ಕೊಳವೆಬಾವಿಗೆ ಬಿದ್ದ ಮಗು ರಕ್ಷಣೆ | ಸಿಎಂ ಸಿದ್ದರಾಮಯ್ಯ, ಸಚಿವ ಎಂ ಬಿ ಪಾಟೀಲ್ ಶ್ಲಾಘನೆ

Date:

ಇಂಡಿ ತಾಲ್ಲೂಕು ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗುವನ್ನು 20 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಎಲ್ಲರನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ಶ್ಲಾಘಿಸಿದ್ದಾರೆ.

- Advertisement -

ಈ ಕುರಿತು ಸಿದ್ದರಾಮಯ್ಯ ಟ್ವೀಟ್‌ ಮಾಡಿ, “ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ. ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ವಿನಂತಿಸಿದ್ದಾರೆ.

ಸಚಿವ ಎಂ ಬಿ ಪಾಟೀಲ್‌ ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಾರ್ಯಾಚರಣೆಗೆ ಸಹಕರಿಸಿದ ಸ್ಥಳೀಯ ಜನರು ಹಾಗೂ ನೇತೃತ್ವ ವಹಿಸಿದ ಜಿಲ್ಲಾಡಳಿತದ ಬಗ್ಗೆಯೂ ಪಾಟೀಲ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಬೋರ್ವೆಲ್ ಗೆ ಜಾರಿದ್ದ ಮಗುವನ್ನು (ಸಾತ್ವಿಕ) ಜೀವಂತವಾಗಿ ರಕ್ಷಿಸಲು ಸಾಧ್ಯವಾಗಿರುವುದು ಅತ್ಯಂತ ಸಮಾಧಾನ ನೀಡಿದೆ ಎಂದಿದ್ದಾರೆ.

ಘಟನೆ ನಡೆದಿರುವ ಸುದ್ದಿ ಬುಧವಾರ ಸಂಜೆ ತಿಳಿಯುತ್ತಿದ್ದಂತೆಯೇ ತಕ್ಷಣ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಸಚಿವರು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದರು. ಗುರುವಾರ ಮಧ್ಯಾಹ್ನ ಕಾರ್ಯಾಚರಣೆ ಯಶಸ್ವಿಯಾಗಿ ಮುಗಿಯುವ ತನಕ ಜಿಲ್ಲಾಡಳಿತದೊಂದಿಗೆ ಪಾಟೀಲ ಅವರು ನಿರಂತರ ಸಂಪರ್ಕದಲ್ಲಿದ್ದರು.

ತೆರೆದ ಬೋರ್ ವೆಲ್: ಸರ್ವೆ ನಡೆಸಿ ಪ್ರಕರಣ ದಾಖಲಿಸಲು ಸೂಚನೆ

ಇದೆ ವೇಳೆ, ಸಚಿವ ಪಾಟೀಲ ಅವರು ಮುಚ್ಚದೆ ಹಾಗೆಯೇ ಬಿಟ್ಟಿರುವ ಕೊಳವೆಬಾವಿಗಳ ಬಗ್ಗೆ ಜಿಲ್ಲೆಯಾದ್ಯಂತ ಸರ್ವೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೊಳವೆಬಾವಿಗಳನ್ನು ಮುಚ್ಚದೆ ಬಿಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳಲು ಈಗಾಗಲೇ ಕಾನೂನು ಇದೆ. ಜಿಲ್ಲೆಯಲ್ಲಿ ಸರ್ವೆ ನಡೆಸಿ, ಬೋರ್ವೆಲ್ ಗಳನ್ನು ಮುಚ್ಚದೆ ಬಿಟ್ಟಿದ್ದರೆ, ಸಂಬಂಧಪಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿರುವಂತೆ ಪ್ರಕರಣ ದಾಖಲಿಸಲು ಅವರು ನಿರ್ದೇಶನ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆಗೆ ಕಾಂಗ್ರೆಸ್ ಪ್ಲ್ಯಾನ್: ಎಸ್‌ಪಿ ಮುಂದೆ 125+ ಸೀಟುಗಳ ಬೇಡಿಕೆ ಇಡಲು ಪ್ರಿಯಾಂಕಾ ಸಜ್ಜು!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷಗಳಾದ...

ಬಿಜೆಪಿ ಬುಲ್ಡೋಜರ್ ರಾಜಕೀಯ: ಬಂಗಾಳದಲ್ಲಿ ಮುಂದುವರೆದ ಎಡಪಂಥೀಯರ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಯೆಂದರೆ ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲ, ಅದು...

TMC ತೊರೆದಿದ್ದ ಯೂಸುಫ್ ಪಠಾಣ್‌ಗೆ ಗುಜರಾತ್ BJP ಸರ್ಕಾರದಿಂದ ಭಾರೀ ಮೌಲ್ಯದ ಭೂಮಿ ಉಡುಗೊರೆ!

ಮಾಜಿ ಕ್ರಿಕೆಟಿಗ, ಪಶ್ಚಿಮ ಬಂಗಾಳದ ಬಹರಾಂಪುರ ಲೋಕಸಭಾ ಕ್ಷೇತ್ರದ ಸಂಸದ ಯೂಸುಫ್...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...