ಆರ್‌ಸಿಬಿ ದುರಂತ | ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದೆ: ಡಿ.ಕೆ. ಶಿವಕುಮಾರ್

Date:

Advertisements

“ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್‌ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡ ಕಾರಣಕ್ಕೆ ನಾನು ಆ ಕಾರ್ಯಕ್ರಮಕ್ಕೆ ಹೋಗಿ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸಭೆಯಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಉತ್ತರ ನೀಡುವ ವೇಳೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಿಲ್ಲವಾದರೆ ಉಪಮುಖ್ಯಮಂತ್ರಿಗಳು ಹೋಗಿದ್ದು ಯಾಕೆ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಅವರು ಸ್ಪಷ್ಟನೆ ನೀಡಿದರು.

“ನನ್ನನ್ನು ಪದೇ ಪದೆ ನೆನೆಯದಿದ್ದರೆ ನಿಮಗೆ ಸಮಾಧಾನ ಆಗುವುದಿಲ್ಲ. ನಿಮ್ಮ ಪಕ್ಷದವರಿಗೆ ಖುಷಿ ಪಡಿಸಲೂ ಆಗುವುದಿಲ್ಲ. ನಿಮಗೆ ಖುಷಿ ಆಗುವಂತೆ ಉತ್ತರ ಕೊಡಲೂ ಆಗುವುದಿಲ್ಲ” ಎಂದು ಛೇಡಿಸಿದರು.

Advertisements

“ಅಂದು ವಿಧಾನಸೌಧದ ಎದುರು ನಡೆದ ಸರ್ಕಾರಿ ಕಾರ್ಯಕ್ರಮಕ್ಕೆ ಬಂದಿದ್ದ ಕೆಎಸ್‌ಸಿಎ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕ್ರೀಡಾಂಗಣಕ್ಕೆ ಹೋಗಲು ಸಾಧ್ಯವಾಗದೇ ಹತಾಶರಾಗಿದ್ದರು. ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸುವಂತೆ ನೀವೇ ಬಂದು ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಆಯುಕ್ತರು ನನ್ನ ಬಳಿ ಮನವಿ ಮಾಡಿದರು. ನಾನು ಕಾರ್ಯಕ್ರಮಕ್ಕೆ ಹೋಗಿದ್ದೂ ನಿಜ, ಅಲ್ಲಿ ಇದ್ದಿದ್ದೂ ನಿಜ, ಆರ್ ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದು ನಿಜ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

“10 ನಿಮಿಷಗಳಲ್ಲಿ ಈ ಕಾರ್ಯಕ್ರಮ ಮುಗಿಸುವಂತೆ ಅವರಿಗೆ ಸೂಚನೆ ಕೊಟ್ಟಿದ್ದೂ ನಿಜ. ಇದೇ ಮಾತನ್ನು ನಾನು ಕುನ್ಹಾ ಅವರ ತನಿಖಾ ತಂಡದ ಮುಂದೆ ಹೇಳಿಕೆ ನೀಡಿದ್ದೂ ನಿಜ. ನಾನು ಅಲ್ಲಿಗೆ ಹೋಗಿಲ್ಲ ಎಂದು ಹೇಳುತ್ತಿಲ್ಲ. ಅಲ್ಲಿಗೆ ಹೋಗಲು ನಿಮ್ಮ ಅನುಮತಿಯ ಅಗತ್ಯವೂ ನನಗಿಲ್ಲ. ಪೊಲೀಸರ ಮನವಿ ಮೇಲೆ ನನ್ನ ಜವಾಬ್ದಾರಿಯಿಂದ ನಾನು ಹೋಗಿ ಅವರಿಗೆ ಸೂಚನೆ ನೀಡಿದ್ದೇನೆ. ಕಪ್‌ಗೆ ಮುತ್ತು ನೀಡಿದ್ದೇನೆ, ಆಟಗಾರರಿಗೆ ಅಭಿನಂದಿಸಿದ್ದೇನೆ” ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X