ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ: ಸಿಎಂ ಸಿದ್ದರಾಮಯ್ಯ

Date:

Advertisements

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ, ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಹಣವಂತರು, ಬಲಾಢ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು” ಎಂದರು.

Advertisements

“ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ. ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲ ಅಧಿಕಾರಿಗಳಲ್ಲೂ ಇರಬೇಕು. ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು” ಎಂದರು.

“ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರು ಮಾಡಬೇಕು” ಎಂದರು.

“ಚಾಳಿಬಿದ್ದ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡಬೇಕು. ರೌಡಿಗಳ ಚಲನ ವಲನದ ಬಗ್ಗೆ ಠಾಣಾಧಿಕಾರಿಗಳಿಗೆ, ಠಾಣೆಯ ಸಿಬ್ಬಂದಿಗೆ ಮಾಹಿತಿ ಇರಬೇಕು” ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

cm mysore

ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮುಖ್ಯ ಅತಿಥಿಗಳಾಗಿದ್ದರು.

ನಂಜನಗೂಡು ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಆಶ್ರಯ ಸಮಿತಿ ಅಧ್ಯಕ್ಷರಾದ‌ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X