಿಕೆ ಮಾಡಲು ಭಯೋತ್ಪಾದಕರು ಯೋಜಿಸಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ. ಮುಸ್ಲಿಂ ಸಂಘಟನೆಗಳ ಪ್ರಕರಣ ಹಿಂಪಡೆಯುವಿಕೆ, ಶಿವಮೊಗ್ಗ ಹಾಗೂ ಕೋಲಾರದ ಘಟನೆಗೆ ಕ್ರಮ ವಹಿಸದಿರುವುದು ಮೊದಲಾದವುಗಳಿಂದಾಗಿಯೇ ಇಂತಹ ಅನಾಹುತ ನಡೆಯುತ್ತಿದೆ” ಎಂದು ಆರ್ ಅಶೋಕ್ ಆರೋಪಿಸಿದ್ದಾರೆ.

“ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ನಾನು ವಿಧಾನಸಭೆಯಲ್ಲಿ ಮಾತನಾಡಿದ್ದೆ. ಪಾಕಿಸ್ತಾನ ಜಿಂದಾಬಾದ್ ಎಂದರೂ ಕಾಂಗ್ರೆಸ್ ಶಾಸಕರು ಅವರ ಪರವಾಗಿ ನಿಂತರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಂತೂ ಇದು ತಿರುಚಿದ ವೀಡಿಯೋ ಎಂದಿದ್ದಾರೆ. ಕುಕ್ಕರ್ ಬಾಂಬ್ ಸ್ಫೋಟಿಸಿದವರನ್ನು ಬ್ರದರ್ ಎನ್ನುವ ಇವರು, ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಮಾಡಿದವರನ್ನು ಅಂಕಲ್ ಎನ್ನಬಹುದು.‌ ದಯವಿಟ್ಟು ರಾಜ್ಯದ ಘನತೆಗೆ ಧಕ್ಕೆ ತರದೆ ಭದ್ರತೆ ಬಗ್ಗೆ ಗಮನಹರಿಸಿ” ಎಂದು ಹೇಳಿಕೆ ನೀಡಿದರು.

“ಆಡಳಿತ ಪಕ್ಷದ ಮೇಲೆ ದೊಡ್ಡ ಜವಾಬ್ದಾರಿ ಇದೆ. ಪದೇ ಪದೆ ಇಂತಹ ಘಟನೆ ನಡೆದಾಗ ಶಾಂತಿ‌ ಕದಡುತ್ತದೆ. ಕೂಡಲೇ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು. ಗುಪ್ತಚರ ದಳ ಬದುಕಿದ್ದರೆ, ಸರ್ಕಾರ ಬದುಕಿದ್ದರೆ ಕೂಡಲೇ ಕ್ರಮ ಕೈಗೊಳ್ಳಲಿ. ಮತ ರಾಜಕಾರಣ ಬಿಟ್ಟು ಕ್ರಮ ವಹಿಸಿ. ದೇಶದ್ರೋಹದ ಸಂದರ್ಭದಲ್ಲೂ ಎಚ್ಚರವಾಗದಿದ್ದರೆ ಜನರು ಕ್ಷಮಿಸಲ್ಲ. ಸರ್ಕಾರ ಕ್ರಮ ಕೈಗೊಳ್ಳಲು ನಾವೆಲ್ಲರೂ ಸಂಪೂರ್ಣ ಸಹಕಾರ ನೀಡುತ್ತೇವೆ” ಎಂದು ಆರ್.ಅಶೋಕ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...