ಮೀಸಲಾತಿ | ಮತೀಯ ದ್ವೇಷ ಹುಟ್ಟು ಹಾಕಲು ಅಂಬೇಡ್ಕರ್‌ ಹೆಸರು ಬಳಸಿದ ಮೋದಿ: ಸಿದ್ದರಾಮಯ್ಯ

Date:

Advertisements

‘ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು” ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಹೇಳಿರುವುದು ಅತ್ಯಂತ ವಿಷಾದನೀಯವಾದುದು. ಮತೀಯ ದ್ವೇಷ ಹುಟ್ಟಿಸಬೇಕೆಂಬ ಏಕೈಕ ದುರುದ್ದೇಶದಿಂದ ಈ ರೀತಿಯ ಸುಳ್ಳುಗಳನ್ನು ಹೇಳುವ ಮಟ್ಟಕ್ಕೆ ದೇಶದ ಪ್ರಧಾನಿ ಇಳಿಯಬಾರದಿತ್ತು ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾಷಣ ಮತ್ತು ಬರವಣಿಗೆಗಳ ಹನ್ನೆರಡು ಸಂಪುಟಗಳನ್ನು ಮಹಾರಾಷ್ಟ್ರ ಸರ್ಕಾರ ವರ್ಷಗಳ ಹಿಂದೆಯೇ ಪ್ರಕಟಮಾಡಿದೆ. ಅವುಗಳ ಕನ್ನಡ ಅನುವಾದವನ್ನು ನಮ್ಮ ಸರ್ಕಾರವೇ ಮುದ್ರಿಸಿದೆ. ಅಲ್ಲೆಲ್ಲಾದರೂ ಧರ್ಮಾಧಾರಿತ ಮೀಸಲಾತಿ ಬೇಡ ಇಲ್ಲವೇ ಬೇಕು ಎನ್ನುವ ಅಂಬೇಡ್ಕರ್ ಅವರ ಅಭಿಪ್ರಾಯದ ಉಲ್ಲೇಖ ಇದ್ದರೆ ಅದನ್ನು ಪ್ರಧಾನಿ ಮೋದಿಯವರು ದೇಶದ ಜನರ ಮುಂದಿಡಬೇಕು, ಇಲ್ಲವಾದರೆ ಇಂತಹದ್ದೊಂದು ಸುಳ್ಳನ್ನು ಹೇಳಿರುವುದಕ್ಕಾಗಿ ದೇಶದ ಜನರ ಕ್ಷಮೆಯಾಚಿಸಬೇಕು” ಎಂದು ಮಾಧ್ಯಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

“ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿ ಖಂಡಿತ ಧರ್ಮಾಧಾರಿತವಾದುದ್ದಲ್ಲ ಎನ್ನುವ ಸರಳವಾದ ಸತ್ಯವನ್ನು ನರೇಂದ್ರ ಮೋದಿ ಅವರು ಅರ್ಥಮಾಡಿಕೊಳ್ಳದೆ ಹೋಗಿರುವುದು ದುರಂತವೇ ಸರಿ. ಮುಸ್ಲಿಮರಿಗೆ ಅವರೊಳಗಿನ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿಯುವಿಕೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡಲಾಗಿದೆಯೇ ಹೊರತು ಅದು ಧರ್ಮಾಧರಿತವಾದುದ್ದಲ್ಲ. ಇದನ್ನು ನಾನು ಹಲವು ಬಾರಿ ವಿಧಾನಮಂಡಲದ ಒಳಗೆ ಮತ್ತು ಹೊರಗೆ ಹೇಳಿದ್ದೇನೆ” ಎಂದು ಹೇಳಿದ್ದಾರೆ.

Advertisements

“ಬಿಜೆಪಿಯ ಮಿತ್ರ ಪಕ್ಷವಾದ ತೆಲುಗುದೇಶಂ ಪಕ್ಷದ ನಾಯಕರು ಮತ್ತು ಆಂದ್ರಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರೇ ಬಹಿರಂಗವಾಗಿ ಮುಸ್ಲಿಂ ಮೀಸಲಾತಿಯನ್ನು ಬೆಂಬಲಿಸುತ್ತಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಪ್ರಾಯ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮುಸ್ಲಿಮರಲ್ಲಿನ ಹಿಂದುಳಿಯುವಿಕೆಯ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಸನ್ಮಾನ್ಯ ನರೇಂದ್ರ ಮೋದಿ ಅವರು ತಿಳಿದುಕೊಳ್ಳಲು ಬಯಸುವುದಾದರೆ ಈ ಬಗ್ಗೆಯೇ ಅಧ್ಯಯನ ಮಾಡಿರುವ ಸಾಚಾರ್ ಸಮಿತಿಯ ವರದಿಯನ್ನು ಪರಿಶೀಲಿಸುವ ಕಷ್ಟ ತೆಗೆದುಕೊಳ್ಳಬೇಕು. ಆ ವರದಿಯ ಪ್ರಕಾರ ಶಿಕ್ಷಣ ಮತ್ತು ಉದ್ಯೋಗದ ಕ್ಷೇತ್ರಗಳಲ್ಲಿ ಮುಸ್ಲಿಂಮರ ಪ್ರಾತಿನಿಧ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗಿಂತಲೂ ಕಡಿಮೆ ಇದೆ” ಎಂದಿದ್ದಾರೆ.

“ಮುಸ್ಲಿಂ ಸಮುದಾಯದ ಹಿತರಕ್ಷಣೆಗಾಗಿಯೇ ತಲಾಖ್ ನಿಷೇಧ ಮಾಡಿದ್ದೇವೆ, ವಕ್ಪ್ ಕಾಯ್ದೆಗೆ ತಿದ್ದುಪಡಿ ಮಾಡಿದ್ದೇವೆ ಎಂದು ಒಂದೆಡೆ ತಮ್ಮನ್ನು ಮುಸ್ಲಿಂ ಸಮುದಾಯದ ಸುಧಾರಕರಂತೆ ತಮ್ಮನ್ನು ಬಿಂಬಿಸಿಕೊಳ್ಳುತ್ತಿರುವ ನರೇಂದ್ರ ಮೋದಿ ಅವರು ಇನ್ನೊಂದೆಡೆ ಬಜರಂಗ ದಳದ ಕಾರ್ಯಕರ್ತನಂತೆ ಕೋಮುದ್ವೇಷವನ್ನು ಉಗುಳುತ್ತಿರುವುದು ಅವರು ಕೂತಿರುವ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ” ಎಂದು ಟೀಕಿಸಿದ್ದಾರೆ.

“ವಕ್ಪ್ ಬೋರ್ಡಿನಲ್ಲಿ ಮುಸ್ಲಿಂಮೇತರರನ್ನು ಕಡ್ಡಾಯವಾಗಿ ಸದಸ್ಯರನ್ನಾಗಿ ಮಾಡುವ ತಿದ್ದುಪಡಿ ಕೋಮುದ್ವೇಷದಿಂದ ಕೂಡಿರುವುದು ಮೇಲ್ನೋಟದಲ್ಲಿಯೇ ಸಾಬೀತಾಗುತ್ತದೆ. ಇದೇ ಮಾನದಂಡವನ್ನು ಮುಂದಿನ ದಿನಗಳಲ್ಲಿ ಹಿಂದೂ ಮಠ-ಮಂದಿರಗಳಿಗೂ ವಿಸ್ತರಿಸಬೇಕೆಂಬ ಬೇಡಿಕೆ ಹುಟ್ಟಿಕೊಂಡರೆ ಸಮಾಜದಲ್ಲಿ ಅನವಶ್ಯಕವಾಗಿ ಧರ್ಮ-ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುವುದಿಲ್ಲವೇ? ದೇಶದ ಪ್ರಧಾನಿಯಾದವರು ಇಂತಹ ಸಂಘರ್ಷಗಳನ್ನು ನಿಯಂತ್ರಿಸಲು ಪ್ರಯತ್ನಿಸಬೇಕೇ ಹೊರತು ಹುಟ್ಟುಹಾಕುವುದಲ್ಲ” ಎಂದಿದ್ದಾರೆ.

“ಕರ್ನಾಟಕದಲ್ಲಿ ದಲಿತರ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಂಮರಿಗೆ ನೀಡಲಾಗಿದೆ ಎನ್ನುವ ಇನ್ನೊಂದು ಸುಳ್ಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂತಹ ಆಧಾರ-ತಲೆಬುಡ ಇಲ್ಲದ ಆರೋಪಗಳನ್ನು ಮಾಡುವಾಗ ಪ್ರಧಾನಿಯವರು ಕನಿಷ‍್ಠ ವಾಸ್ತವಾಂಶಗಳನ್ನು ತಿಳಿದುಕೊಳ್ಳುವ ಪ್ರಯತ್ನವನ್ನಾದರೂ ಮಾಡಬೇಕಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆಯೇ ಹೊರತು ಕಡಿಮೆ ಮಾಡಿಲ್ಲ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ಶಿಫಾರಸಿನ ಆಧಾರದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ ಮೂರರಿಂದ ಏಳಕ್ಕೆ ಹೆಚ್ಚಿಸಲಾಗಿದೆ. ಹೀಗಿರುವಾಗ ಅವರಿಂದ ಕಿತ್ತುಕೊಳ್ಳುವುದೇನು ಬಂತು? ಇಂತಹ ಮೂಲಭೂತ ಮಾಹಿತಿಯೂ ಇಲ್ಲದ ಪ್ರಧಾನಿ ಮೋದಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿ ತಮ್ಮ ಘನತೆಯನ್ನು ತಾವೇ ಹಾಳುಗೆಡಹುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X