ಮೀಸಲಾತಿ ಹೇಳಿಕೆ | ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ನಾಯಕರಿಂದ ದೂರು ದಾಖಲು

Date:

Advertisements

ಮೀಸಲಾತಿ ಕುರಿತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ಶನಿವಾರ ದೂರು ಸಲ್ಲಿಸಿದ್ದಾರೆ.

ದೂರು ಸಲ್ಲಿಕೆಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ” ತಕ್ಷಣ ಎಫ್‍ಐಆರ್ ದಾಖಲಿಸಲು ಪೊಲೀಸರನ್ನು ಕೋರಿದ್ದೇವೆ. ಇದರಲ್ಲಿ ಜಾಮೀನುರಹಿತ ವಾರಂಟ್ ಇದೆ. ಆದ್ದರಿಂದ ಅವರ ಮೇಲೆ ಕ್ರಮ ಜರುಗಿಸಬೇಕಿದೆ” ಎಂದು ಒತ್ತಾಯಿಸಿದರು.

“ಭಾರತದ ಬಗ್ಗೆ ಹೊರದೇಶದಲ್ಲಿ ಕುಳಿತು ಅಪಮಾನಕರ ಹೇಳಿಕೆ ನೀಡಿದ್ದಾರೆ. ದಲಿತ ಸಮುದಾಯಗಳನ್ನು ನಿಂದಿಸಿದ್ದಾರೆ. ರಾಹುಲ್ ಗಾಂಧಿ ಅವರು ಪ್ರಬುದ್ಧರಾಗಿದ್ದಾರೆಂದು ಭಾವಿಸಿದ್ದೆವು. ಅವರು ಇನ್ನೂ ಪ್ರಬುದ್ಧತೆ ಹೊಂದಿಲ್ಲ ಎಂಬುದು ಅವರ ಹೇಳಿಕೆಗಳಿಂದ ಗೊತ್ತಾಗುತ್ತಿದೆ” ಎಂದರು.

Advertisements

“1977-78ರಲ್ಲಿ ಮೊರಾರ್ಜಿ ದೇಸಾಯಿಯವರ ಸರಕಾರ ಇದ್ದಾಗ ರಾಹುಲ್ ಅವರ ಅಜ್ಜಿ ಇಂದಿರಾ ಗಾಂಧಿಯವರನ್ನು ಬಂಧಿಸಿದ್ದರು. ಮತ್ತೆ ಚುನಾವಣೆ ನಡೆದಾಗ ಇಂದಿರಾ ಅವರು ಮತ್ತೆ ಪ್ರಧಾನಿಯಾದರು. ಅಮೆರಿಕಕ್ಕೆ ಹೋದಾಗ ಅಲ್ಲಿನ ಪತ್ರಕರ್ತರು ಇಂದಿರಾ ಅವರನ್ನು ನೀವು ಎಲ್ಲರನ್ನು ತುರ್ತು ಪರಿಸ್ಥಿತಿ ವೇಳೆ ಜೈಲಿಗೆ ಕಳಿಸಿದ್ದೀರಿ. ಈಗ ನಿಮ್ಮ ಜೈಲಿನ ಅನುಭವ ಹೇಳಿ ಎಂದು ಪ್ರಶ್ನಿಸಿದ್ದರು. ಆಗ ಅವರ ಅಜ್ಜಿ, ಅದು ನನ್ನ ದೇಶದ ವಿಚಾರ; ಹೊರಗಡೆ ಅದನ್ನು ನಾನು ಪ್ರಸ್ತಾಪ ಮಾಡುವುದಿಲ್ಲ ಎಂದಿದ್ದರು. ರಾಹುಲ್ ಅವರೇ, ನಿಮ್ಮ ಅಜ್ಜಿಯನ್ನು ನೋಡಿ ನೀವು ಕಲಿತಿಲ್ಲ ಅಲ್ಲವೇ? ಇನ್ನೇನು ಕಲೀತೀರಿ ನೀವು” ಎಂದು ಪ್ರಶ್ನಿಸಿದರು

“ಮೋದಿಯವರ ಕುರಿತು ಹಗುರವಾಗಿ ಹೊರದೇಶದಲ್ಲಿ ಮಾತನಾಡುತ್ತೀರಿ. ನೀವೇನೇ ಮಾತನಾಡಬೇಕಿದ್ದರೂ ನಮ್ಮ ದೇಶದಲ್ಲಿ ಮಾತನಾಡಿ ಎಂದರಲ್ಲದೆ, ಅಂಥ ಕೆಟ್ಟ ಪರಿಸ್ಥಿತಿಯನ್ನು ಕಾಂಗ್ರೆಸ್ಸಿನಿಂದ ಮತ್ತು ರಾಹುಲ್ ಗಾಂಧಿಯಿಂದ ಈ ದೇಶವಾಸಿಗಳು ಅನುಭವಿಸಬೇಕಾಗಿದೆ” ಎಂದು ಹೇಳಿದರು.

“ವಿಜಯಪುರ, ಬೆಳಗಾವಿ, ಬಾಗಲಕೋಟೆಯಲ್ಲೂ ರಾಹುಲ್‌ ಗಾಂಧಿ ವಿರುದ್ಧ ಇವತ್ತು ದೂರುಗಳನ್ನು ಕೊಡಲಾಗಿದೆ. ಬೇರೆ ರಾಜ್ಯಗಳಲ್ಲೂ ಕೂಡ ದೂರುಗಳು ದಾಖಲಾಗಿವೆ. ಯಾವುದೇ ಸಬೂಬು ನೀಡದೆ ಎಫ್‍ಐಆರ್ ಮಾಡಬೇಕು” ಎಂದು ಆಗ್ರಹಿಸಿದರು.

“ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಸಂವಿಧಾನ ರಕ್ಷಕರು ತಾವೇ ಎನ್ನುತ್ತಾರೆ. ಸಂವಿಧಾನಕ್ಕೆ ಅಪಮಾನ ಮಾಡುತ್ತಾರೆ ಎಂದು ಟೀಕಿಸಿದರು. ಭ್ರಷ್ಟಾಚಾರಗಳನ್ನು ಮುಚ್ಚಿಕೊಳ್ಳುವ ಕಾರಣಕ್ಕಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ” ಎಂದು ಟೀಕಿಸಿದರು.

ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಪಕ್ಷದ ಮುಖಂಡ ಭಾಸ್ಕರ್ ರಾವ್, ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಸೇರಿದಂತೆ ಇತರರು ಬಿಜೆಪಿ ನಿಯೋದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X