ಭಾರತೀಯ ನ್ಯಾಯಾಲಯದಲ್ಲಿ ರಾಹುಲ್ ಪ್ರಕರಣದ ಮೇಲೆ ಕಣ್ಣಿಟ್ಟಿದ್ದೇವೆ: ಅಮೆರಿಕ

Date:

Advertisements
  • ರಾಹುಲ್‌ ಅನರ್ಹತೆ ಪ್ರ‍ಶ್ನೆಗೆ ಅಮೆರಿಕದ ವಕ್ತಾರ ವೇದಾಂತ್‌ ಪ್ರತಿಕ್ರಿಯೆ
  • ಶಿಕ್ಷೆಯ ನಂತರ ರಾಹುಲ್‌ ಸದಸ್ಯತ್ವ ಅನರ್ಹಗೊಳಿಸಿದ ಲೋಕಸಭೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ನ್ಯಾಯಾಲಯದ ಶಿಕ್ಷೆ ಹಾಗೂ ಲೋಕಸಭೆ ಸದಸ್ಯತ್ವ ಅಮಾನತು ಭಾರತದಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು ಸೃಷ್ಟಿಸುತ್ತಿರುವ ನಡುವೆ ಅಮೆರಿಕ ಈ ಪ್ರತಿಕ್ರಿಯೆ ನೀಡಿದೆ.

“ಕಾನೂನು ಹಾಗೂ ನ್ಯಾಯಾಂಗದ ಸ್ವಾತಂತ್ರ್ಯ ಯಾವುದೇ ಪ್ರಜಾಪ್ರಭುತ್ವದ ಮೂಲಾಧಾರ. ಹೀಗಾಗಿ ನಾವು ಭಾರತೀಯ ನ್ಯಾಯಾಲಯಗಳಲ್ಲಿ ರಾಹುಲ್‌ ಗಾಂಧಿ ಅವರ ಪ್ರಕರಣ ಇತ್ಯರ್ಥಗೊಳ್ಳುವ ಪ್ರಕ್ರಿಯೆಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ” ಎಂದು ಅಮೆರಿಕದ ರಾಜ್ಯ ಪ್ರಧಾನ ಉಪ ವಕ್ತಾರ ವೇದಾಂತ್‌ ಪಟೇಲ್‌ ಸೋಮವಾರ (ಮಾರ್ಚ್ 27) ತಿಳಿಸಿದ್ದಾರೆ.

ವಾಷಿಂಗ್ಟನ್‌ನಲ್ಲಿ ಮಾಧ್ಯಮಗೋಷ್ಠಿಯೊಂದರಲ್ಲಿ ಭಾರತದ ಸಂಸತ್ತಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಅನರ್ಹತೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

Advertisements

ಆದರೆ ಅಮೆರಿಕದ ಸಂಸತ್ ಸದಸ್ಯ ರೋ ಖನ್ನಾ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದು ಗಾಂಧಿವಾದಿ ಮೌಲ್ಯಗಳು ಮತ್ತು ಭಾರತದ ಮೂಲತತ್ವಗಳಿಗೆ ಎಸಗಿದ ದ್ರೋಹ. ನನ್ನ ಮುತ್ತಾತ ವರ್ಷಗಟ್ಟಲೆ ಜೈಲಿನಲ್ಲಿದ್ದು ತ್ಯಾಗ ಮಾಡಿರುವುದು ಭಾರತದ ಪ್ರಜಾಪ್ರಭುತ್ವವನ್ನು ಇಂತಹ ಸ್ಥಿತಿಯಲ್ಲಿ ನೋಡಲೋಸುಗ ಅಲ್ಲ” ಎಂದು ಕಟುವಾಗಿ ಟೀಕಿಸಿದ್ದಾರೆ.

ಆದರೆ, ಅಮೆರಿಕದ ಅಧಿಕೃತ ವಕ್ತಾರರು ಇನ್ನೂ ಭಾರತ ಸರ್ಕಾರವನ್ನು ಸಂಪೂರ್ಣವಾಗಿ ಟೀಕಿಸಿಲ್ಲ. ಬದಲಾಗಿ ಕಾದು ನೋಡುವ ಪ್ರವೃತ್ತಿಯನ್ನು ಅಳವಡಿಸಿಕೊಂಡಿದ್ದಾರೆ. “ಭಾರತ ಸರ್ಕಾರದ ಜೊತೆಗಿನ ಒಪ್ಪಂದದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಪ್ರಜಾಪ್ರಭುತ್ವ ಮೌಲ್ಯಗಳ ಹಂಚಿಕೆಯಲ್ಲಿ ಬದ್ಧತೆಯ ಆಧಾರದಲ್ಲಿ ಅಮೆರಿಕ ಕಾರ್ಯನಿರ್ವಹಿಸುತ್ತಿದೆ. ನಮ್ಮ ಒಪ್ಪಂದಗಳಲ್ಲಿ ಪ್ರಜಾಪ್ರಭುತ್ವ ತತ್ವಗಳ ಪ್ರಾಮುಖ್ಯತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಮಾನವ ಹಕ್ಕುಗಳ ರಕ್ಷಣೆಯ ಅಂಶಗಳು ನಮ್ಮ ಎರಡೂ ರಾಷ್ಟ್ರಗಳನ್ನು ಸದೃಢಗೊಳಿಸುವ ಪ್ರಮುಖ ಕೀಲಿಕೈ ಎಂದು ಪ್ರತಿಬಿಂಬಿಸುವುದನ್ನು ಮುಂದುವರಿಸುತ್ತೇವೆ” ಎಂದು ವೇದಾಂತ್‌ ಪಟೇಲ್‌ ಹೇಳಿದ್ದಾರೆ.

ಅಮೆರಿಕ, ಭಾರತ ಅಥವಾ ರಾಹುಲ್‌ ಗಾಂಧಿ ಯಾರೊಡನೆ ಸಂಪರ್ಕ ಸಾಧಿಸುತ್ತದೆ? ಎಂಬ ಪ್ರಶ್ನೆಗೆ ಉತ್ತರಿಸಿದ ವೇದಾಂತ್‌ ಪಟೇಲ್, “ಸಂಪರ್ಕ ಸಾಧಿಸಲು ನಿರ್ದಿಷ್ಟ ವಿಷಯಗಳಿಲ್ಲ. ಆದರೆ ಯಾವುದೇ ರಾಷ್ಟ್ರಗಳಲ್ಲಿ ಪ್ರತಿಪಕ್ಷ ನಾಯಕರೊಂದಿಗೆ ನಾವು ಸಂಪರ್ಕ ಸಾಧಿಸುವುದು ಸಾಮಾನ್ಯ. ನಾವು ದ್ವಿಪಕ್ಷೀಯ ಸಂಬಂಧವನ್ನೂ ಸಾಧಿಸುತ್ತೇವೆ. ಆದರೆ ಸಂಪರ್ಕ ಸಾಧಿಸಲು ಯಾವುದೇ ನಿರ್ದಿಷ್ಟ ಒಪ್ಪಂದ ಹೊಂದಿಲ್ಲ” ಎಂದು ಹೇಳಿದರು.

‘ಮೋದಿ ಉಪನಾಮ’ದ ಕುರಿತು ಟೀಕೆಯ ಹಿನ್ನೆಲೆ ದಾಖಲಾದ ಪ್ರಕರಣದ ಆಧಾರದಲ್ಲಿ ಸೂರತ್‌ ನ್ಯಾಯಾಲಯ ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸಂಸತ್‌ ಸದಸ್ಯತ್ವ ಸ್ಥಾನದಿಂದ ಮಾರ್ಚ್‌ 24ರಂದು ವಜಾಗೊಳಿಸಿದ್ದರು. ರಾಹುಲ್‌ ಅವರು ಕೇರಳದ ವಯನಾಡು ಕ್ಷೇತ್ರದ ಸಂಸದರಾಗಿದ್ದರು.

2019ರ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ರಾಹುಲ್‌ ಗಾಂಧಿ ‘ಮೋದಿ ಉಪನಾಮ’ದ ಕುರಿತು ಟೀಕಿಸಿದ್ದರು. ಈ ಸಂಬಂಧ ದಾಖಲಾದ ಪ್ರಕರಣದಲ್ಲಿ ಗುಜರಾತ್‌ನ ಸೂರತ್‌ ನ್ಯಾಯಾಲಯ ಮಾರ್ಚ್ 23ರಂದು ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿತ್ತು.

2019ರ ಏಪ್ರಿಲ್‌ನಲ್ಲಿ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೋಲಾರದಲ್ಲಿ ಸಮಾವೇಶದ ವೇಳೆ, “ಎಲ್ಲ ಕಳ್ಳರಿಗೂ ಮೋದಿ ಎಂಬ ಸಾಮಾನ್ಯ ಹೆಸರು ಏಕಿರುತ್ತದೆ?” ಎಂದು ರಾಹುಲ್‌ ವ್ಯಂಗ್ಯವಾಡಿದ್ದರು. ಇದನ್ನು ಖಂಡಿಸಿ ಸೂರತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ರಾಹುಲ್‌ ಅವರ ವಿರುದ್ಧ ಅಪರಾಧ ಮಾನಹಾನಿ ಪ್ರಕರಣ ದಾಖಲಿಸಿದ್ದರು.

5d4d09db59db7dd57fe9e8598de7b91a?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X