ಕೃಷಿ ಕಾನೂನುಗಳ ಮರು ಜಾರಿ ಹೇಳಿಕೆ; ಬಿಜೆಪಿ ಸಂಸದೆ ಕಂಗನಾ ಉಚ್ಛಾಟನೆಗೆ ಕಾಂಗ್ರೆಸ್‌ ಆಗ್ರಹ

Date:

2021ರಲ್ಲಿ ರದ್ದಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಮರಳಿ ಜಾರಿಗೊಳಿಸಬೇಕೆಂದು ಹೇಳಿರುವ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

- Advertisement -

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಣಾವತ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ರದ್ದಾದ ಕೃಷಿ ಕಾನೂನುಗಳನ್ನು ಮರಳಿ ತರುವ ಯಾವುದೇ ಪ್ರಯತ್ನಗಳಿಗೆ ಕಾಂಗ್ರೆಸ್‌ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ನಾಚನ್ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ ಸ್ಥಳೀಯ ಜಾತ್ರೆಯಲ್ಲಿ ಕಂಗನಾ ಭಾವಹಿಸಿ ಮಾತನಾಡಿದ್ದಾರೆ. “ಕಂಗನಾ ಹೇಳಿಕೆ ವಿವಾದಕ್ಕೆ ಸಿಲುಕಬಹುದು ಎಂದು ನನಗೆ ತಿಳಿದಿದೆ. ಮೂರು ಕೃಷಿ ಕಾನೂನುಗಳನ್ನು ಮರಳಿ ತರಬೇಕು. ಆ ಕಾನೂನುಗಳು ರೈತರ ಕಲ್ಯಾಣ-ಆಧಾರಿತ ಕಾನೂನುಗಳೆಂದು ನಾನು ನಂಬುತ್ತೇನೆ. ರೈತರು ಈ ಕಾನೂನುಗಳ ಜಾರಿಗೆ ಒತ್ತಾಯಿಸಬೇಕು” ಎಂದು ಹೇಳಿದ್ದಾರೆ.

ಕಂಗನಾ ಹೇಳಿಕೆ ಖಂಡಿಸಿ ಬಿಜೆಪಿಯನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ. “ಕಂಗನಾ ಅವರು ಕೃಷಿ ಕಾನೂನುಗಳನ್ನು ಮರಳಿ ತರಬೇಕೆಂದು ಪ್ರತಿಪಾದಿಸಿದ್ದಾರೆ. ಒಂದು ವರ್ಷದ ಸುದೀರ್ಘ ರೈತ ಹೋರಾಟದ ವೇಳೆ, 750ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದರೂ ಬಿಜೆಪಿ ರೈತ ವಿರೋಧಿ ನಿಲುವು ಅನುಸರಿಸುತ್ತಿದೆ. 750 ರೈತರು ಹುತಾತ್ಮರಾದ ನಂತರವೂ ಬಿಜೆಪಿ ಮತ್ತು ಮೋದಿ ಸರ್ಕಾರ ಪಾಠ ಕಲಿತಿಲ್ಲ. ಅವರು ರೈತ ವಿರೋಧಿ ಕರಾಳ ಕಾನೂನುಗಳ ಮರು-ಅನುಷ್ಠಾನಕ್ಕೆ ಯತ್ನಿಸುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ಸೇರಿದಂತೆ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ವಕ್ತಾರ ಶಕ್ತಿಸಿನ್ಹ್ ಗೋಹಿಲ್ ಅವರು ಕಂಗನಾ ಹೇಳಿಕೆಯನ್ನು ಖಂಡಿಸದ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. “ಪ್ರಧಾನಿ ಮೋದಿಯವರು ಆಕೆಯ ಹೇಳಿಕೆಯನ್ನು ಯಾಕೆ ಖಂಡಿಸಿಲ್ಲ? ಆಕೆಯ ಹೇಳಿಕೆಯನ್ನು ಬಿಜೆಪಿ ಒಪ್ಪದಿದ್ದರೆ, ಆಕೆಯನ್ನು ಪಕ್ಷದಿಂದ ಯಾಕೆ ಉಚ್ಚಾಟಿಸಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ಕಂಗನಾ ಹೇಳಿಕೆ ವಿಚಾರದಲ್ಲಿ ಬಿಜೆಪಿಯ ಮೌನವು, ತನ್ನ ಪಕ್ಷದ ಕಾಲಾಳುಗಳ ಮೂಲಕ ಕೃಷಿ ಕಾನೂನುಗಳನ್ನು ಮರು ಪರಿಚಯಿಸುವ ಉದ್ದೇಶವನ್ನು ಸೂಚಿಸುತ್ತದೆ. ಕಂಗನಾ ನಿಲುವನ್ನು ಬಿಜೆಪಿ ಖಂಡಿಸುವುದಾದರೆ, ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಗೋಹಿಲ್ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ ಹಲವು ಜಿಲ್ಲೆಗಳಲ್ಲಿ 7 ದಿನಗಳವರೆಗೆ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಹಿಂಗಾರು ಮುಂದುವರಿದಿದ್ದು, ಕರ್ನಾಟಕದ ಪ್ರಮುಖ ಮೂರು ವಲಯಗಳಾದ ಕರಾವಳಿ, ಉತ್ತರ...

ಮಣಿಪುರ ಹಿಂಸಾಚಾರ | ಗುಂಡೇಟಿಗೆ ಮೂವರು ಬಲಿ; ಸಿಎಂ ನಿವಾಸದ ಮುಂದೆ ಶವಗಳನ್ನಿಟ್ಟು ಪ್ರತಿಭಟನೆ

ಮಣಿಪುರದಲ್ಲಿ ಹಿಂಸಾಚಾರದ ಕೃತ್ಯ ಮುಂದುವರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಗೆ ಮೂವರು...

16ನೇ ದಿನಕ್ಕೆ JNU ವಿದ್ಯಾರ್ಥಿಗಳ ಅನಿರ್ದಿಷ್ಟಾವಧಿ ಉಪವಾಸ; ರಾಷ್ಟ್ರಪತಿಗೆ ಪತ್ರ ಬರೆದ ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್

ಕ್ಯಾಂಪಸ್‌ನಿಂದ ತಮ್ಮನ್ನು ಉಚ್ಛಾಟಿಸಿರುವುದೂ ಸೇರಿದಂತೆ ಪ್ರಮುಖ 13 ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ...

ಶಾಂತಿ ಮುಚ್ಚಳಿಕೆ ನೋಟಿಸ್‌ಗೆ ಆಕ್ಷೇಪ: ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿ ನಾಯಕಿ ನೇಹಾ ಬೋರಾ

ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ₹10,000 ಮೊತ್ತದ 'ಶಾಂತಿ ಮುಚ್ಚಳಿಕೆ' (Peace...