ರಾಮೇಶ್ವರಂ ಕೆಫೆ ಸ್ಫೋಟ | ಪ್ರಕರಣದ ಚಾರ್ಜ್‌ಶೀಟ್‌ ಸಲ್ಲಿಕೆ, ಬಿಜೆಪಿ ಕಚೇರಿ ಸ್ಫೋಟಕ್ಕೆ ನಡೆದಿತ್ತು ಸಂಚು!

Date:

ಬೆಂಗಳೂರಿನ ವೈಟ್‌ ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.

- Advertisement -

ಆರೋಪಿಗಳಾದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹಮದ್ ತಾಹಾ, ಮಾಜ್ ಮುನೀರ್ ಅಹಮದ್ ಹಾಗೂ ಮುಝಮಿಲ್ ಷರೀಫ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಂದೇ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸ್ಫೋಟಿಸಲು ಯತ್ನಿಸಿ ವಿಫಲವಾಗಿದ್ದರು. ಬಳಿಕ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಿದ್ದರು ಎಂಬ ಅಂಶ ಚಾರ್ಜ್ ಶೀಟ್‌ನಲ್ಲಿ ಬಹಿರಂಗವಾಗಿದೆ.

ಶಿವಮೊಗ್ಗ ಮೂಲದವರಾಗಿದ್ದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹಮದ್ ತಾಹಾ ಐಸಿಸ್‌ನಿಂದ ಪ್ರೇರಿತರಾಗಿದ್ದು, ಮುಸ್ಲಿಂ ಯುವಕರನ್ನು ಐಸಿಸ್‌ನತ್ತ ಸೆಳೆಯುತ್ತಿದ್ದರು. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹಮದ್ ಹಾಗೂ ಮುಝಮಿಲ್ ಷರೀಫ್​ನನ್ನು ಸಹ ಅದೇ ರೀತಿ ಐಸಿಸ್‌ನ ವಿಚಾರಗಳೆಡೆಗೆ ಸೆಳೆಯಲಾಗಿತ್ತು ಎಂದು ಉಲ್ಲೇಖಿಸಲಾಗಿದೆ.

ಕಳೆದ ಮಾರ್ಚ್‌ 1 ರಂದು ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರು ಬಿಸಿಬಿಸಿಯಾದ ಊಟವನ್ನ ಸವಿಯುತ್ತಿದ್ದ ವೇಳೆ ಹೋಟೆಲ್‌ ಒಳಗಡೆ ಏಕಾಏಕಿ ಸ್ಫೋಟಗೊಂಡಿತ್ತು. ಹೋಟೆಲ್ ಸಿಬ್ಬಂದಿ ಫಾರುಖ್, ಅಮೇಜನ್ ಕಂಪನಿಯ ಸಿಬ್ಬಂದಿ ದೀಪಾಂಶು, ಸ್ವರ್ಣಾಂಬ, ಮೋಹನ್, ನಾಗಶ್ರೀ, ಮೋಮಿ, ಬಲರಾಮ್ ಕೃಷ್ಣನ್, ನವ್ಯಾ, ಶ್ರೀನಿವಾಸ್ ಗಾಯಗೊಂಡಿದ್ದರು.

ಪ್ರಕರಣದ ತನಿಖೆ ಚುರುಕುಗೊಳಿಸಿದ ಎನ್‌ಐಎ ಅಧಿಕಾರಿಗಳು ಆರೋಪಿ ಟೋಪಿವಾಲನ ಬೆನ್ನತ್ತಿ ದಿಕ್ಕು ದಿಕ್ಕಿನಲ್ಲೂ ತನಿಖೆ ನಡೆಸಿ ಉಳಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...