- ಸಮಾಜ ಕಲ್ಯಾಣ ಇಲಾಖೆ ಸಚಿವರ ಸಭೆ ನಡೆಸಿದ ಸಚಿವ ಮಹದೇವಪ್ಪ
- ಸಂವಿಧಾನದ ಪ್ರಸ್ತಾವನೆ ಓದಿಸಲು ಪೂರಕ ಆದೇಶ ಹೊರಡಿಸಲು ಸೂಚನೆ
ರಾಜ್ಯದ ಶಾಲಾ- ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ಓದಿಸಲು ಸೂಚಿಸುವ ಪೂರಕ ಆದೇಶ ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಎಚ್.ಸಿ ಮಹದೇವಪ್ಪ ಹೇಳಿದರು.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ ಎಚ್ ಸಿ ಮಹದೇವಪ್ಪ ಅಧಿಕಾರಿಗಳ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು.
ಜೊತೆಗೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ?:ಖಾಸಗಿ ಶಾಲೆ, ಸಂಸ್ಥೆಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಪರಿಶೀಲಿಸಲು ಸಚಿವ ಶಿವರಾಜ್ ತಂಗಡಗಿ ಸೂಚನೆ
ಇದೇ ವೇಳೆ ರಾಜ್ಯದ ದಲಿತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸ್ಕಾಲರ್ಶಿಪ್ ವಿಳಂಬ ಕಾರಣಕ್ಕಾಗಿ ಕಾಲೇಜು ದಾಖಲಾತಿ ಸಮಸ್ಯೆ ಆಗುತ್ತಿದೆ. ಇದನ್ನು ಸರಿಪಡಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.