ಮಣಿಪುರ| ಇವಿಎಂ ನಾಶ; ಏ. 22ರಂದು 11 ಮತಗಟ್ಟೆಗಳಲ್ಲಿ ಮರು ಮತದಾನ

Date:

Advertisements

ಗುಂಡಿನ ದಾಳಿ, ಬೆದರಿಕೆ, ಇವಿಎಂ ನಾಶ ಮೊದಲಾದ ಘಟನೆಗಳು ನಡೆದ ಕಾರಣದಿಂದಾಗಿ ಒಳ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22ರಂದು ಮರು ಮತದಾನ ನಡೆಸಲಾಗುವುದು ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ ಶನಿವಾರ ಘೋಷಿಸಿದ್ದಾರೆ.

ಏಪ್ರಿಲ್ 19 ರಂದು ಈ ಕೇಂದ್ರಗಳಲ್ಲಿ ನಡೆದ ಚುನಾವಣೆಗಳನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಘೋಷಿಸಲಾಗಿದ್ದು, ಹೊಸ ಮತದಾನವನ್ನು ನಿಗದಿಪಡಿಸಲು ಚುನಾವಣಾ ಆಯೋಗದ ನಿರ್ದೇಶನವನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನು ಓದಿದ್ದೀರಾ?   ಮಣಿಪುರ| 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್ ಒತ್ತಾಯ

Advertisements

ಖುರೈ ಕ್ಷೇತ್ರದ ಮೊಯಿರಂಗ್ಯಾಂಪು ಸಾಜೆಬ್ ಮತ್ತು ತೊಂಗಮ್ ಲೈಕೈ ಕ್ಷೇತ್ರಗಾವೊದಲ್ಲಿ ನಾಲ್ಕು ಮತಗಟ್ಟೆಗಲ್ಲಿ, ಇಂಫಾಲ್ ಪೂರ್ವ ಜಿಲ್ಲೆಯ ತೊಂಗ್ಜುನಲ್ಲಿ ಒಂದು ಮತ್ತು ಉರಿಪೋಕ್‌ನಲ್ಲಿ ಮೂರು ಮತಗಟ್ಟೆಗಲ್ಲಿ, ಇಂಫಾಲ್ ಪಶ್ಚಿಮ ಜಿಲ್ಲೆಯ ಕೊಂತೌಜಮ್‌ನಲ್ಲಿ ಒಂದು ಮತಗಟ್ಟೆಗಳಲ್ಲಿ ಮರು ಮತದಾನ ನಡೆಯಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂಘರ್ಷ ಪೀಡಿತ ಮಣಿಪುರದ ಕೆಲವು ಮತಗಟ್ಟೆಗಳಲ್ಲಿ ಗುಂಡಿನ ದಾಳಿ, ಬೆದರಿಕೆ, ಇವಿಎಂಗಳನ್ನು ನಾಶಪಡಿಸಿದ ಘಟನೆಗಳು ನಡೆದಿದೆ. ಜೊತೆಗೆ ಬೂತ್ ವಶಪಡಿಸಿಕೊಂಡ ಆರೋಪಗಳು ಕೂಡಾ ಕೇಳಿಬಂದಿದೆ. ಶುಕ್ರವಾರದಂದು ಎರಡು ಲೋಕಸಭಾ ಕ್ಷೇತ್ರಗಳಾದ ಒಳ ಮಣಿಪುರ ಮತ್ತು ಹೊರ ಮಣಿಪುರದಲ್ಲಿ ಮತದಾನ ನಡೆದಿದ್ದು ಶೇಕಡ 72ರಷ್ಟು ಮತದಾನವಾಗಿದೆ.

ಇದನ್ನು ಓದಿದ್ದೀರಾ? ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಒಟ್ಟು 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿತ್ತು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ, “ಒಳ ಮಣಿಪುರ ಕ್ಷೇತ್ರದ 36 ಮತಗಟ್ಟೆಗಳಲ್ಲಿ ಮತ್ತು ಹೊರ ಮಣಿಪುರ ಕ್ಷೇತ್ರದಲ್ಲಿ 11 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಒತ್ತಾಯಿಸಿ ಮಣಿಪುರ ಮುಖ್ಯ ಚುನಾವಣಾಧಿಕಾರಿಗೆ ಪಕ್ಷವು ದೂರು ನೀಡಿದೆ” ಎಂದು ತಿಳಿಸಿದರು.

ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಿನಿಂದ ಮೈತಿ ಮತ್ತು ಕುಕಿ ಜನಾಂಗದ ನಡುವೆ ಹಿಂಸಾಚಾರ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿಯೂ ಹಿಂಸಾಚಾರ ನಡೆದಿದ್ದು, ಗುಂಡಿನ ಚಕಮಕಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X