ರಿಸರ್ವೇಶನ್ ತೆಗೆದು ಒಗೀರಿ: ಮೀಸಲಾತಿ ಬಗ್ಗೆ ಜಮಖಂಡಿ ಬಿಜೆಪಿ ಶಾಸಕರ ವಿವಾದಾತ್ಮಕ ಹೇಳಿಕೆ ವಿಡಿಯೋ ವೈರಲ್

Date:

ಮೀಸಲಾತಿ ಬಗ್ಗೆ ಬಿಜೆಪಿ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ಹೇಳಿಕೆಯ ವಿಡಿಯೋ ವೈರಲ್ ಆಗಿದೆ.

- Advertisement -

ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಜಮಖಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಜಗದೀಶ್, ‘ಕುಲಕುಲವೆಂದು ಬಡಿದಾಡದಿರಿ ಎಂದು ಕನಕದಾಸರು ಹೇಳಿದ್ದಾರೆ. ಕುಲಕುಲವೆಂದು ಬಡಿದಾಡದಿರಿ, ಕುಲದ‌ ನೆಲೆಯನ್ನೇನಾದರೂ ಬಲ್ಲಿರಾ? ಎಂದು ಹಿಂದಿನ ಕಾಲದಲ್ಲೇ ಹೇಳಿದ್ದರು. ಹಾಗೆ ನೋಡಿದರೆ ಕುಲ ಎನ್ನುವುದು ಇಲ್ಲವೇ ಇಲ್ಲ. ಏನಾದರೂ ಸಿಗುತ್ತೆ ಅಂತ ಮೀಸಲಾತಿ ಸಂಬಂಧ ಬಡಿದಾಟ ನಡೀತಿದೆ. ಮೀಸಲಾತಿ ತೆಗೆದು ಒಗೀರಿ, ಎಲ್ಲರೂ ಟಾಪ್ ಕ್ಲಾಸ್​ನಲ್ಲಿ ಬಂದುಬಿಡುತ್ತೀರಾ’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ...

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ ಮುನ್ನೆಲೆಗೆ ಬಂದಿರುವ ಹೆಸರು. ಇತಿಹಾಸದ ನಿರೂಪಣೆ, ರಂಗಭೂಮಿಯ ಬಳಕೆ, ಧಾರ್ಮಿಕ ಮತ್ತು ರಾಜಕೀಯ ವಿಚಾರಗಳ ಅಭಿವ್ಯಕ್ತಿ ಹಾಗೂ ಕೋಮು ಸೌಹಾರ್ದದ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಶಾಸಕ ಜಗದೀಶ್ ಅವರ ಹೇಳಿಕೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗುತ್ತಿದ್ದಂತೆಯೇ, ದಲಿತಪರ ಸಂಘಟನೆ ಖಂಡಿಸಿದೆ. ಸಂಘಟನೆ ಕಾರ್ಯಕರ್ತರು ರಾತ್ರೋರಾತ್ರಿ ಬಿಜೆಪಿ ಶಾಸಕ ಜಗದೀಶ್ ಮನೆ ಮುತ್ತಿಗೆಗೆ ಯತ್ನಿಸಿ, ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದವೂ ನಡೆಯಿತು.

ಜಮಖಂಡಿಯ ದೇಸಾಯಿ ಸರ್ಕಲ್‌ನಲ್ಲಿ ಇಂದು(ಬುಧವಾರ) ಅಂಬೇಡ್ಕರ್ ಸೇನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಶಾಸಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ಈ ದಿನ.ಕಾಮ್ ಜೊತೆಗೆ ಮಾತನಾಡಿದ ಅಂಬೇಡ್ಕರ್ ಸೇನೆಯ ಮುಖಂಡ ಸೂರಜ್ ಕುದ್ರಾಣಿ, ಶಾಸಕರು ನೀಡಿರುವ ಹೇಳಿಕೆಯು ಸಂವಿಧಾನ ಬಾಹಿರ. ತಳಸಮುದಾಯಗಳನ್ನು ಮೇಲೆತ್ತಲು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ ಅವರು ಕಂಡುಕೊಂಡ ದೂರದೃಷ್ಟಿಯ ಮಾರ್ಗ. ಅದರಿಂದಾಗಿಯೇ ಇಂದು ದಲಿತ ಸಮುದಾಯ ಸೇರಿ ಹಿಂದುಳಿದ ವರ್ಗದ ಮಂದಿ ಮೇಲೆ ಬಂದಿದ್ದಾರೆ. ಅವರ ಏಳಿಗೆಯನ್ನು ಸಹಿಸದೆ ಬಿಜೆಪಿಯವರು ಅದರಲ್ಲೂ ಜನಪ್ರತಿನಿಧಿಗಳು ಈ ರೀತಿ ಹೇಳಿರುವುದು ಸರಿಯಲ್ಲ. ಇದು ಖಂಡನೀಯ. ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಶಾಸಕರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

‘ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗಂಟಿಯವರ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತೇವೆ. ಬಿಜೆಪಿ ಮತ್ತು ಸಂಘಪರಿವಾರದವರು ಹಿಂದಿನಿಂದಲೂ ಮೀಸಲಾತಿ ವಿರೋಧಿಗಳು. ಜನಪ್ರತಿನಿಧಿಗಳು ಈ ರೀತಿಯಾಗಿ ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವುದು ಸರಿಯಲ್ಲ. ಜನಪ್ರತಿನಿಧಿಯಾದವರಿಗೆ ಸಂವಿಧಾನ ಕಲ್ಪಿಸಿರುವ ಮೀಸಲಾತಿ ಬಗ್ಗೆಯೇ ಈ ರೀತಿಯ ಅಸಡ್ಡೆಯ ಮನೋಭಾವ ಇರುವುದನ್ನು ನೋಡಿದರೆ ಇವರು ಜನಪ್ರತಿನಿಧಿಯಾಗಲು ಅನರ್ಹರು. ಹಣ ಬಲದಿಂದ ಶಾಸಕರಾಗಿ ಆಯ್ಕೆಯಾದವರಿಂದ ಮಾತ್ರ ಇಂತಹ ಹೇಳಿಕೆ ಬರುತ್ತದೆ. ಶಾಸಕರ ಈ ಹೇಳಿಕೆ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಬಗ್ಗೆ ಇರುವ ಮನಸ್ಥಿತಿಯನ್ನು ತೋರಿಸುತ್ತದೆ. ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತೇವೆ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಸಾಗರ ಬಣ)ಯ ಬಾಗಲಕೋಟೆ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬ್ಳೆ ಈ ದಿನ.ಕಾಮ್ ಜೊತೆಗೆ ಮಾತನಾಡುತ್ತಾ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಯುಪಿ ಚುನಾವಣೆ | ಎಸ್‌ಪಿ ಜೊತೆ ಸೀಟು ಹಂಚಿಕೆಗೆ ಕಾಂಗ್ರೆಸ್ ಸಿದ್ಧತೆ; 125 ಸ್ಥಾನಗಳಿಗೆ ಪ್ರಿಯಾಂಕಾ ಪಡೆ ಬೇಡಿಕೆ!

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ....