‘ನಿಮ್ಮೊಳಗಿನ ವಿಷ ಅರಿಯದ ದಿನಗಳು’ : ವಿಶ್ವೇಶ್ವರ ಭಟ್‌ಗೆ ಪ್ರಕಾಶ್ ರಾಜ್ ತಿರುಗೇಟು

Date:

  • ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ: ಹಲವರ ವಿರೋಧ
  • ವೇದಿಕೆ ಹಂಚಿಕೊಂಡ ಹಳೆಯ ಫೋಟೋ ಶೇರ್ ಮಾಡಿದ್ದ ‘ವಿಶ್ವವಾಣಿ’ ಸಂಪಾದಕ

ವಿಶ್ವವಾಣಿ’ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಭಾಗವಹಿಸುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿರುವುದರ ನಡುವೆಯೇ ಹಿರಿಯ ನಟ ಪ್ರಕಾಶ್ ರಾಜ್ ಮತ್ತು ವಿಶ್ವೇಶ್ವರ ಭಟ್‌ ನಡುವೆ ‘ಫೋಟೋ ವಾರ್’ ನಡೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಬಿಡುಗಡೆಗೊಳಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ‘ಸನ್ಮಾನ್ಯ ಸಿದ್ದರಾಮಯ್ಯನವರೇ, ದಯವಿಟ್ಟು ಒಮ್ಮೆ ಯೋಚಿಸಿ. ಇದು ತಮಗೆ ಶೋಭೆಯಲ್ಲ’ ಎಂದು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಪೋಸ್ಟ್ ಹಾಕಿದ್ದ ವಿಶ್ವೇಶ್ವರ ಭಟ್‌, “ನೆನಪುಗಳು ಮಾಸುವುದಿಲ್ಲ. ನನ್ನ ಪುಸ್ತಕ ಬಿಡುಗಡೆಗೆ ಹೋಗಬೇಡಿ ಎನ್ನುವವರು, ನನ್ನೊಂದಿಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇಕೋ? ಡಬಲ್ ಸ್ಟ್ಯಾಂಡರ್ಡ್ ಅಂದ್ರೆ ಇದೇ ನೋಡಿ” ಎಂದು ಪ್ರಕಾಶ್ ರಾಜ್ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಹಳೆಯ ಫೋಟೋವನ್ನು ಪೋಸ್ಟ್ ಮಾಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಟ ಪ್ರಕಾಶ್ ರಾಜ್, “ಹೌದು, ನಿಮ್ಮೊಳಗಿನ ವಿಷ ಅರಿಯದ, ವಿಷಾದ ಪಡಲೇಬೇಕಾದ ದಿನಗಳು” ಎಂದು ಉತ್ತರ ನೀಡಿದ್ದಾರೆ.

ಇದನ್ನು ಓದಿದ್ದೀರಾ? ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ: ವ್ಯಾಪಕ ವಿರೋಧ

ಬೆಂಗಳೂರಿನ ಕೆ ಪಿ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಜು.22ರಂದು ವಿಶ್ವೇಶ್ವರ ಭಟ್ ಅವರ ‘ಸಂಪಾದಕರ ಸದ್ಯಶೋಧನೆ’ ಎಂಬ ಹೆಸರಿನ ಪುಸ್ತಕ ಸೇರಿದಂತೆ ವಿಶ್ವವಾಣಿಯ ಅಂಕಣಕಾರರಾದ ಕಿರಣ್ ಉಪಾಧ್ಯಾಯ, ರೂಪಾ ಗುರುರಾಜ್ ಹಾಗೂ ಶಿಶಿರ್ ಹೆಗಡೆ ಎಂಬುವವರ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ‘ದ್ವೇಷ ಹರಡುವ ಪತ್ರಕರ್ತರೊಬ್ಬರ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಬಾರದು’ ಎಂದು ಹಲವರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಇದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...