ಜನಗಣತಿಗೆ ಸಚಿವಾಲಯದ ಸಿಬ್ಬಂದಿಯನ್ನು ಕಳುಹಿಸಲು ನಕಾರ; ಸಭಾಪತಿಗಳ ‘ಸ್ವತಂತ್ರ ಶಾಸಕಾಂಗ’ದ ವಾದವೇನು?

Date:

ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು, ಸಚಿವಾಲಯದ ಸಿಬ್ಬಂದಿಯನ್ನು ಜನಗಣತಿ ಕೆಲಸಕ್ಕೆ ನಿಯೋಜಿಸಲು ನಿರಾಕರಿಸಿದ್ದಾರೆ. ಸಭಾಪತಿಗಳ ʼಸ್ವತಂತ್ರ ಶಾಸಕಾಂಗʼ ವಾದದ ಹಿಂದಿರುವ ಮುಖ್ಯಾಂಶಗಳೇನು ಎನ್ನುವುದರ ಬಗ್ಗೆ ಈಗ ರಾಜ್ಯ ರಾಜಕಾರಣ ಮತ್ತು ಆಡಳಿತ ವಲಯದಲ್ಲಿ ದೊಡ್ಡ ಚರ್ಚೆಯಾಗುತ್ತಿದೆ.

ಭಾರತೀಯ ಸಂವಿಧಾನದ ಪ್ರಕಾರ ಪ್ರಜಾಪ್ರಭುತ್ವದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಸಚಿವಾಲಯದ ಸಿಬ್ಬಂದಿ ನೇರವಾಗಿ ಸಭಾಪತಿಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಬರುತ್ತಾರೆಯೇ ಹೊರತು, ಸರ್ಕಾರದ (ಕಾರ್ಯಾಂಗದ) ಸಾಮಾನ್ಯ ಆದೇಶಗಳಿಗೆ ಅಲ್ಲ ಎನ್ನುವುದು ಖಾದರ್ ಅವರ ವಾದ.

- Advertisement -

ವಿಧಾನಸಭೆ ಮತ್ತು ವಿಧಾನಪರಿಷತ್ ಸಚಿವಾಲಯಗಳು ಸ್ವತಂತ್ರ ಘಟಕಗಳು. ಇಲ್ಲಿನ ಸಿಬ್ಬಂದಿಯನ್ನು ಜನಗಣತಿ, ಚುನಾವಣೆ ಅಥವಾ ಇತರ ನಾಗರಿಕ ಸೇವೆಗಳಿಗೆ ಬಳಸಿಕೊಳ್ಳಬೇಕಾದರೆ ಸಭಾಪತಿಗಳ ಅನುಮತಿ ಕಡ್ಡಾಯ. “ನಾವು ಸರ್ಕಾರದ ಅಡಿಯಲ್ಲಿ ಬರುವ ಇಲಾಖೆಯಲ್ಲ” ಎಂದು ಹೇಳುವ ಮೂಲಕ ಸ್ಪೀಕರ್ ಅವರು ಶಾಸಕಾಂಗದ ಘನತೆ ಮತ್ತು ಸ್ವಾಯತ್ತತೆಯನ್ನು ಎತ್ತಿ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ : ಬಾಗಲಕೋಟೆ ಉಪ ಚುನಾವಣೆ | ಕಾಂಗ್ರೆಸ್‌ಗೆ ಚರಂತಿಮಠ ಅವರೇ ಸವಾಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಚಿವಾಲಯದ ಸಿಬ್ಬಂದಿ ಅಧಿವೇಶನ ನಿರ್ವಹಣೆ, ಸಮಿತಿಗಳ ಸಭೆ ಇತ್ಯಾದಿಗಳನ್ನು ಮಾಡುತ್ತಾರೆ. ಅವರನ್ನು ಹೊರಗಿನ ಕೆಲಸಗಳಿಗೆ ನಿಯೋಜಿಸಿದರೆ ಶಾಸಕಾಂಗದ ದೈನಂದಿನ ಕಲಾಪಗಳಿಗೆ ಮತ್ತು ಶಾಸಕರ ಹಕ್ಕುಗಳಿಗೆ ಧಕ್ಕೆಯಾಗುತ್ತದೆ ಎಂಬುದು ಮತ್ತೊಂದು ಪ್ರಮುಖ ಕಾರಣ.

ಸಭಾಪತಿಗಳ ವಾದದ ಹಿಂದಿನ ಕಾನೂನು ಅಂಶಗಳೇನು?

ಭಾರತೀಯ ಸಂವಿಧಾನದ 187ನೇ ವಿಧಿ ರಾಜ್ಯ ಶಾಸಕಾಂಗಕ್ಕೆ ತನ್ನದೇ ಆದ ಪ್ರತ್ಯೇಕ ಸಚಿವಾಲಯದ ಸಿಬ್ಬಂದಿಯನ್ನು ಹೊಂದುವ ಅಧಿಕಾರ ನೀಡುತ್ತದೆ. ಸಚಿವಾಲಯದ ಮೇಲೆ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಪೂರ್ಣ ನಿಯಂತ್ರಣ ಇರುವುದಿಲ್ಲ.

ಸಭಾಪತಿಗಳ ಅವರ ಈ ನಿಲುವು “ಶಾಸಕಾಂಗ ಕಾರ್ಯಾಂಗದ ಕೈಗೊಂಬೆಯಲ್ಲ” ಎಂಬ ಸಾಂವಿಧಾನಿಕ ಸಂದೇಶವನ್ನು ಸಾರುವ ಪ್ರಯತ್ನವಾಗಿದೆ ಎನ್ನುವುದು ಇಲ್ಲಿ ಮುಖ್ಯಾಂಶವಾಗಿದೆ. ಇದು ಮುಂಬರುವ ದಿನಗಳಲ್ಲಿ ಸರ್ಕಾರ ಮತ್ತು ಶಾಸಕಾಂಗದ ನಡುವೆ ಆಡಳಿತಾತ್ಮಕ ಅಧಿಕಾರ ಹಂಚಿಕೆಯ ಬಗ್ಗೆ ಹೊಸ ಚರ್ಚೆಯನ್ನು ಹುಟ್ಟುಹಾಕಬಹುದು ಎನ್ನುವ ವಿಶ್ಲೇಷಣೆಯೂ ಕೇಳಿ ಬರುತ್ತಿದೆ.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೈಬೀರಿಯಾ ಗುಹೆಯಲ್ಲಿ ಹಿಮಯುಗದ ರಹಸ್ಯ ಬಯಲು: 4 ಲಕ್ಷ ವರ್ಷಗಳ ಹಿಂದಿನ ಅಜ್ಞಾತ ಜೀವಿ ಪತ್ತೆ!

ದಕ್ಷಿಣ ಸೈಬೀರಿಯಾದ ಗುಹೆಗಳಲ್ಲಿ ದೊರೆತ ಸಾಮಾನ್ಯ ಮೂಳೆಯ ತುಣುಕುಗಳು ಇದೀಗ ವಿಕಾಸನದ...

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...