ವಿದ್ಯುತ್ ತೆರಿಗೆಯನ್ನು ಶೇ.3ರಿಂದ 4ರಷ್ಟು ಕಡಿತಗೊಳಿಸಿ; ಎಚ್ಡಿಕೆ ಆಗ್ರಹ

Date:

Advertisements
  • ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡು ಜ್ಯೋತಿಯೋ?
  • ವಿದ್ಯುತ್ ಬರೆಯಿಂದ ಜನ, ಸಣ್ಣ ಕೈಗಾರಿಕೆಗಳು ಸಂಕಷ್ಟಕ್ಕೊಳಗಾಗಿವೆ

ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತಗೊಳಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಐಟಿ ಹಾಗೂ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರ ಜತೆ ಮಾತುಕತೆ ನಡೆಸಿ ಅವರ ಅಹವಾಲು ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು, “ದುಬಾರಿ ವಿದ್ಯುತ್ ದರದಿಂದ ಸಾರ್ವಜನಿಕರ ಜತೆಗೆ ಕೈಗಾರಿಕಾ ವಲಯವೂ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಗ್ಯಾರಂಟಿಗಳ ಹೆಸರಿನಲ್ಲಿ ಜನರ ತುಟಿಗೆ ತುಪ್ಪ ಸವರುತ್ತಿರುವ ರಾಜ್ಯ ಸರ್ಕಾರ ವಿದ್ಯುತ್ ಮೇಲಿನ ತೆರಿಗೆಯಲ್ಲಿ ಕೊಂಚ ಕಡಿತ ಮಾಡಲಿ” ಎಂದರು.

Advertisements

“ಗೃಹಜ್ಯೋತಿ ಎಂದು ಹೇಳುತ್ತಾ ಎಲ್ಲರ ಮನೆಗಳಲ್ಲಿ ಜ್ಯೋತಿ ಬೆಳಗಿಸುವ ನಾಟಕ ಆಡುತ್ತಿರುವ ಕಾಂಗ್ರೆಸ್ ಸರ್ಕಾರ, ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತದೆ. ಎರಡು ಪಟ್ಟು, ಮೂರು ಪಟ್ಟು ಹೆಚ್ಚು ದರ ವಿಧಿಸಿರುವ ವಿದ್ಯುತ್ ಬಿಲ್ಲುಗಳನ್ನು ನೀಡುತ್ತಿರುವುದು ಗೃಹಜ್ಯೋತಿಯೇ? ಅದು ಗೃಹಜ್ಯೋತಿಯಲ್ಲ, ಸುಡುಜ್ಯೋತಿ” ಎಂದು ಎಚ್ಡಿಕೆ ಟೀಕಿಸಿದರು.

“ವಿದ್ಯುತ್ ದರ ವಿಚಾರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಆಟ ಆಡುತ್ತಿವೆ. ಕಾಂಗ್ರೆಸ್ ಸರಕಾರ ನೋಡಿದರೆ, ನಾವು ದರ ಜಾಸ್ತಿ ಮಾಡಿಲ್ಲ, ಹಿಂದೆ ಇದ್ದ ಬಿಜೆಪಿ ಹೆಚ್ಚಳ ಮಾಡಿದ್ದು ಎಂದು ನೆಪ ಹೇಳಿ ಜವಾಬ್ದಾರಿಯಿಂದ ಜಾಣತನದ ಪಲಾಯನ ಮಾಡುತ್ತಿದೆ. ಇವರ ನಾಟಕ ಜನರಿಗೆ ಅರ್ಥ ಆಗುತ್ತಿದೆ” ಎಂದು ಅವರು ಸಿಡಿಮಿಡಿಯಾದರು.

ಸಣ್ಣ ಉದ್ದಿಮೆದಾರರ ಸಂಕಷ್ಟದ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, “ಸಿಎಂ ಮುಂದೆ ಕಷ್ಟ ಹೇಳೋಕೆ ಹೋಗಿದ್ದಾರೆ, ಇವರಿಗೆ ಸಮಯ ಕೊಡಲು ಮುಖ್ಯಮಂತ್ರಿಗಳಿಗೆ ವ್ಯವಧಾನ ಇಲ್ಲ. ಇವರು ರಾಜ್ಯದಲ್ಲಿ ನೂರಾರು ಕೋಟಿ ಹೂಡಿಕೆ ಮಾಡಿದ್ದಾರೆ, ಸಾಕಷ್ಟು ಜನರಿಗೆ ಕೆಲಸ ಕೊಟ್ಟಿದ್ದಾರೆ. ಇಂಥವರು ಹೋದಾಗ ದೊಡ್ಡ ಸ್ಥಾನದಲ್ಲಿ ಕೂತವರು ಸಜ್ಜನಿಕೆಯಿಂದ ವರ್ತಿಸಿ ಅಹವಾಲು ಸ್ವೀಕರಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ ವಿವಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆಯಲಿ: ಸಚಿವ ಸುಧಾಕರ್

“ನಾವು ಅಧಿಕಾರದಲ್ಲಿ ಇದ್ದಾಗ ಕೆಇಆರ್ ಸಿ ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಬಂದಿತ್ತು, ಆದರೆ ದರ ಏರಿಕೆ ಮಾಡಿರಲಿಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದರು. ಆದರೆ, ದರ ಏರಿಕೆ ಬಗ್ಗೆ ಕೆಇಆರ್ ಸಿ ಒಂದೇ ನಿರ್ಧಾರ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಅರ್ಜಿ ಕೊಟ್ಟಾಗ ಕೆಇಆರ್ ಸಿ ತೀರ್ಮಾನ ತೆಗೆದುಕೊಳ್ಳುತ್ತದೆ. ಈಗ ನೋಡಿದರೆ ಇವರು ನೆಪ ಹೇಳಿಕೊಂಡು ಕಾಲಹರಣ ಮಾಡುತ್ತಿದ್ದಾರೆ” ಎಂದು ಕುಮಾರಸ್ವಾಮಿ ಕಿಡಿಕಾರಿದರು.

“ರಾಜ್ಯದ ಆರ್ಥಿಕತೆಗೆ ಸಣ್ಣ ಪ್ರಮಾಣದ ಕೈಗಾರಿಕೆಗಳು ದೊಡ್ಡ ಕೊಡುಗೆ ನೀಡುತ್ತಿವೆ. ಸ್ವಯಂ ಆರ್ಥಿಕ ತಜ್ಞರು ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳಿಗೆ ಇದು ಅರ್ಥ ಆಗುವುದಿಲ್ಲವೇ? ಆರಂಭದಲ್ಲಿಯೇ ಜನವಿರೋಧಿ, ಕೈಗಾರಿಕಾ ವಿರೋಧಿ ಕ್ರಮಗಳನ್ನು ಸರಕಾರ ಕೈಗೊಂಡರೆ ಉದ್ಯೋಗ ಸೃಷ್ಟಿ, ಹೂಡಿಕೆ ಕಥೆ ಏನು? ಇವರ ಕಷ್ಟಗಳನ್ನ ಸರಕಾರ ಕೇಳಿಸಿಕೊಳ್ಳುತ್ತಿಲ್ಲ” ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

“ಕಾಂಗ್ರೆಸ್‌ನವರು ನಿನಗೂ ಫ್ರೀ ನನಗೂ ಫ್ರೀ ಅಂತ ಹೇಳಿದಾಗ ಮುಂದಿನ ಪರಿಣಾಮಗಳ ಬಗ್ಗೆ ಯೋಚನೆ ಮಾಡಬೇಕಿತ್ತು. ಜನರು ನಂಬಿ ಮತ ಹಾಕಿದರು. ಈಗ ಕಾಂಗ್ರೆಸ್ ಸರಕಾರ ವಿಶ್ವಾಸ ದ್ರೋಹ ಎಸಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X