ಅತ್ಯಾಚಾರ ಪ್ರಕರಣ | ಯಾವುದೇ ಕ್ಷಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನ ಸಾಧ್ಯತೆ

Date:

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಹೆಚ್‌ ಡಿ ರೇವಣ್ಣ ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಸಿದ್ಧತೆ ನಡೆಸಿದೆ.

- Advertisement -

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬಂದಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣ ಭಾನುವಾರ ಸಂಜೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

‌ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಹೆಚ್‌ ಡಿ ರೇವಣ್ಣ ಅವರನ್ನು ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲೇ ಶನಿವಾರ ಸಂಜೆ ಎಸ್‌ಐಟಿ ಬಂಧಿಸಿತ್ತು. ಇನ್ನೂ ಹೆಚ್ಚಿಗೆ ತಲೆಮರೆಸಿಕೊಂಡು ಓಡಾಡಿದ್ರೆ ಕುಟುಂಬದ ವರ್ಚಸ್ಸಿಗೆ ಮತ್ತಷ್ಟು ಹಾನಿಯಾಗಬಹುದೆಂದು ಕುಟುಂಬ ಸದಸ್ಯರ ಸಲಹೆ ಮೇರೆಗೆ ಪ್ರಜ್ವಲ್‌ ಎಸ್‌ಐಟಿಗೆ ಶರಣಾಗಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜ್ವಲ್‌ ರೇವಣ್ಣ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆ ಹೆಚ್ಚಿದ್ದು, ಎಸ್‌ಐಟಿ ತಂಡ ವಿಮಾನ ನಿಲ್ದಾಣದಲ್ಲಿ ಬಂಧಿಸಲು ಬಿಡು ಬಿಟ್ಟಿದೆ. ಹಾಗೆಯೇ ಮಂಗಳೂರು ವಿಮಾನ ನಿಲ್ದಾಣದಲ್ಲೂ ಪ್ರಜ್ವಲ್‌ ಆಗಮಿಸುವ ಮಅತುಗಳು ಕೇಳಿಬಂದಿದ್ದು, ಅಲ್ಲೂ ಕೂಡ ಎಸ್‌ಐಟಿ ಅಧಿಕಾರಿಗಳು ಬಂಧಿಸಲು ಸಜ್ಜಾಗಿದ್ದಾರೆ.

ಪ್ರಜ್ವಲ್‌ ದುಬೈಯಿಂದ  ಬರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲುಕೌಟ್‌ ನೋಟಿಸ್‌ ಜಾರಿಯಾದ ಹಿನ್ನೆಲೆಯಲ್ಲಿ ವಿಮಾನದಿಂದ ಇಳಿದ ಕೂಡಲೇ ಬಂಧನವಾಗುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...