RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

Date:

Advertisements

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ₹100 ಮುಖಬೆಲೆಯ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಕಟುವಾಗಿ ಟೀಕಿಸಿದೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ(ಎಂ) “ಆರ್‌ಎಸ್‌ಎಸ್ ಸ್ಥಾಪನೆಯ 100ನೇ ವರ್ಷಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಚೆ ಚೀಟಿ ಮತ್ತು 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡಿರುವುದು ಭಾರತದ ಸಂವಿಧಾನಕ್ಕೆ ಮಾಡಿದ ಗಂಭೀರ ಗಾಯ ಮತ್ತು ಅವಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಹಿಂದುತ್ವ ಮತ್ತು ರಾಷ್ಟ್ರೀಯತೆಯ ಸಂಕೇತದ ಪ್ರತೀಕವಾಗಿರುವ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಿರುವುದು ಆಕ್ಷೇಪಾರ್ಹ. ಅಲ್ಲದೇ ನಾಣ್ಯದ ಮೇಲೆ ಆರ್‌ಎಸ್‌ಎಸ್‌ ಧೈಯ ವಾಕ್ಯವನ್ನು ಸಹ ಮುದ್ರಿಸಲಾಗಿದ್ದು, ‘ಎಲ್ಲವೂ ರಾಷ್ಟ್ರಕ್ಕೆ ಸಮರ್ಪಿತವಾಗಿದೆ. ಎಲ್ಲವೂ ರಾಷ್ಟ್ರದ್ದು, ಯಾವುದೂ ನನ್ನದಲ್ಲ..” ಎಂಬುದು ಸಂವಿಧಾನಕ್ಕೆ ಎಸಗುವ ಘೋರ ಅಪಚಾರ ಎಂದು ಸಿಪಿಐ(ಎಂ) ಹೇಳಿದೆ.

Advertisements

“1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆರ್‌ಎಸ್‌ಎಸ್‌ ಸ್ವಯಂಸೇವಕರು ಭಾಗವಹಿಸಿದ್ದನ್ನು ಅಂಚೆ ಚೀಟಿಯಲ್ಲಿ ಚಿತ್ರಿಸಲಾಗಿದೆ. ಇದು ಇತಿಹಾಸಕ್ಕೆ ಎಸಗುವ ಅಪಚಾರ. 1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಒಂದು ಲಕ್ಷಕ್ಕೂ ಹೆಚ್ ಭಾರತೀಯ ನಾಗರಿಕರು ಸೇರಿದ್ದರು. ಇದು ಇತಿಹಾಸದಲ್ಲಿ ದಾಖಲಾಗಿದೆ. ನೆಹರು ಅವರು 1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಲು ಆರ್‌ಎಸ್‌ಎಸ್ ಅನ್ನು ಆಹ್ವಾನಿಸಿದ್ದರು ಎಂಬ ಸುಳ್ಳನ್ನು ಇದು ಆಧರಿಸಿದೆ. ಸಮವಸ್ತ್ರ ಧರಿಸಿದ ಆರ್‌ಎಸ್‌ಎಸ್ ಸ್ವಯಂಸೇವಕರ ಉಪಸ್ಥಿತಿ ಕೇವಲ ಆಕಸ್ಮಿಕವಾಗಿತ್ತು” ಎಂದು ಸಿಪಿಐ(ಎಂ) ತಿಳಿಸಿದೆ.

“ಆರ್‌ಎಸ್‌ಎಸ್‌ ಸಂಪೂರ್ಣವಾಗಿ ಸ್ವಾತಂತ್ರ್ಯ ಹೋರಾಟದಿಂದ ದೂರವಿತ್ತು. ಬ್ರಿಟಿಷರ ಒಡೆದು ಆಳುವ ನೀತಿಗೆ ಬೆಂಬಲವಾಗಿತ್ತು. ವಸಾಹತುಶಾಹಿ ಆಳ್ವಿಕೆಯ ವಿರುದ್ಧದ ನಿರ್ಣಾಯಕ ಹೋರಾಟದಲ್ಲಿ ಭಾರತದ ಜನರ ಐಕ್ಯತೆಯನ್ನು ದುರ್ಬಲಗೊಳಿಸಲು ಆರ್‌ಎಸ್‌ಎಸ್‌ ಪ್ರಯತ್ನಿಸಿದೆ” ಎಂದು ವಿವರಿಸಿದೆ.

“ಸ್ವತಂತ್ರ ಭಾರತದ ಇತಿಹಾಸದಲ್ಲಿ ಆರ್‌ಎಸ್‌ಎಸ್‌ನಿಂದ ಅತ್ಯಂತ ಕೆಟ್ಟ ಕೋಮು ಹಿಂಸಾಚಾರಗಳು ನಡೆದಿವೆ. ಇದರಲ್ಲಿ ಆರ್‌ಎಸ್‌ಎಸ್ ಪಾತ್ರವನ್ನು ಅಧಿಕೃತ ತನಿಖಾ ಆಯೋಗಗಳ ಹಲವಾರು ವರದಿಗಳಲ್ಲಿ ವಿವರಿಸಲಾಗಿದೆ. ಇಂದು ಆರ್‌ಎಸ್‌ಎಸ್ ಮತ್ತು ಅದರ ಪರಿವಾರವು ಮನುವಾದಿ ಸಿದ್ಧಾಂತಗಳ ಪ್ರಚಾರದ ಮೂಲಕ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗಗಳನ್ನು ಗುರಿಯಾಗಿಸುತ್ತಲೇ ಇದೆ” ಎಂದು ಸಿಪಿಐ(ಎಂ) ವಾಗ್ದಾಳಿ ನಡೆಸಿದೆ.

“ಮೋದಿ ಅವರು ಪ್ರಧಾನಿ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಆರ್‌ಎಸ್‌ಎಸ್‌ ಇತಿಹಾಸವನ್ನು ಮರೆಮಾಚಲು ಯತ್ನಿಸಿದ್ದಾರೆ. ಇದು ಸಾಂವಿಧಾನಿಕ ಸ್ಥಾನದ ಘನತೆಯನ್ನು ಕುಂದಿಸುವ ನಡವಳಿಕೆ” ಎಂದು ಸಿಪಿಐ(ಎಂ) ಖಂಡಿಸಿದೆ.

ದೆಹಲಿಯ ಡಾ. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು “ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ. ಇದು ಬಹಳ ಹೆಮ್ಮೆ ಮತ್ತು ಐತಿಹಾಸಿಕ ಮಹತ್ವವನ್ನು ಸೂಚಿಸುತ್ತದೆ’ ಎಂದು ಹೇಳಿದ್ದಾರೆ.

₹100 ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವನ್ನು ಮತ್ತು ಇನ್ನೊಂದು ಬದಿಯಲ್ಲಿ ‘ವರದ ಮುದ್ರೆ’ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

ಎಲ್ಲರ ತಾಯಿ ಸಾಯುತ್ತಾರೆ; ರಜೆ ಕೇಳಿದ್ದಕ್ಕೆ ಮೇಲಧಿಕಾರಿಯ ಉಡಾಫೆಯ ಉತ್ತರ

ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ರಜೆ ಕೇಳಿದ ಬ್ಯಾಂಕ್ ಉದ್ಯೋಗಿಗೆ, “ಎಲ್ಲರ ತಾಯಿ...

ಇಂದಿನ ಸಮಾಜಕ್ಕೆ ವಿದ್ಯಾರ್ಥಿ ರಾಜಕೀಯ ಸಂಘಟನೆಗಳ ಅವಶ್ಯಕತೆ ಇದೆಯೇ?

ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿ ರಾಜಕೀಯ ಸಂಘಟನೆಗಳನ್ನು ಕಳೆದುಕೊಂಡ ನಾವು ಈಗ...

Download Eedina App Android / iOS

X