ಕೋಟೆ ನಾಡಿನಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ: 17ರಂದು ನಾಮಪತ್ರ ಸಲ್ಲಿಸುವೆ ಎಂದ ರಘು ಆಚಾರ್

Date:

  • ಏಪ್ರಿಲ್‌ 17ಕ್ಕೆ ನಾಮಪತ್ರ ಸಲ್ಲಿಕೆ
  • ಕಾಂಗ್ರೆಸ್ ವಿರುದ್ಧ ಜಿ ರಘು ಆಕ್ರೋಶ

ರಾಜ್ಯ ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ.

ಕಾಂಗ್ರೆಸ್‌ನ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಬಂಡಾಯದ ಬೇಗೆ ಮತ್ತೆ ಕಾಣಿಸಿಕೊಂಡಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಎಂಎಲ್‌ಸಿ ಜಿ ರಘು ಆಚಾರ್‌ ಅವರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಅವರು ಪಕ್ಷದ ವಿರುದ್ಧ ಮುನಿಸಿಕೊಂಡಿದ್ದಾರೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕೆ ಸಿ ವೀರೇಂದ್ರ ಅವರಿಗೆ ಪಕ್ಷದ ಟಿಕೆಟ್ ನೀಡಲಾಗಿದೆ. ಆದ್ದರಿಂದ, ಕಾಂಗ್ರೆಸ್ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ಜಿ ರಘು ಆಚಾರ್‌ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಕೆ ಸಿ ವೀರೇಂದ್ರ ಮತ್ತು ಜಿ ರಘು ಅವರ ನಡುವೆ ಚಿತ್ರದುರ್ಗ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಇದೀಗ ಕಾಂಗ್ರೆಸ್ ವೀರೇಂದ್ರ ಅವರಿಗೆ ಮಣೆ ಹಾಕಿದೆ.

ಈ ಕುರಿತು ಈ ದಿನ.ಕಾಮ್‌ನೊಂದಿಗೆ ಮಾತನಾಡಿರುವ ಬಂಡಾಯ ರಘು ಆಚಾರ್, “ಪಕ್ಷದ ನಿರ್ಧಾರದಿಂದ ನನಗೆ ಬೇಸರವಾಗಿದೆ. ನಾನು ಚುನಾವಣೆಗೆ ನಿಲ್ಲುವುದು ಸತ್ಯ. ಇದೇ 17ರಂದು ನಾಮಪತ್ರ ಸಲ್ಲಿಸುವೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ | ಯಾವ ಜಾತಿಗೆ ಎಷ್ಟು ಟಿಕೆಟ್‌? ಇಲ್ಲಿದೆ ಪೂರ್ಣ ವಿವರ

“ವಿಧಾನ ಪರಿಷತ್‌ ಬದಲಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷದ ಹಿರಿಯ ನಾಯಕರು ಈ ಹಿಂದೆ ಹೇಳಿದ್ದರು. ನಾನೂ ಟಿಕೆಟ್‌ ನಿರೀಕ್ಷೆಯಲ್ಲಿದ್ದೆ. ಆದರೆ, ಪಕ್ಷ ನನ್ನ ಕತ್ತು ಕೊಯ್ದಿದೆ. ನನ್ನದು ಪ್ರಬಲ ಜಾತಿ ಅಲ್ಲ ಎನ್ನುವ ಕಾರಣವೊಂದಕ್ಕೆ ನನ್ನ ರಾಜಕೀಯ ಜೀವನ ಹಾಳು ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ರಾಜ್ಯದ ಸಣ್ಣ ಸಮುದಾಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಗೌರವ ಇದ್ದಂತೆ ಕಾಣುತ್ತಿಲ್ಲ. ಸಣ್ಣ ಸಮುದಾಯ ನಿರ್ಲಕ್ಷ್ಯ ಮಾಡಿದ ಕಾಂಗ್ರೆಸ್‌ಗೆ ವಿಶ್ವಕರ್ಮ ಸಮುದಾಯದ ಬೆಂಬಲವಿಲ್ಲ. ಕಾಂಗ್ರೆಸ್‌ಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ” ಎಂದು ಅಸಮಾಧಾನ ಹೊರಹಾಕಿದ್ದಾರೆ.

“ನಾನು ಏಪ್ರಿಲ್ 17ಕ್ಕೆ ನಾಮಪತ್ರ ಸಲ್ಲಿಸುವೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲೆ ಅಥವಾ ಇತರೆ ಪಕ್ಷಗಳ ಟಿಕೆಟ್‌ನಿಂದ ಕಣಕ್ಕಿಳಿಯಲೇ ಎನ್ನುವ ಕುರಿತು ಇನ್ನೂ ನಿರ್ಧಾರ ಮಾಡಿಲ್ಲ” ಎಂದು ತಿಳಿಸಿದ್ದಾರೆ.

ಕ್ಷೇತ್ರದ ಮತದಾರರ ಜೊತೆಗೆ ಮಾತನಾಡಿಕೊಂಡು ಮುಂದಿನ ಹೆಜ್ಜೆ ಇಡುವುದಾಗಿ ಜಿ ರಘು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ...

ಕೇಂದ್ರದ ಯೋಜನೆ ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟ: ಬೊಮ್ಮಾಯಿ

'ಕೇಂದ್ರ ಸರ್ಕಾರಕ್ಕೆ 9 ವರ್ಷ, ನರೇಂದ್ರ ಮೋದಿ ಆಡಳಿತ ಮುಂದುವರೆಯಲಿʼ 'ಐದು ಗ್ಯಾರಂಟಿಗಳ...

ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಇಲ್ಲಿದೆ ಪೂರ್ಣ ಮಾಹಿತಿ

ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿದ ಸಿಎಂ ಹೊಸ ಸಚಿವರಿಗೆ ಶಕ್ತಿ ಸೌಧದಲ್ಲಿ...

ಆರ್‌ಎಸ್‌ಎಸ್‌-ಬಜರಂಗದಳದ ದಲಿತರು, ಶೂದ್ರರನ್ನು ಸೆಳೆಯಬೇಕಿದೆ: ಸತೀಶ್‌ ಜಾರಕಿಹೊಳಿ

ಒಂದು ಸಂಘಟನೆ ನಿಷೇಧಿಸಿದರೆ ಮತ್ತೊಂದು ಹುಟ್ಟಿಕೊಳ್ಳುತ್ತದೆ ದಲಿತರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆ...