ತಾಕತ್ತಿದ್ರೆ ಒಕ್ಕೂಟ ವ್ಯವಸ್ಥೆಯಿಂದ ತೆಗೆದು ಹಾಕಿ: ಬಿಜೆಪಿಗೆ ಸವಾಲು ಹಾಕಿದ ಶಾಸಕ ಶಿವಲಿಂಗೇಗೌಡ

Date:

  • ನಮಗೆ ಅಕ್ಕಿ ಕೊಡುವುದಿಲ್ಲ ಎಂದಾದರೆ ನಿಮಗೆ ತೆರಿಗೆ ಕೊಡುವುದಿಲ್ಲ
  • ಕೇಂದ್ರ ಸರ್ಕಾರ ತೋರುತ್ತಿರುವ ಮಲತಾಯಿ ಧೋರಣೆ ಸರಿಯಲ್ಲ

ನಿಮಗೆ ತಾಕತ್ ಇದ್ದರೆ ದೇಶದ ಒಕ್ಕೂಟ ವ್ಯವಸ್ಥೆಯಿಂದ ನಮ್ಮನ್ನ ತೆಗೆದು ಹಾಕಿ ನೋಡೋಣ ಎಂದು ಕಾಂಗ್ರೆಸ್ ನ ಶಾಸಕ ಶಿವಲಿಂಗೇಗೌಡ ಬಿಜೆಪಿಯವರನ್ನು ಆಗ್ರಹಿಸಿದ್ದಾರೆ.

- Advertisement -

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಕ್ಕಿ ಖರೀದಿ ವಿಚಾರದಲ್ಲಿ ರಾಜ್ಯ-ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಕುರಿತು ಪ್ರತಿಕ್ರಿಯಿಸಿ, ನಮ್ಮ ಸರ್ಕಾರ ಕೊಡುತ್ತಿರುವ ಅನ್ನಭಾಗ್ಯ ಜನಪರ ಕಾರ್ಯಕ್ರಮ. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ, ಬಡವರ ಹೊಟ್ಟೆ ಮೇಲೆ ಹೊಡೆಯುವುದರಿಂದ ನಿಮಗೇನು ಸಿಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಶಿವಲಿಂಗೇಗೌಡ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಇದೇ ರೀತಿ ಬಿಜೆಪಿಯವರು ತಮ್ಮ ಚಾಳಿ ಮುಂದುವರೆಸಿಕೊಂಡು ಹೋದರೆ ಲೋಕಸಭಾ ಚುನಾವಣೆಯಲ್ಲಿ ಅವರು ಅನುಭವಿಸಬೇಕಾಗುತ್ತದೆ ಎಂದು ಶಿವಲಿಂಗೇಗೌಡ ಎಚ್ಚರಿಕೆ ನೀಡಿದರು.

ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾದವರೇ ನಾವು ಅಕ್ಕಿ ಕೊಡುತ್ತೇವೆ ಎಂದಿದ್ದರು. ನಾವು ಅವರ ಮಾತಿನಂತೆಯೇ ಅಕ್ಕಿ ಕೊಡುವ ಘೋಷಣೆ ಮಾಡಿದ್ದೆವು. ಈ ಹಿನ್ನೆಲೆಯಲ್ಲಿ ಸಂಸ್ಥೆ ನಿಗದಿ ಮಾಡಿದ ದರದಲ್ಲೇ ಅಕ್ಕಿ ಕೊಡಿ ಅಂತ ಕೇಳಿದ್ದೇವೆ. ಪುಕ್ಕಟ್ಟೆ ನಾವೇನು ಕೊಡಿ ಅಂತ ಕೇಳಿಲ್ಲಎಂದು ಶಿವಲಿಂಗೇಗೌಡರು ಹೇಳಿದರು.

ಕೆಲವೊಂದು ತಾಂತ್ರಿಕ ಸಮಸ್ಯೆ ಇದ್ದರೆ ಒಪ್ಪಿಕೊಳ್ಳುತ್ತೇವೆ. ಹಾಗೆಂದ ಮಾತ್ರಕ್ಕೆ ನೀವು ಅಕ್ಕಿ ಕೊಡುವುದೇ ಇಲ್ಲ ಎಂದರೆ ಹೇಗೆ? ಹಾಗಾದರೆ ನಿಮ್ಮ ಒಕ್ಕೂಟ ವ್ಯವಸ್ಥೆಯಿಂದ ಕರ್ನಾಟಕ ರಾಜ್ಯವನ್ನು ತೆಗೆದು ಹಾಕಿ ನೋಡೋಣ ಎಂದು ಶಿವಲಿಂಗೇಗೌಡ ಸವಾಲು ಹಾಕಿದರು.

ಕೇಂದ್ರ ಸರ್ಕಾರ ರಾಜ್ಯಗಳ ಕ್ಷೇಮಾಭಿವೃದ್ಧಿಗೆ ಸ್ಪಂದಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಅದನ್ನು ಬಿಟ್ಟು ಯೋಜನೆಗೆ ಅಗತ್ಯ ಅಕ್ಕಿಯನ್ನು ಕೊಡುವುದೇ ಇಲ್ಲ ಎಂದರೆ ಹೇಗೆ ಎಂದ ಶಿವಲಿಂಗೇಗೌಡರು, ಹಾಗಿದ್ದ ಮೇಲೆ ನಮ್ಮಿಂದ ನೀವು ತೆಗೆದುಕೊಳ್ಳುವ ತೆರಿಗೆಯನ್ನು ವಾಪಸ್ ಕೊಡಿ ನೋಡೋಣ ಎಂದರು.

ಈ ಸುದ್ದಿ ಓದಿದ್ದೀರಾ?:ಸಿ ಟಿ ರವಿ ಅವರೇ ಇಲ್ಲಿದೆ ನೋಡಿ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ: ಸಿದ್ದರಾಮಯ್ಯ ಟ್ವೀಟ್

ಫುಡ್ ಸೆಕ್ಯೂರಿಟಿ ಆ್ಯಕ್ಟ್ ತಂದಿದ್ದು ನಮ್ಮ ಮನಮೋಹನ್ ಸಿಂಗ್, ಯಾರೂ ಹಸಿವಿನಿಂದ ಇರಬಾರದು ಎಂದು ತಂದಿರುವ ಫುಡ್ ಆ್ಯಕ್ಟ್ ಇದು. ಎಫ್‌ಸಿಐನಲ್ಲಿ 7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇದೆ, ಆದರೂ ಈಗ ಅಕ್ಕಿ ಇಲ್ಲ ಎನ್ನುತ್ತಿದ್ದೀರಾ? ಹಾಗಿದ್ದ ಮೇಲೆ ಈ ಬಗ್ಗೆ ತನಿಖೆ ಮಾಡಿಸಿ ನೋಡೋಣ ಎಂದು ಶಿವಲಿಂಗೇಗೌಡರು ಕೇಳಿದರು.

ಅಕ್ಕಿ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಸರಿಯಲ್ಲ. ರಾತ್ರಿ ಅಕ್ಕಿ ಕೊಡುತ್ತೇವೆ ಎಂದವರು, ಬೆಳಗ್ಗೆ ಅಕ್ಕಿ ಇಲ್ಲ ಅಂದ್ರೆ ಹೇಗೆ? ಪುಡ್ ಸೆಕ್ಯುರಿಟಿ ಆ್ಯಕ್ಟ್ ತಂದಿದ್ದು ಯಾಕೆ? ಎಂದು ಪ್ರಶ್ನಿಸಿದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ನಿರ್ಬಂಧದ ಬೆನ್ನಲ್ಲೇ ಕೇರಳಕ್ಕೆ ಕಾಲಿಟ್ಟ ಪ್ರತಿಭಟನೆ: ನಾಳೆ ಕೊಚ್ಚಿಯಲ್ಲಿ ಸಿಜೆಪಿಯಿಂದ ‘ಎಸ್‌ಐಆರ್‌’ ವಿರೋಧಿ ಧರಣಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕಾಕ್ರೋಚ್...

ರಸ್ತೆ ಅಭಿವೃದ್ಧಿಗೆ 20000 ಕೋಟಿ ರೂಪಾಯಿ ಸಂಪುಟ ಅನುಮೋದನೆ

ಲೋಕೋಪಯೋಗಿ ಇಲಾಖೆಯಿಂದ ಒಟ್ಟು 20,000 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ,...

SC-ST ಮೀಸಲಾತಿ ರಕ್ಷಣೆಗೆ ಸುಪ್ರೀಂಗೆ ಮೇಲ್ಮನವಿ, 9ನೇ ಅನುಸೂಚಿಗೆ ಸೇರ್ಪಡೆ ಅಗತ್ಯ: ನ್ಯಾ. ನಾಗಮೋಹನ್ ದಾಸ್

ಪ.ಜಾತಿ ಮತ್ತು ಪ.ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ...

ಕೇರಳ ರಾಜ್ಯಪಾಲರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ‘ಬಿಜೆಪಿ’ ಟ್ಯಾಗ್: ರಾಷ್ಟ್ರಪತಿಗೆ ದೂರು ನೀಡಿದ ಎಸ್‌ಎಫ್‌ಐ

ಕೇರಳದ ನೂತನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರ ಅಧಿಕೃತ ಇನ್‌ಸ್ಟಾಗ್ರಾಮ್...