ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

Date:

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿದರು.

- Advertisement -

ರಾಮನಗರದ ಬಿಡದಿ ಸಮೀಪದ ಕೇತಿಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿ, “ರಣಹೇಡಿ ನಾನಲ್ಲ, ರಣಹೇಡಿಗಳು ಅವರು, ಕುತಂತ್ರದ ರಾಜಕಾರಣಿಗಳು ಅವರು. ಯಾರು ರಣಹೇಡಿ ಎಂದು ಮುಂದೆ ಚರ್ಚೆ ಮಾಡೋಣ. ರಣಹೇಡಿ ಸಂಸ್ಕೃತಿ ಡಿ.ಕೆ.ಶಿವಕುಮಾರ್ ಅವರದ್ದು. ನಾವು ನೇರವಾಗಿಯೇ ಚುನಾವಣೆ ಮಾಡುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಾತ್ರೋರಾತ್ರಿ ಹೋಗಿ ಕಳ್ಳಕಳ್ಳವಾಗಿ ಜನರಿಗೆ ಕ್ಯೂ ಆರ್ ಕೋಡ್ ಇರುವ ಗಿಫ್ಟ್ ಕೂಪನ್ ಗಳನ್ನು ಹಂಚಿಕೆ ಮಾಡಿದ ವ್ಯಕ್ತಿ ರಣಹೇಡಿತನದ ಬಗ್ಗೆ ಮಾತನಾಡುತ್ತಿದ್ದಾರೆ. ಗಿಫ್ಟ್ ಕೂಪನ್ ಬಗ್ಗೆ ಚುನಾವಣಾ ಆಯೋಗಕ್ಕೆ ಈಗ ದೂರು ಕೊಟ್ಟರೂ ಏನು ಪ್ರಯೋಜನ ಇಲ್ಲ. ಹಿಂದೆ ಹಲವು ಬಾರಿ ದೂರು ಕೊಟ್ಟರೂ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ದೂರು ಕೊಟ್ಟರೆ ಏನು ಉಪಯೋಗ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಕ್ತವಾಗಿ ಗಿಫ್ಟ್, ಹಣ ಹಂಚುವ ವ್ಯವಸ್ಥೆಯನ್ನೇ ತನ್ನಿ 

“ನಾನು ಚುನಾವಣಾ ಆಯೋಗಕ್ಕೆ ಕೇಳುತ್ತೇನೆ. ಈ ರೀತಿ ಚುನಾವಣೆ ಮಾಡುವ ಬದಲು ನೇರವಾಗಿ, ಮುಕ್ತವಾಗಿ ಗಿಫ್ಟ್, ಹಣ ಹಂಚುವ ವ್ಯವಸ್ಥೆಯನ್ನೇ ತನ್ನಿ. ಅವರವರ ಶಕ್ತಿ ಅನುಸಾರ ಹಣ ಹಂಚಿ ವೋಟು ಪಡೆಯುವ ವ್ಯವಸ್ಥೆ ಜಾರಿಗೆ ತನ್ನಿ. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಈ ರೀತಿಯ ವ್ಯವಸ್ಥೆ ಬಂದರೆ ಕಾಂಗ್ರೆಸ್ ನವರಿಗೆ ಒಳ್ಳೆಯದು” ಎಂದು ವ್ಯಂಗ್ಯವಾಡಿದರು.

“ಈ ರೀತಿ ಅಡ್ಡದಾರಿಯಲ್ಲಿ, ವಾಮಮಾರ್ಗದಲ್ಲಿ ಮತ ಪಡೆಯುವ ಮಹಾನುಭಾವರು ಜನರಿಗೆ ಬುದ್ದಿ ಹೇಳಿದ್ದೇ ಹೇಳಿದ್ದು. ಈ ಮಹಾನುಭಾವ ಇಲ್ಲಿ ಇದ್ದಾರಲ್ಲ, ದೇಶದ ಬಗ್ಗೆ ಚರ್ಚೆ ಮಾಡ್ತಾರಲ್ಲ ಈ ಇಬ್ಬರು ಮಹಾನುಭಾವರು..ಇವರ ಬಗ್ಗೆ ಚುನಾವಣಾ ಆಯೋಗ ಏನು ಮಾಡುತ್ತಿದೆ?” ಎಂದು ಡಿಕೆಶಿ ಸಹೋದರರ ಹರಿಹಾಯ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...