ಪರಿಶಿಷ್ಟರ ಮೀಸಲಾತಿ ವಿಚಾರ; ನಾಳೆ ರಾಜಭವನ ಎದುರು ಕಾಂಗ್ರೆಸ್ ಪ್ರತಿಭಟನೆ

Date:

  • ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೇಳಿದ ಕಾಂಗ್ರೆಸ್
  • ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳು ಪಾಲ್ಗೊಳ್ಳಲು ಮನವಿ

ಪರಿಶಿಷ್ಟರ ಮೀಸಲಾತಿ ಹೆಚ್ಚಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸದೇ ಮೋಸ ಮಾಡಲು ಹೊರಟ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.

ಶುಕ್ರವಾರ ಬೆಳಿಗ್ಗೆ 10 ರಾಜಭವನದ ಎದುರು ಪ್ರತಿಭಟನೆ ನಡೆಸಲಿರುವ ಕಾಂಗ್ರೆಸ್ ನಾಯಕರು ಮೀಸಲಾತಿ ವಿಚಾರದಲ್ಲಿ ಸಮುದಾಯಗಳ ಮೂಗಿಗೆ ತುಪ್ಪ ಸವರಿದ ಸರ್ಕಾರದ ಧೋರಣೆಯ ವಿರುದ್ಧ ಆಕ್ರೋಶ ಹೊರ ಹಾಕಲಿದೆ.

ನಾಳಿನ ಪ್ರತಿಭಟನೆ ವಿಚಾರವಾಗಿ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, “ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಮೀಸಲಾತಿ ಹೆಚ್ಚಳದ ವಿಷಯ ಸೇರಿಸದೆ, ಬಿಜೆಪಿ ಸರ್ಕಾರ ಕೊಟ್ಟ ಮಾತಿಗೆ ವಿರುದ್ಧವಾಗಿ ನಡೆದುಕೊಂಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಸಮುದಾಯ ವಿರೋಧಿ ನೀತಿ ಬಗ್ಗೆ ರಾಜ್ಯಪಾಲರ ಗಮನ ಸೆಳೆಯಲು ಪಕ್ಷ ಪ್ರಮುಖರು ನಿರ್ಧರಿಸಿದ್ದೇವೆ. ಇದಕ್ಕಾಗಿ ರಾಜ್ಯಪಾಲರ ಬಳಿ ಸಮಯಾವಕಾಶ ಕೇಳುತ್ತಿದ್ದೇವೆ ಎಂದ ಶಿವಕುಮಾರ್, ಪ್ರತಿಭಟನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ನಾಯಕರು ಹಾಗೂ ಬೇರೆ ಸಮುದಾಯದ ನಾಯಕರುಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.

ಜನರನ್ನು ನಂಬಿಸಿ ಮೋಸ ಮಾಡಿರುವ ಈ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ. ಹೀಗಾಗಿ ರಾಜ್ಯಪಾಲರು ಈ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಡಿ.ಕೆ ಶಿವಕುಮಾರ್ ಇದೇ ವೇಳೆ ಆಗ್ರಹಿಸಿದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನಿವೃತ್ತ ಐಎಎಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎಂದು 28...

ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಅವರಿಂದ ದೂರು ಚುನಾವಣಾ...

ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು

ಯಶವಂತಪುರ-ನಾಯಂಡಹಳ್ಳಿಗೆ ತೆರಳುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಕಾರ್‌ವೊಂದು...