ರೇಣುಕಾಸ್ವಾಮಿ ಕೊಲೆ | ನಟ ದರ್ಶನ್‌ ಪ್ರಭಾವಿ ರಾಜಕಾರಣಿಗೆ ಕರೆ ಮಾಡಿಲ್ಲ: ಗೃಹ ಸಚಿವ ಪರಮೇಶ್ವರ್

Date:

ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅವರು ಬಚಾವ್ ಆಗಲು ಪ್ರಭಾವಿ ರಾಜಕಾರಣಿಗೆ ಫೋನ್ ಕರೆ ಮಾಡಿದ್ದಾರೆ ಎನ್ನಲಾಗಿರುವ ಸಂಗತಿಯನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅಲ್ಲಗಳೆದಿದ್ದಾರೆ.

- Advertisement -

ಬೆಂಗಳೂರನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ನನಗೆ ಈ ಬಗ್ಗೆ ಮಾಹಿತಿ ಇಲ್ಲ. ನನಗೆ ಗೊತ್ತಿದ್ದ ಹಾಗೆ ಅವರು ಪ್ರಯತ್ನ ಮಾಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನಲ್ಲಿ ಏನು ಕ್ರಮ ತೆಗೆದುಕೊಳ್ಳಲು ಅವಕಾಶವಿದೆಯೋ ಪೊಲೀಸರು ಅದನ್ನು ತೆಗೆದುಕೊಳ್ಳುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ದರ್ಶನ್‌ ಬಂಧನ ವಿಚಾರದಲ್ಲಿ ಸರ್ಕಾರದಿಂದ ನಾವ್ಯಾರು ಮಧ್ಯಪ್ರವೇಶ ಮಾಡಲ್ಲ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ.ಕೊಲೆಯಲ್ಲಿ ಭಾಗಿಯಾಗಿದ್ದಾರೆ ಅಂತ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಯಾವ ಯಾವ ವಿಚಾರ ಹೊರಗೆ ಬರುತ್ತೆ ಅದನ್ನಾದರಿಸಿ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ದರ್ಶನ್ ಅವರಿಗೂ ಕಾನೂನು ಒಂದೇ, ಪರಮೇಶ್ವರವರಿಗೂ ಕಾನೂನು ಒಂದೇ” ಎಂದರು.

“ಕೊಲೆಯಾದ ರೇಣುಕಾಸ್ವಾಮಿ ಕುಟುಂಬದ ಪರವಾಗಿ ಸರ್ಕಾರ ಏನು ಮಾಡಬಹುದು ಅನ್ನೋದನ್ನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

“ಎಲ್ಲವನ್ನು ಸಿಬಿಐಗೆ ಕೊಡುವ ಅಗತ್ಯ. ಈಗ 13 ಮಂದಿಯನ್ನು ಅರೆಸ್ಟ್ ಮಾಡಿದ್ದೇವೆ. ಯಾರು ಮಾಡಿದ್ದಾರೆ? ಯಾಕೆ ಮಾಡಿದ್ದಾರೆ ಹೆಚ್ಚು ಕಡಿಮೆ ಎಲ್ಲ ವಿಚಾರಗಳು ಗೊತ್ತಾಗಿದೆ. ಹಾಗಾಗಿಬೇರೆ ಏಜೆನ್ಸಿಗಳಿಗೆ ತನಿಖೆಗೆ ಕೊಡುವ ಅಗತ್ಯ ಇಲ್ಲ” ಎಂದರು.

“ದರ್ಶನ್ ಮೇಲೆ ರೌಡಿ ಶೀಟ್ ಓಪನ್ ಮಾಡೋ ವಿಚಾರ ನಾನು ಮಾಧ್ಯಮಗಳಲ್ಲಿ ನೋಡಿದೆ. ದರ್ಶನ್ ಹಲವು ಪ್ರಕರಣಗಳಲ್ಲಿ ಅವರು ಭಾಗಿಯಾಗಿದ್ದಾರೆ ಅಂತ. ಇದನ್ನು ಪೊಲೀಸರು ತನಿಖೆ ಮಾಡುತ್ತಾರೆ. ಪೊಲೀಸರೇ ಸಮರ್ಥರು. ನಮ್ಮನ್ನು ಕೇಳಿ ಸೆಕ್ಷನ್ ಹಾಕೋದಿಲ್ಲ” ಎಂದು ಹೇಳಿದರು.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ವಿಚಾರವಾಗಿ ಮಾತನಾಡಿ, “ಅದು ತನಿಖೆ ನಡೆಯುತ್ತಿದೆ. ಅಂತಿಮವಾಗಿ ಬೇಕಾಗಿರುವುದು ಎವಿಡೆನ್ಸ್. ಅದನ್ನೆಲ್ಲಾ ಮಾಡ್ತಾ ಇದ್ದಾರೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಕಲಿ ಔಷಧಿ ದಂಧೆಯ ಕಿಂಗ್‌ ಪಿನ್ ಪ್ರಶಾಂತ್‌ಗೆ 14 ದಿನ ನ್ಯಾಯಾಂಗ ಬಂಧನ

ನಕಲಿ ಔಷಧಿ ತಯಾರಿಕೆ ಮತ್ತು ಸರಬರಾಜು ದಂಧೆಯ ಮುಖ್ಯ ಸೂತ್ರಧಾರ (ಕಿಂಗ್...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ; ಏನಿದು ಜಿಎಸ್‌ಟಿ ಕೌನ್ಸಿಲ್?

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ...

ಜೈಲಿನಲ್ಲಿರುವ ಪುನೀತ್ ಕೆರೆಹಳ್ಳಿ ವಿರುದ್ಧ ‘ಬಾಡಿ ವಾರೆಂಟ್’ ಜಾರಿ: ಕೋರ್ಟ್ ಈ ಆದೇಶ ನೀಡಿದ್ದೇಕೆ?

ಹಿಂದುತ್ವ ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ...