ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೂನ್ 19ರಿಂದ ನಾಲ್ಕು ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ಕಸ್ಟಡಿ ಸಮಯ ಮುಗಿದ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ಕೆ ಎನ್ ಶಿವಕುಮಾರ್ ಅವರ ಮುಂದೆ ಹಾಜರುಪಡಿಸಿದ ಎಸ್‌ಐಟಿಯು, ಅವಧಿ ವಿಸ್ತರಣೆ ಕೋರಲಿಲ್ಲ. ಎಸ್‌ಐಟಿಯು ಕಸ್ಟಡಿ ಅವಧಿ ವಿಸ್ತರಣೆ ಕೋರದ ಹಿನ್ನೆಲೆಯಲ್ಲಿ ಆರೋಪಿ ಪ್ರಜ್ವಲ್‌ರನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ನೀಡಿ, ಆದೇಶಿಸಿದೆ.
ಇದನ್ನು ಓದಿದ್ದೀರಾ? ಸಂಸದರಾಗಿ ಮೋದಿ ಪ್ರಮಾಣ ವಚನ: ಸಂವಿಧಾನದ ಪ್ರತಿ ಪ್ರದರ್ಶಿಸಿ ನೆನಪಿಸಿದ ‘ಇಂಡಿಯಾ’ ಒಕ್ಕೂಟ
ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಇಂದು ಸಂಜೆಯೇ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲು ಎಸ್‌ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
