ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಇದು ಟ್ರಯಲ್, ಮುಂದೆ ಸರಣಿ ಸ್ಫೋಟದ ಸಂಚು ಇರುವಂತಿದೆ ಎಂದ ಸಿ.ಟಿ ರವಿ

Date:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಸಿ.ಟಿ ರವಿ ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ, “ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ವಿಚಾರವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಘಟನೆಯನ್ನು ಗಮನಿಸಿದರೆ, ಇದು ಟ್ರಯಲ್, ಮುಂದೆ ಸರಣಿ ಸ್ಫೋಟದ ಸಂಚು ಇರುವಂತೆ ಕಾಣುತ್ತಿದೆ. ಹೀಗಾಗಿ, ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಈ ಹಿಂದೆ ಬಾಂಬ್‌ ಸ್ಪೋಟದ ಸುದ್ದಿಗಳು ಉತ್ತರ ಭಾರತದಲ್ಲಿ ಕೇಳಿ ಬರುತ್ತಿದ್ದವು. ಈಗ, ಅಲ್ಲಿ ಇಂತಹ ಪ್ರಕರಣಗಳು ಕಂಡುಬರುತ್ತಿಲ್ಲ. ಆದರೆ, ಕರ್ನಾಟಕ, ಕೇರಳ, ತೆಲಂಗಾಣದಲ್ಲಿ ಪ್ರಕರಣಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, “ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ. ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣೀ ರೂಪದಲ್ಲಿ ವರದಿಯಾಗುತ್ತಲೇ ಇವೆ, ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ ಬಂದು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದೀಗ ಜನನಿಬಿಡ ಹೋಟೆಲ್ ಪ್ರವೇಶಿಸಿ ಬಾಂಬ್ ಸ್ಫೋಟಿಸಿ ಅಮಾಯಕರನ್ನು ಗಾಯಗೊಳಿಸಿ ತೀವ್ರ ಆತಂಕದ ವಾತಾವರಣ ಸೃಷ್ಟಿಸಿದೆ” ಎಂದು ಹೇಳಿದ್ದಾರೆ.

“ಸುಭದ್ರ ಕರ್ನಾಟಕಕ್ಕೆ ಗಂಡಾಂತರದ ಆತಂಕ ತರುವ ಚಟುವಟಿಕೆಗಳನ್ನು ಬಗ್ಗುಬಡಿಯುವಲ್ಲಿ ಮೀನಾಮೇಷ ಎಣಿಸುತ್ತಾ ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ಲೆಕ್ಕಾಚಾರದ ಹೆಜ್ಜೆಗಳ ದಾರಿ ಬದಲಿಸಿಕೊಳ್ಳದೇ ಹೋದರೆ ಅಧಿಕಾರದಿಂದ ಕೆಳಗಿಳಿಸಿ ವಿಧಾನ ಸೌಧದಿಂದ ಹೊರ ಕಳಿಸುವ ದಾರಿ ತೋರಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ” ಎಂದು ಘಟನೆಯನ್ನು ರಾಜಕೀಯಗೊಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...

ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ...