ರನ್ಯಾ ರಾವ್ ಕೇಸ್‌ | ಬೆಂಕಿ ಇಲ್ಲದೆ ಹೊಗೆ ಆಡಲ್ಲ, ಸತ್ಯಾಂಶ ಹೊರ ಬರಲಿ: ಬಿ ವೈ ವಿಜಯೇಂದ್ರ

Date:

ರಾಜ್ಯವು ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ. ಈ ಸರಕಾರದ ಆಡಳಿತ ವೈಖರಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ನಟಿ ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣ ನೋಡಿದರೆ ಬೆಂಕಿ ಇಲ್ಲದೆ ಹೊಗೆ ಆಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

- Advertisement -

ಬಾಳೆಹೊನ್ನೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿ, “ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದೆ. ಪ್ರಮುಖ ಪತ್ರಿಕೆಗಳಲ್ಲೂ ಈ ವಿಷಯ ಪ್ರಕಟಗೊಂಡಿದೆ. ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ. ಇಂಥ ಗಂಭೀರ ಪ್ರಕರಣವು ಯಾರದೋ ಬೆಂಬಲ ಇಲ್ಲದೆ ಆಗಲು ಸಾಧ್ಯ ಇಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

“ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು ಎಂಬುದು ಒಂದು ಕಡೆಯಾದರೆ, ಸಚಿವರ ಬೆಂಬಲದ ವಿಷಯವೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸತ್ಯಾಂಶ ತನಿಖೆ ನಂತರ ಹೊರಕ್ಕೆ ಬರಲಿದೆ” ಎಂದು ಹೇಳಿದರು.

“ಕಾಂಗ್ರೆಸ್ ಸರಕಾರವು ಅಧಿಕಾರ ವಹಿಸಿಕೊಂಡು 20 ತಿಂಗಳಾಗಿದೆ. ರಸ್ತೆಗಳು, ಆಸ್ಪತ್ರೆಗಳು, ಶಾಲಾ ಕೊಠಡಿಗಳನ್ನೂ ಕೊಡದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ. ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಅನುದಾನ ನೀಡದ ಕಾರಣ ಶಾಸಕರು ಒಂದುರೀತಿ ಅಸಹಾಯಕರಾಗಿದ್ದಾರೆ. ಕ್ಷೇತ್ರಗಳಲ್ಲಿ ಓಡಾಡಲಾಗದ ಸ್ಥಿತಿ ಇದೆ ಎಂಬ ಭಾವನೆಯನ್ನು ಆಡಳಿತ ಪಕ್ಷದ ಶಾಸಕರೂ ತೋಡಿಕೊಂಡಿದ್ದಾರೆ” ಎಂದರು.

“ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಎಲ್ಲ ಸಂದರ್ಭದಲ್ಲೂ ಯಡಿಯೂರಪ್ಪ ಅವರ ಪರವಾಗಿ ಧ್ವನಿ ಎತ್ತಿದವರು. ಈ ಪುಣ್ಯಕ್ಷೇತ್ರದ ಕಾರ್ಯಕ್ರಮ ನಿಮಿತ್ತ ಬಂದಿದ್ದೇನೆ ಎಂದ ಅವರು, ಜಗದ್ಗುರುಗಳಿಗೆ ವಿಜಯೇಂದ್ರ ಬಗ್ಗೆ ಸಾಕಷ್ಟು ನಿರೀಕ್ಷೆ, ಅಪೇಕ್ಷೆ ಇದೆ. ವಿಜಯೇಂದ್ರ ಅವರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬೇಕೆಂಬ ಸಂದೇಶವನ್ನು ಜಗದ್ಗುರುಗಳು ನೀಡಿದ್ದಾರೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

“ಕೇಂದ್ರದ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಎಲ್ಲವೂ ತಾರ್ಕಿಕ ಅಂತ್ಯಕ್ಕೆ ಬರುವ ಸಂದರ್ಭದಲ್ಲಿ ಸಮಾಜದ ಸಭೆಗಳನ್ನು ಮಾಡುವುದು ಸರಿಯಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. ಇದು ಬೂಟಾಟಿಕೆಯ ಮಾತಲ್ಲ; ನಾನು ರಾಜ್ಯಾಧ್ಯಕ್ಷನಾಗಿರುವ ಈ ಸಂದರ್ಭದಲ್ಲಿ ಈ ರೀತಿಯ ಜಾತಿ ಸಮಾವೇಶ ಮಾಡುವುದು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಲಾಭ ತರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...