ಕೇಂದ್ರದಿಂದ ಹಣ ಬಿಡುಗಡೆ; ಅರ್ಹ ರೈತರಿಗೆ ಪರಿಹಾರ ಪಾವತಿಸಲು ತಕ್ಷಣ ಕ್ರಮ: ಸಚಿವ ಕೃಷ್ಣ ಬೈರೇಗೌಡ

Date:

Advertisements

ಕೇಂದ್ರ ಸರ್ಕಾರದ SDRF ಮಾರ್ಗಸೂಚಿಗಳ ಪ್ರಕಾರ NDRF ಅನುದಾನ ನಿರೀಕ್ಷಿಸಿ ಮೊದಲ ಹಂತದ ಪರಿಹಾರವಾಗಿ ರೂ.33,58,999 ರೈತರಿಗೆ ಒಟ್ಟು ರೂ.636.45 ಕೋಟಿಗಳನ್ನು ಈಗಾಗಲೇ ಫೆಬ್ರವರಿ ಹಾಗೂ ಮಾರ್ಚ್‌ ಮಾಹೆಗಳಲ್ಲಿ ಪಾವತಿಸಲಾಗಿದೆ. ಈ ಪೈಕಿ 4,43,691 ಅತೀ ಕಡಿಮೆ ಜಮೀನು ಇರುವ ರೈತರಿಗೆ SDRF ಮಾರ್ಗಸೂಚಿಗಳನ್ವಯ ಸಂಪೂರ್ಣ ಪರಿಹಾರ ಪಾವತಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

2023 ಮುಂಗಾರು ಬರ – ರೈತರಿಗೆ ಬೆಳೆ ಹಾನಿ ಪರಿಹಾರ ಪಾವತಿಸಿದ ವಿವರಗಳನ್ನು ಪತ್ರಿಕಾ ಪ್ರಕಟಣೆ ಮೂಲಕ ಹಂಚಿಕೊಂಡಿರುವ ಅವರು, ” ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ NDRFರಡಿ ಬರ ಪರಿಹಾರ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸಲು ಪ್ರಕರಣ ಸಂಖ್ಯೆ:WP-210/2024 ರ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ” ಎಂದಿದ್ದಾರೆ.

“ಸರ್ವೋಚ್ಚ ನ್ಯಾಯಾಲಯದ ಪ್ರಕರಣ ಸಂಖ್ಯೆ:WP-210/2024 ರಲ್ಲಿ ದಿನಾಂಕ:26-04-2024ರಂದು ರೂ.3,454.22 ಕೋಟಿಗಳನ್ನು ಕೇಂದ್ರ ಸರ್ಕಾರವು NDRF ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡಿದೆ. ಕೇಂದ್ರದಿಂದ ಹಣ ಬಿಡುಗಡೆ ಅಗುತ್ತಿದಂತೆಯೇ ಅರ್ಹ ರೈತರಿಗೆ ಪರಿಹಾರ ಪಾವತಿಸಲು ತಕ್ಷಣ ಕ್ರಮಕೈಗೊಳ್ಳಲಾಗಿದೆ” ಎಂದು ಹೇಳಿದ್ದಾರೆ.

Advertisements

“27 ಮತ್ತು 28ನೇ ಏಪ್ರಿಲ್, ಎರಡು ದಿನಗಳು ರಜಾದಿನಗಳು, ನಂತರ 29 ಮತ್ತು 30 ಏಪ್ರಿಲ್, ಎರಡು ದಿನಗಳಂದು ಬಾಕಿ ಉಳಿದ ಬೆಳೆ ಹಾನಿ ಪರಿಹಾರ ನೀಡಲು ಎಲ್ಲಾ ತಾಂತ್ರಿಕ ವ್ಯವಸ್ಥೆಯನ್ನು ಮಾಡಿಕೊಳ್ಳಲಾಯಿತು. ಮೇ 1 ರಂದು ಪುನಃ ಕಾರ್ಮಿಕ ದಿನಾಚರಣೆ ನಿಮಿತ್ತ ಸರ್ಕಾರಿ ರಜಾ ದಿನವಾಗಿರುತ್ತದೆ” ಎಂದಿದ್ದಾರೆ.

“ಮೊದಲ ಹಂತದ ಬೆಳೆ ಹಾನಿ ಪರಿಹಾರ ನೀಡಿ ಇನ್ನುಳಿದ ಬಾಕಿ ಮೊತ್ತಕ್ಕೆ SDRF ಮಾರ್ಗಸೂಚಿಗಳ ಪ್ರಕಾರ ಅರ್ಹತೆಯನುಸಾರ ಎಲ್ಲಾ ಅರ್ಹ ರೈತರಿಗೆ ಪಾವತಿ ಮಾಡಲು ಆಯುಕ್ತರು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಇವರಿಗೆ ರೂ. 3,454.22 ಕೋಟಿಗಳನ್ನು ಬಿಡುಗಡೆಗೊಳಿಸಲು 02-05-2024 ರಂದು ಆದೇಶ ಹೊರಡಿಸಲಾಗಿದೆ” ಎಂದು ತಿಳಿಸಿದ್ದಾರೆ.

“ದಿನಾಂಕ 06-05-202403 ರಂತೆ ಒಟ್ಟು 27,38,911 ರೈತರಿಗೆ ಅರ್ಹತೆಯನುಸಾರ ಒಟ್ಟು ರೂ.2,425.13 ಕೋಟಿಗಳನ್ನು ಆಧಾರ್ ಜೋಡಣೆಯಾದ ರೈತರ ಬ್ಯಾಂಕ್ ಖಾತೆಗಳಿಗೆ DBT ಮುಖಾಂತರ ನೇರ ವರ್ಗಾವಣೆ ಮಾಡಲು ಕಳೆದ ವಾರಂತ್ಯೆವೇ ಕ್ರಮವಹಿಸಲಾಗಿದೆ. ರಾಜ್ಯ ಸರ್ಕಾರದ ಕ್ರಮದ ನಂತರ ಆರ್‌.ಬಿ.ಐ ನಿಂದ ರೈತರ ಖಾತೆಗೆ ಹಣ ವರ್ಗಾಯಿಸಲು 48 ಗಂಟೆಗಳವರೆಗೆ ಸಮಯ ತೆಗೆದುಕೊಳ್ಳುತ್ತದೆ. ಇದೇ ಸೋಮವಾರದಿಂದ ಅನ್ವಯವಾಗುವಂತೆ ರೈತರ ಖಾತೆಗೆ ನೇರವಾಗಿ ಜಮಾವಾಗಲಿದೆ. ಎಲ್ಲ ರೈತರ ಖಾತೆಗಳಿಗೆ ಮುಂದಿನ 2-3 ದಿನಗಳೊಳಗಾಗಿ ಬರಪರಿಹಾರ ಮೊತ್ತವು ಜಮೆಯಾಗಲಿದೆ” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

“ಇಲ್ಲಿಯವರೆಗೆ ಒಟ್ಟು 31,82,602 ರೈತರಿಗೆ ಸಂಪೂರ್ಣ ಬೆಳೆ ಹಾನಿ ಪರಿಹಾರ ಪಾವತಿಸಲಾಗಿದೆ. ಇನ್ನೂ 2 ಲಕ್ಷ ರೈತರಿಗೆ ಬರಪರಿಹಾರ ಮೊತ್ತವನ್ನು ಪಾವತಿಸುವ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ” ಎಂದು ಹೇಳಿದ್ದಾರೆ.

“ರಾಜ್ಯದ 224 ತಾಲೂಕುಗಳನ್ನು ಈಗಾಗಲೇ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಮೊದಲ ಹಂತದಲ್ಲಿ ರಾಜ್ಯ ಸರ್ಕಾರವೇ ರೈತರಿಗೆ ಬರ ಪರಿಹಾರ ಪಾವತಿಸಿದ್ದು, ಇದೀಗ NDRF ಪರಿಹಾರ ಹಣ ಲಭ್ಯವಾಗಿದ್ದು ಆ ಹಣವನ್ನೂ ನಿಯಮದಂತೆ ಶೀಘ್ರವಾಗಿ ರೈತರ ಖಾತೆಗೆ ವರ್ಗಾಯಿಸಲು ಕ್ರಮವಹಿಸಲಾಗಿದೆ. ಅಲ್ಲದೆ ರಾಜ್ಯದ ಬಾಕಿ ಪರಿಹಾರ ಹಣ ಪಡೆಯಲೂ ಕೇಂದ್ರದ ಜೊತೆಗಿನ ಕಾನೂನು ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X