ಬಿಜೆಪಿ ಟಿಕೆಟ್‌ ಘೋಷಣೆಗೂ ಮುನ್ನವೇ ಬಂಡಾಯ; ಶಾಸಕ ರಾಮಪ್ಪ ಲಮಾಣಿ ವಿರುದ್ಧ ಭುಗಿಲೆದ್ದ ಆಕ್ರೋಶ

Date:

  • ಅನಕ್ಷರಸ್ಥ ಶಾಸಕ ನಮಗೆ ಬೇಡ ಎಂದು ಕಿಡಿ
  • ಕೇಂದ್ರ ಮತ್ತು ರಾಜ್ಯ ನಾಯಕರಿಗೆ ಸಂದೇಶ

ಮುಂಬರುವ ವಿಧಾನಸಭಾ ಚುನಾವಣೆ ಎದುರಿಸಲು ಸಿದ್ದತೆ ನಡೆಸುತ್ತಿರುವ ಬಿಜೆಪಿಗೆ ಟಿಕೆಟ್‌ ಘೋಷಣೆಗೂ ಮುನ್ನವೇ ಬಂಡಾಯ ಎದುರಾಗಿದ್ದು, ಗದಗ ಜಿಲ್ಲೆ ಶಿರಹಟ್ಟಿ ಮೀಸಲು (ಪರಿಶಿಷ್ಟ ಜಾತಿ) ಕ್ಷೇತ್ರದ ಹಾಲಿ ಶಾಸಕ ರಾಮಣ್ಣ ಲಮಾಣಿ ವಿರುದ್ಧ ಸ್ವಪಕ್ಷದ ಮುಖಂಡರು ವೇದಿಕೆ ಮೇಲೆ ಕಿಡಿ ಕಾರಿದ್ದಾರೆ.

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಜಗದ್ಗುರು ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಅತೃಪ್ತರು ಇತ್ತೀಚೆಗೆ ಸಭೆ ಸೇರಿ ಒಗ್ಗಟ್ಟು ಪ್ರದರ್ಶಿಸಿ, ಮುಂಬರುವ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಹಾಲಿ ಶಾಸಕರಿಗೆ ಟಿಕೆಟ್ ಕೊಡಬೇಡಿ ಎಂದು ರಾಜ್ಯ ಹಾಗೂ ಕೇಂದ್ರ ಹೈಕಮಾಂಡ್‌ಗೆ, ಸಂದೇಶ ರವಾನಿಸಿದ್ದರು.

ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮುಂಡರಗಿ, ಲಕ್ಷ್ಮೇಶ್ವರ ತಾಲೂಕಿನ ಹಾಲಿ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು ಒಟ್ಟಾಗಿ ಶಾಸಕರ ವಿರುದ್ಧ ಶಕ್ತಿ ಪ್ರದರ್ಶನ ನಡೆಸಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿಯಿಂದ ಒಟ್ಟು 10 ಟಿಕೆಟ್ ಆಕಾಂಕ್ಷಿಗಳಿದ್ದೇವೆ. ಶಾಸಕ ರಾಮಣ್ಣ ಹೊರತಾಗಿ ಬೇರೆ ಯಾರಿಗೆ ಟಿಕೆಟ್ ಕೊಟ್ಟರೂ ಆ ಅಭ್ಯರ್ಥಿ ಪರ ಕೆಲಸ ಮಾಡಿ ಗೆಲ್ಲಿಸುತ್ತೇವೆ ಎಂದು ಸಂದೇಶ ರವಾನಿಸಿದ್ದಾರೆ.

ಬಿಜೆಪಿ ಪದಾಧಿಕಾರಿಗಳ ಸಭೆ

ಆದರೆ, ಹಾಲಿ ಶಾಸಕರಿಗೆ ಟಿಕೆಟ್ ನೀಡಿದರೆ ಇನ್ನುಳಿದ 9 ಜನ ಬಿಜೆಪಿ ಆಕಾಂಕ್ಷಿಗಳನ್ನು ಒಟ್ಟುಗೂಡಿಸಿ ಯಾರಾದರೊಬ್ಬರನ್ನು ಪಕ್ಷೇತರವಾಗಿ ಕಣಕ್ಕಿಳಿಸಿ ಗೆಲ್ಲಿಸಿ, ಶಾಸಕ ರಾಮಣ್ಣನನ್ನು ಸೋಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಕಳೆದ ಚುನಾವಣೆಯಲ್ಲಿ 30 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಶಾಸಕರಿಗೆ ಸಚ್ಚಾರಿತ್ರ್ಯ ಇಲ್ಲ. ಅವರ ದುರ್ನಡತೆಯಿಂದ ಕಾರ್ಯಕರ್ತರು ಬೇಸತ್ತಿದ್ದಾರೆ. ಎಲ್ಲ ಕೆಲಸಕ್ಕೂ ಕುಟುಂಬಸ್ಥರ ಹಸ್ತಕ್ಷೇಪ ಮಾಡುತ್ತಾರೆ.

ಈ ಸುದ್ದಿ ಓದಿದ್ದೀರಾ? : ಬೆಂಗಳೂರು | ಚಾಕು ಹಿಡಿದು ಹಾಡಹಗಲೇ ಬೆದರಿಕೆ ಹಾಕಿದ ಟಾಟಾ ಏಸ್‌ ಚಾಲಕ!

ಇದುವರೆಗೂ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಪಕ್ಷದ ನಾಯಕರು, ಕಾರ್ಯಕರ್ತರ ಕಡೆಗಣಿಸಿ, ಗುತ್ತಿಗೆದಾರರಿಗೆ ಮಣೆ ಹಾಕುವುದರಿಂದ ಜನಸಾಮಾನ್ಯರು ಹಾಗೂ ಶಾಸಕರ ವಿರುದ್ಧ ತಿರುಗಿ ಬಿದಿದ್ದಾರೆ.

ಇದಷ್ಟು ಮಾತ್ರವಲ್ಲದೇ ಹಾಲಿ ಶಾಸಕರಿಗೆ ಈಗಾಗಲೇ 73 ವರ್ಷ ವಯಸ್ಸಾಗಿದೆ. ಹೊಸ ಅಭ್ಯರ್ಥಿಗೆ ಅವಕಾಶ ಸಿಗಬೇಕು. ಅನಕ್ಷರಸ್ಥ ಶಾಸಕ ನಮಗೆ ಬೇಡ ಎಂದು ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್...

ಮಾಜಿ ಪ್ರಧಾನಿ ದೇವೇಗೌಡಗೆ ಕಸಾಪ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼ

2022ನೇ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ʼ ದತ್ತಿ ಪ್ರಶಸ್ತಿ ಪ್ರದಾನ ನಾಡಿನ...

ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ: ಸಿಎಂ 'ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ...

ನಮ್ಮ ಸಚಿವರು | ಮೌಢ್ಯವನ್ನು ಮೆಟ್ಟಿ ಗೆಲ್ಲುತ್ತಿರುವ ಸತೀಶ್ ಜಾರಕಿಹೊಳಿ

32 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಹಾಗೂ ನಾಲ್ಕು ಬಾರಿ ಸಚಿವರಾಗಿರುವ...