ಮೋದಿ ಪ್ರಗತಿ ಶ್ಲಾಘಿಸಿದ ರಶ್ಮಿಕಾ: ಮಣಿಪುರ ಭೇಟಿ ಯಾವಾಗ, ಐಟಿ ಭಯವೇ ಎಂದ ನೆಟ್ಟಿಗರು!

Date:

ಕಳೆದ 10 ವರ್ಷಗಳಲ್ಲಿ ದೇಶದಲ್ಲಾಗಿರುವ ಪ್ರಗತಿಯನ್ನು, ವಿಶೇಷವಾಗಿ ಮೂಲಸೌಕರ್ಯ ಯೋಜನೆಗಳಲ್ಲಿ ಆಗಿರುವ ಬದಲಾವಣೆಯನ್ನು ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಶ್ಲಾಘಿಸಿದ್ದಾರೆ.

- Advertisement -

ಇದರ ವಿಡಿಯೋವನ್ನು ‘ಪುಷ್ಪಾ’ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ತನ್ನ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಮಣಿಪುರ, ಲಡಾಖ್‌ಗೆ ಭೇಟಿ ಯಾವಾಗ ಎಂದು ಕೆಲವು ನೆಟ್ಟಿಗರು ಪ್ರಶ್ನಿಸಿದರೆ, ಇನ್ನು ಕೆಲವರು ಐಟಿ ದಾಳಿಯ ಉಲ್ಲೇಖ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ವರ್ಷದ ಜನವರಿಯಲ್ಲಿ ಅಧಿಕೃತವಾಗಿ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವ ಶೇವಾ ಅಟಲ್ ಸೇತು ಎಂದು ಹೆಸರಿಸಲಾದ 22 ಕಿಮೀ ಉದ್ದದ ಸಮುದ್ರ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಈ ಸೇತುವೆಯ ನಿರ್ಮಾಣವನ್ನು ನಟಿ ಶ್ಲಾಘಿಸಿದ್ದಾರೆ. ಹಿಂದಿನ ಎರಡು ಗಂಟೆಗಳ ಪ್ರಯಾಣವನ್ನು ಕೇವಲ 20 ನಿಮಿಷಗಳಿಗೆ ಕಡಿತಗೊಳಿಸುತ್ತದೆ ಎಂದು ಹೇಳಿದ್ದಾರೆ.

ನೆಟ್ಟಿಗರು ಪ್ರತಿಕ್ರಿಯಿಸಿದ್ದು ಹೇಗೆ?

ರಶ್ಮಿಕಾ ಪೋಸ್ಟ್ ಮಾಡಿರುವ ವಿಡಿಯೋಗೆ 4.6 ಮಿಲಿಯನ್ ವೀವ್ಸ್ ಲಭಿಸಿದ್ದು, 3.9 ಸಾವಿರ ಕಾಮೆಂಟ್‌ಗಳನ್ನು ಮಾಡಲಾಗಿದೆ. ಸಂಘಿ ಪ್ರಿನ್ಸ್ ಎಂಬ ಎಕ್ಸ್‌ ಬಳಕೆದಾರರೊಬ್ಬರು ‘ನ್ಯಾಷನಲ್ ಕ್ರಷ್ ಈಗ ನ್ಯಾಷನಲಿಸ್ಟ್ ಆಗುತ್ತಿದ್ದಾರೆ’ ಎಂದು ಹೇಳಿದ್ದರೆ, ಹಲವಾರು ನೆಟ್ಟಿಗರು ನಟಿ ರಶ್ಮಿಕಾರ ಮಣಿಪುರ ಭೇಟಿ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಇನ್ನು ಇಡಿ ದಾಳಿಯ ಬಗ್ಗೆಯೂ ನೆಟ್ಟಿಗರು ಪ್ರಸ್ತಾಪಿಸಿದ್ದಾರೆ.

ರಶ್ಮಿಕಾ

“ರಶ್ಮಿಕಾ ನಿಮಗೆ ನಾಚಿಕೆಯಾಗಬೇಕು. ಈ ಅಟಲ್‌ಸೇತು ನಮಗೆ ಉಚಿತವಾಗಿ ನಿರ್ಮಿಸಿದ್ದೇನಲ್ಲ. ನಾವು 19 ಲಕ್ಷ ರೂಪಾಯಿ ಕಾರು ಖರೀದಿಸಿದ ಬಳಿಕ ಆದಾಯ ತೆರಿಗೆಯನ್ನು ಪಾವತಿಸಿದ್ದೇವೆ. ಅದರಲ್ಲಿ 9 ಲಕ್ಷ ರೂಪಾಯಿ ತೆರಿಗೆಯೇ ಆಗಿದೆ. ಪೆಟ್ರೋಲ್ ಮೇಲೆ ಶೇಕಡ 200ರಷ್ಟು ತೆರಿಗೆಯನ್ನು ನಾವು ಪಾವತಿಸುತ್ತೇವೆ. ಸರ್ಕಾರ 17,000 ಕೋಟಿ ರೂಪಾಯಿ ಸಾಲ ಪಡೆದ ಕಾರಣ ಅದನ್ನು ಮರುಪಾವತಿ ಮಾಡಲು ನಾವು 250 ರೂಪಾಯಿ ಟೋಲ್ ಶುಲ್ಕವನ್ನು ಕೂಡಾ ಪಾವತಿ ಮಾಡಬೇಕಾಗುತ್ತದೆ” ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ರಶ್ಮಿಕಾ

ಇನ್ನು ರಶ್ಮಿಕಾ ಮಂದಣ್ಣರ ನಿವಾಸದ ಮೇಲೆ ಐಟಿ ದಾಳಿಯ ಸುದ್ದಿಯ ಸ್ಕ್ರೀನ್‌ಶಾಟ್‌ ಪೋಸ್ಟ್‌ ಮಾಡಿದ ನೆಟ್ಟಿಗರೊಬ್ಬರು, “ದಕ್ಷಿಣ ಭಾರತದಿಂದ ಉತ್ತರ ಭಾರತ, ಇಡಿ ದಾಳಿಯ ಆತಂಕ” ಎಂದು ಗೇಲಿ ಮಾಡಿದ್ದಾರೆ. ಇನ್ನು ಕೆಲವರು ಈ ಜಾಹೀರಾತಿಗೆ ಎಷ್ಟು ಸಂಭಾವನೆ ಲಭಿಸಿದೆ ಎಂದು ಪ್ರಶ್ನಿಸಿದ್ದಾರೆ.

2020ರ ಜನವರಿಯಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಶ್ಮಿಕಾ ಮಂದಣ್ಣ ಕುಟುಂಬಕ್ಕೆ ಸೇರಿದ ಅಘೋಷಿತ ಆದಾಯ 3.94 ಕೋಟಿ ರೂಪಾಯಿಗೆ ಸಂಬಂಧಿಸಿದಂತೆ ಈ ದಾಳಿಯನ್ನು ನಡೆಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...