ಕಾನೂನು ಕುಣಿಕೆಯಿಂದ ಪಾರಾಗಲು ಖರ್ಗೆ ಕುಟುಂಬ ಜಮೀನು ವಾಪಸ್: ಜೆಡಿಎಸ್‌

Date:

ಕಾನೂನು ಬಾಹಿರವಾಗಿ, ರಾಜಕೀಯ ಪ್ರಭಾವ ಬಳಸಿ ಐದು ಎಕರೆ ಜಮೀನು ಕಬಳಿಸಿದ್ದ ಖರ್ಗೆ ಕುಟುಂಬ ಕಾನೂನು ಕುಣಿಕೆಯಿಂದ ಪಾರಾಗಲು ಈಗ ಜಮೀನು ವಾಪಸ್ ನೀಡಿದೆ ಎಂದು ಜೆಡಿಎಸ್‌ ಟೀಕಿಸಿದೆ.

- Advertisement -

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಜೆಡಿಎಸ್‌, “ಈ ಅಕ್ರಮಗಳ ಬಗ್ಗೆ ವಿಪಕ್ಷಗಳು ಧ್ವನಿ ಎತ್ತಿ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿತ್ತು. ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುತ್ತಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಕುಟುಂಬದವರು ಈಗ ಅಕ್ರಮವಾಗಿ ಕಬಳಿಸಿದ್ದ ಸಿಎ ನಿವೇಶನವನ್ನ ಕೆಐಎಡಿಬಿಗೆ ವಾಪಸ್ ನೀಡಿದ್ದಾರೆ. ಭ್ರಷ್ಟರು ಕಬಳಿಸಿದ್ದು ವಾಪಸ್ ಮಾಡಿದರೇ ಶಿಕ್ಷೆಯಿಂದ ಪಾರಾಗಲು ಸಾಧ್ಯವೇ” ಎಂದು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

“ಮುಡಾ ಹಗರಣ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಕಳಂಕಿತ ಸಿಎಂ ಸಿದ್ದರಾಮಯ್ಯ ಕಾನೂನು ಸುರುಳಿ ಬಿಗಿಯಾಗುತ್ತಿದ್ದಂತೆ ಈಗ ಖರ್ಗೆ ಕುಟುಂಬಕ್ಕೂ ಕಾನೂನಿನ ಭಯ ಶುರುವಾಗಿದೆ” ಎಂದಿದೆ.

” ‘ಕೆಟ್ಟ ಮೇಲೆ ಬುದ್ಧಿ ಬಂತು’ ಅಲ್ಲವೇ ಖರ್ಗೆ ಅವರೇ? ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬಾರದು. ಕಳ್ಳ ಕದ್ದ ಮಾಲು ವಾಪಸ್ ಕೊಟ್ಟ ತಕ್ಷಣ ಆತನಿಗೆ ವಿನಾಯಿತಿ ಸಾಧ್ಯವಿಲ್ಲ. ತನಿಖೆ ಎದುರಿಸಲೇಬೇಕು” ಎಂದು ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಹಿನ್ನೆಲೆ ಏನು?

ಕೃಪಾ ಆಳ್ವ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...