ಕೃಷ್ಣಾ, ಭೀಮಾಗೆ ನೀರು ಹರಿಸಿ: ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Date:

  • ಉತ್ತರ ಕರ್ನಾಟಕದ ನೀರಿನ ಬವಣೆ ತಗ್ಗಿಸಲು ಮಹಾರಾಷ್ಟ್ರದ ಮೊರೆ ಹೋದ ಸರ್ಕಾರ
  • ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದು ನದಿಗಳಿಗೆ ನೀರು ಹರಿಸುವಂತೆ ಕೇಳಿಕೊಂಡ ಸಿಎಂ

ಬಿರು ಬೇಸಿಗೆಗೆ ತತ್ತರಿಸಿರುವ ಉತ್ತರ ಕರ್ನಾಟಕದ ನೀರಿನ ಬವಣೆ ನೀಗಿಸಲು ಕೃಷ್ಣಾ ಮತ್ತು ಭೀಮಾ ನದಿಗಳಿಗೆ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿಸುವಂತೆ ಮುಖ್ಯಮಂತ್ರಿ ಏಕನಾಥ್‌ ಶಿಂಧೆಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ವಾರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ವಿನಂತಿಸುವುದಾಗಿ ಕೋರಿಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಪತ್ರ ಸಾರಾಂಶ ಹೀಗಿದೆ:

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಮಾರ್ಚ್ 2023 ರಿಂದ ತೀವ್ರ ಬೇಸಿಗೆಯಿಂದಾಗಿ ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿದೆ.

ಈ ಬೇಸಿಗೆಯಲ್ಲಿ ಕರ್ನಾಟಕ ಸರ್ಕಾರವು ಮಾನವ ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಂಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರು ಮತ್ತು ಬಿಡುಗಡೆ ಮಾಡಬೇಕೆಂದು ಕರ್ನಾಟಕ ಸರ್ಕಾರವು ಈ ಹಿಂದೆ ಮನವಿ ಮಾಡಿತ್ತು.

ಅದರಂತೆ ಮಹಾರಾಷ್ಟ್ರ ಸರ್ಕಾರ ಮನವಿ ಪರಿಗಣಿಸಿ ಮೇ 2023 ರ ಮೊದಲ ಹದಿನೈದು ದಿನಗಳಲ್ಲಿ ಕೃಷ್ಣಾ ನದಿಗೆ 1 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗಿದೆ. ಇದಕ್ಕಾಗಿ ನಾನು ಮಹಾರಾಷ್ಟ್ರ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ.ಸಿದ್ದರಾಮಯ್ಯ,ಶಿಂಧೆ ಪತ್ರ

ಈ ಸುದ್ದಿ ಓದಿದ್ದೀರಾ?:ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಿ: ಅಧಿಕಾರಿಗಳಿಗೆ ಸಿಎಂ ತಾಕೀತು

ಈ ನಡುವೆ ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರ ಪರಿಸ್ಥಿತಿ ಇನ್ನೂ ಚಾಲ್ತಿಯಲ್ಲಿದೆ, ಹೀಗಾಗಿ ಜನ ಮತ್ತು ಜಾನುವಾರುಗಳ ಕುಡಿಯಲು ಹಾಗೂ ಗೃಹಬಳಕೆಗಾಗಿ ನೀರಿನ ಅವಶ್ಯಕತೆಯಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಮುಂಗಾರು ಆರಂಭವಾಗಿಲ್ಲ.

ಈ ಕಾರಣಗಳಿಂದಾಗಿ ಈ ಭಾಗದ ಜನರ ಅಗತ್ಯತೆ ಅನುಸಾರವಾಗಿ ಮರಳಿ ವಾರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2.00 ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ನಾನು ವಿನಂತಿಸುತ್ತೇನೆ, ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...