ಹೆಚ್ಎಂಟಿ, ಕೆಐಒಸಿಎಲ್ ಕುರಿತು ಬಹಿರಂಗ ಚರ್ಚೆಗೆ ಸಿದ್ಧ: ಹೆಚ್‌ ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಸವಾಲು

Date:

  • ಅರಣ್ಯ ಸಚಿವರಿಂದ ಕ್ಷುಲ್ಲಕ ರಾಜಕಾರಣ: ಕುಮಾರಸ್ವಾಮಿ ಆರೋಪ
  • ‘ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ಎಂದು ಬೀದಿಯಲ್ಲಿ ಜಾಗಟೆ’

ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (ಕೆಐಒಸಿಎಲ್)‌ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ ಸಮೇತ ರಾಜ್ಯ ಸರಕಾರದ ಜತೆ ಚರ್ಚೆಗೆ ತಯಾರಿದ್ದೇನೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಗುರುವಾರ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೆಐಒಸಿಎಲ್ ಬಗ್ಗೆ ರಾಜ್ಯ ಸರಕಾರ ರಾಜಕಾರಣ ಮಾಡಬಾರದು. ಸಮಸ್ಯೆ ಇದ್ದರೆ ಕೂತು ಸರಿಪಡಿಸಿಕೊಳ್ಳಬೇಕು. ರಾಜ್ಯದಲ್ಲಿರುವ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳನ್ನು ಉಳಿಸುವ ಬಗ್ಗೆ ನಾನು ಕೆಲಸ ಮಾಡುತ್ತಿದ್ದೇನೆ. ಈ ಬಗ್ಗೆ ನಾನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆಯುತ್ತೇನೆ. ಒಂದು ಸಭೆ ಮಾಡಲಿ. ಅಲ್ಲಿ ದಾಖಲೆಗಳ ಸಮೇತ ನಾನು ಮಾತನಾಡುತ್ತೇನೆ. ಒಂದು ವೇಳೆ ಕೆಐಒಸಿಎಲ್ ತಪ್ಪುಗಳಿದ್ದರೆ ಅದಕ್ಕೆ ಆ ಇಲಾಖೆಯ ಸಚಿವನಾಗಿ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅರಣ್ಯ ಸಚಿವರಿಂದ ಕ್ಷುಲ್ಲಕ ರಾಜಕಾರಣ

“ಅರಣ್ಯ ಸಚಿವರು ಈ ಎರಡೂ ಸಂಸ್ಥೆಗಳ ಬಗ್ಗೆ ಸತ್ಯಕ್ಕೆ ದೂರವಾದ ವಿಷಯಗಳನ್ನು ದಿನನಿತ್ಯವೂ ಮಾಧ್ಯಮಗಳಿಗೆ ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಮೊದಲು ಸಚಿವರು ದಾಖಲೆಗಳನ್ನು ಓದಿ ಅರಿತುಕೊಳ್ಳಬೇಕು. ಆ ನಂತರ ಅವರು ಮಾತನಾಡಿದರೆ ಚೆನ್ನಾಗಿರುತ್ತದೆ. ಅದರ ಹೊರತಾಗಿ ರಾಜ್ಯ ಅಭಿವೃದ್ಧಿ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡಿದರೆ ಅವರನ್ನು ಸಚಿವರು ಎಂದು ಕರೆಯಲಾಗುತ್ತದೆಯೇ?” ಎಂದು ಕಿಡಿಕಾರಿದರು.

300-400 ಕಾರ್ಮಿಕರು ಬೀದಿಗೆ

“ರಾಜ್ಯ ಸರ್ಕಾರದ ಹಠಮಾರಿತನದಿಂದ ಕುದುರೆಮುಖ ಸಂಸ್ಥೆಯ ಸುಮಾರು 300-400 ಕಾರ್ಮಿಕರು ಬೀದಿಯಲ್ಲಿ ನಿಂತಿದ್ದಾರೆ. ಒಂದು ಕಡೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವ ರಾಜ್ಯ ಸರಕಾರ ಮತ್ತೊಂದೆಡೆ ಅಸಹಕಾರ ನೀಡುತ್ತಿದೆ. ಪ್ರತಿಯೊಂದಕ್ಕೂ ಕೇಂದ್ರ ಸರಕಾರವನ್ನು ನಿಂದಿಸಿದರೆ ಉಪಯೋಗವಿಲ್ಲ. ಸಮಸ್ಯೆ ಬಗ್ಗೆ ಸಿಎಂ ಸಭೆ ಕರೆಯಲಿ. ಏನು ಸಮಸ್ಯೆ ಇದೆ ಅಂತಾ ಚರ್ಚೆ ಮಾಡೋಣ. ಸಮಸ್ಯೆ ಇದ್ದರೆ ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಈ ಬಗ್ಗೆ ಪತ್ರ ಬರೆಯುತ್ತೇನೆ” ಎಂದು ಹೇಳಿದರು.

“ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (ಆರ್‌ಎನ್‌ಐಎಲ್‌) ಸಂಕಷ್ಟದಲ್ಲಿ ಇತ್ತು. ನಿರ್ವಹಣಾ ಬಂಡವಾಳ ಇಲ್ಲದೆ ಸೊರಗಿತ್ತು. ಏಕಾಏಕಿ 4500 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಆದರೆ, ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಒತ್ತಾಸೆಯ ಮೇರೆಗೆ ಕೇವಲ ನಲವತ್ತೆಂಟು ಗಂಟೆಗಳ ಒಳಗಾಗಿ ಅಷ್ಟೂ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ನೆರೆ ರಾಜ್ಯದಲ್ಲಿ ನಮಗೆ ಇಂತಹ ಉತ್ತಮ ಸಹಕಾರ ಸಿಗುತ್ತಿದೆ. ಆದರೆ, ನಮ್ಮದೇ ರಾಜ್ಯ ಕರ್ನಾಟಕದಲ್ಲಿ ಸಹಕಾರ ಸಿಗುತ್ತಿಲ್ಲ. ಒಬ್ಬ ಕೇಂದ್ರ ಮಂತ್ರಿಯನ್ನು ನಡೆಸಿಕೊಳ್ಳುವ ರೀತಿಯೇ ಇದು” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮುಸ್ಲಿಂ ಪ್ರಾಬಲ್ಯದ ಶಿಗ್ಗಾವಿ ಗೆಲ್ಲುತ್ತಾ ಕಾಂಗ್ರೆಸ್?

ಯಾರೂ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ

“ಹಾದಿಬೀದಿಯಲ್ಲಿ ಹೇಳಿಕೆ ನೀಡುತ್ತಾ ಹೋದರೆ ರಾಜ್ಯದ ಅಭಿವೃದ್ಧಿ ಆಗುತ್ತದೆಯೇ? ರಾಜ್ಯ ಸರ್ಕಾರ ಚಿಲ್ಲರೆ ರಾಜಕಾರಣ ಮಾಡುವುದನ್ನು ಬಿಡಬೇಕು. ಇಲ್ಲಿ ರಾಜಕಾರಣ ಮುಖ್ಯವಲ್ಲ. ಅದೇನಿದ್ದರೂ ಚುನಾವಣೆಗೆ ಸೀಮಿತ. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಯಾಕೆ ಬೇಕು? ಇಲ್ಲಿಯವರೆಗೂ ಒಬ್ಬರೂ ನನ್ನ ಬಳಿ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ. ಸಚಿವ ಎಂ ಬಿ ಪಾಟೀಲ್ ಒಬ್ಬರು ದೆಹಲಿಯ ನನ್ನ ಸಚಿವಾಲಯಕ್ಕೆ ಬಂದು ಕೈಗಾರಿಕೆ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದ್ದು ಬಿಟ್ಟರೆ ಯಾರೊಬ್ಬರೂ ನನ್ನೊಂದಿಗೆ ರಾಜ್ಯದ ಬಗ್ಗೆ ಚರ್ಚೆ ಮಾಡಿಲ್ಲ. ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ಎಂದು ಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದಾರೆ. ಹೀಗೆ ಮಾಡಿದರೆ ಮೇಕೆದಾಟುಗೆ ಅನುಮತಿ ದೊರೆಯುತ್ತದೆಯೇ” ಎಂದು ಪ್ರಶ್ನಿಸಿದರು.

“ದಯಮಾಡಿ ಇವರು ಚಿಲ್ಲರೆ ರಾಜಕಾರಣ ಬಿಡಬೇಕು. ಟೊಯೊಟಾ ಸೇರಿದಂತೆ ಅನೇಕ ಕೈಗಾರಿಕೆಗಳು ರಾಜ್ಯ ಬಿಟ್ಟು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿವೆ. ಶಾಸಕ ರಾಜುಕಾಗೆ ಅಭಿವೃದ್ಧಿ ಅನುದಾನ ಬಗ್ಗೆ ಏನು ಹೇಳಿದ್ದಾರೆ. ಅರಣ್ಯ ಸಚಿವರು ಅವರ ಬಳಿ ಇರುವ ದಾಖಲೆಗಳನ್ನು ತೆಗೆದುಕೊಂಡು ಬರಲಿ. ನಾನು ಕುಳಿತುಕೊಳ್ಳುತ್ತೇನೆ. ಅವರೂ ಬರಲಿ, ಸಭೆಯಲ್ಲಿ ಎಲ್ಲಾ ಚರ್ಚೆಯಾಗಲಿ. ಸಭೆ ಯಾಕೆ ಕರೆಯಲಾಗುತ್ತಿಲ್ಲ. ಎಲ್ಲ ದಾಖಲೆ ಸಮೇತ ಚರ್ಚೆ ಮಾಡೋಣ. ಈಶ್ವರ ಖಂಡ್ರೆ ಬೋಗಸ್ ಹೇಳಿಕೆ ನೀಡುತ್ತಿದ್ದಾರೆ” ಎಂದು ಹರಿಹಾಯ್ದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಟಿ.ಎ.ಜವರಾಯ ಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...