ಮುಡಾ ಅಕ್ರಮ ತನಿಖೆ ಮಾಡಲು ನಿವೃತ್ತ ನ್ಯಾ. ಪಿ ಎನ್ ದೇಸಾಯಿ ಅನರ್ಹರು: ಆರ್‌ ಅಶೋಕ್

Date:

ಮುಡಾ ಅಕ್ರಮ ತನಿಖೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಮೂರು ವರ್ಷಗಳ ಕಾಲ ಯಾವುದೇ ಶಾಸನಬದ್ಧ ಸಮಿತಿ, ಸ್ವಾಯತ್ತ ಸಮಿತಿ, ನಿಯಂತ್ರಕ ಸಮಿತಿಗೆ ನೇಮಕ ಮಾಡದಂತೆ ನವೆಂಬರ್ 7 ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಮುಡಾ ಅಕ್ರಮ ತನಿಖೆ ಮಾಡಲು ಅನರ್ಹರು ಎಂಬ ವಿಷಯ ಬೆಳಕಿಗೆ ಬಂದಿದೆ ಎಂದು ಪ್ರತಿಪ್ರಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಆರ್‌ ಅಶೋಕ್‌ ಕೇಳಿದ ಪ್ರಶ್ನೆಗಳು ಇಲ್ಲಿವೆ…

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

1- ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು ತನಿಖಾ ಆಯೋಗದಲ್ಲಿ ಮುಂದುವರೆಯಲು ಅನರ್ಹರು ಎಂಬ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು ಯಾವಾಗ?

2- ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಈ ಕುರಿತಂತೆ ಸರ್ಕಾರಕ್ಕೆ ಪತ್ರ ಬರೆಯುವರೆಗೂ ಈ ವಿಷಯ ಸರ್ಕಾರದ ಗಮನಕ್ಕೆ ಬಂದಿರಲಿಲ್ಲವೆ? ಅಥವಾ ಗಮನಕ್ಕೆ ಬಂದಿದ್ದರೂ ಕಾನೂನು ಬಾಹಿರವಾಗಿ ಮುಂದುವರಿಸಲಾಯಿತೆ?

3- ಅವರ ಅನರ್ಹತೆ ಬಗ್ಗೆ ನ್ಯಾಯಮೂರ್ತಿಗಳು ಸ್ವತಃ ತಾವೇ ಸರ್ಕಾರದ ಗಮನಕ್ಕೆ ತಂದು, ತನಿಖಾ ಆಯೋಗದಿಂದ ಹಿಂದೆ ಸರಿಯಬೇಕಾಗಿತ್ತು. ಆದರೆ ಅನರ್ಹತೆ ಆದೇಶ ಬಂದ 5 ದಿನಗಳ ನಂತರ, ಅಂದರೆ ನವೆಂಬರ್ 12ರಂದು ಅವರು ಮುಡಾ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ. ಇದು ತಪ್ಪಲ್ಲವೇ?

4- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳು ಸುರಕ್ಷಿತವಾಗಿದೆಯೇ?

5- ಸ್ವತಃ ನಾಡಿನ ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರು ಆರೋಪಿಗಳಾಗಿರುವ, ಸುಮಾರು 4,000 ಕೋಟಿ ರೂಪಾಯಿ ಮೊತ್ತದ ಬೃಹತ್ ಭ್ರಷ್ಟಚಾರ ನಡೆದಿದ ಎನ್ನಲಾದ ಮುಡಾ ಹಗರಣದ ತನಿಖೆಯಲ್ಲಿ ಸರ್ಕಾರ ಎಷ್ಟು ಗಂಭೀರವಾಗಿದೆ ಎನ್ನುವುದಕ್ಕೆ ಈ ಎಡವಟ್ಟು ನಿದರ್ಶನವಲ್ಲವೇ?

ಸರ್ಕಾರ ಈ ಕೊಡಲೇ ತನಿಖಾ ಆಯೋಗಕ್ಕೆ ನೀಡಿರುವ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ವಶ ಪಡಿಸಿಕೊಳ್ಳಬೇಕು. ತನಿಖಾ ಆಯೋಗದ ಮುಖ್ಯಸ್ಥರಿಗೆ ನವೆಂಬರ್ 7 ರ ನಂತರ ನೀಡಲಾಗಿರುವ ಎಲ್ಲ ಸಂಬಳ, ಸೌಲಭ್ಯಗಳನ್ನು ಹಿಂಪಡೆಯಬೇಕು. ಅನರ್ಹರಾಗಿದ್ದೂ ಸಹ ತನಿಖಾ ಆಯೋಗದಲ್ಲಿ ಮುಂದುವರೆದ ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮತ್ತು ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಬೇಕು” ಎಂದು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...