ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ದಲಿತರ ಅಭಿವೃದ್ಧಿಗೆ ಹಿಂದಿರುಗಿಸಿ: ದಸಂಸ ಒಕ್ಕೂಟ ಆಗ್ರಹ

Date:

ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ / ಟಿಎಸ್‌ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಕೂಡಲೇ ಹಿಂದಿರುಗಿಸಬೇಕೆಂದು ಹಾಗೂ ಕಾಯ್ದೆಯ ‘7ಡಿ’ ಸೆಕ್ಷನ್ ರದ್ದುಪಡಿಸಿದಂತೆ ‘7ಸಿ’ ಯನ್ನೂ ರದ್ದುಪಡಿಸಬೇಕೆಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದೆ.

- Advertisement -

ಸಂವಿಧಾನ ವಿಧಿ 46ರ ಆಶಯವನ್ನು ಪಾಲಿಸಬೇಕೆಂದು ಒತ್ತಾಯಿಸುತ್ತದೆ. ಹಾಗೂ ಅಂಬೇಡ್ಕ‌ರ್ ಅಭಿವೃದ್ಧಿ ನಿಗಮದಲ್ಲಿ ಬಾಕಿ ಉಳಿದಿರುವ 5 ಲಕ್ಷ ಅರ್ಜಿಗಳನ್ನು ಸೂಕ್ತ ನೆರವು ನೀಡಿ ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಒತ್ತಾಯಿಸುತ್ತೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಕೊಪ್ಪಳ | ಅಮಿತ್ ಶಾ ನಾಡಿನ ಜನತೆಯ ಕ್ಷಮೆಯಾಚಿಸಿ, ರಾಜೀನಾಮೆ ನೀಡುವಂತೆ ಡಿಎಸ್‌ಎಸ್ ಆಗ್ರಹ

“2013ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವೇ ಜಾರಿಗೆ ತಂದ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆಯ ಕಾಯ್ದೆಯು ತನ್ನ ಪರಿಭಾಷೆಯಲ್ಲಿ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಎಂಬುದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯಲ್ಲಿನ ಅಂತರವನ್ನು ತುಂಬಲು ಅನುಮೋದಿಸಿರುವ ಯೋಜನೆ ಎನ್ನುತ್ತದೆ. ಅದರಲ್ಲಿಯೇ ‘ಅಭಿವೃದ್ಧಿಯ ಅಂತರ’ ಎಂದರೆ ಮಾನವ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ ನಿರ್ದಿಷ್ಟವಾಗಿ ಗೊತ್ತುಪಡಿಸಬಹುದಾದಂತೆ ರಾಜ್ಯ ಸರಾಸರಿಗೆ ಹೋಲಿಸಿದಾಗ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸೂಚಕಗಳಲ್ಲಿರುವ ವ್ಯತ್ಯಾಸಗಳು ಎಂದು ವ್ಯಾಖ್ಯಾನಿಸುತ್ತದೆ. ಸಾರಾಂಶದಲ್ಲಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು (ದಲಿತರು) ಮತ್ತು ಇತರ ಸಮುದಾಯಗಳ ನಡುವಿನ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯ ಅಂತರವನ್ನು ಕಡಿಮೆ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶ” ಎಂದು ಯೋಜನೆಯ ಬಗ್ಗೆ ಸಂಘಟನೆಯು ವಿವರಿಸಿದೆ.

“2023-24ನೇ ಸಾಲಿನಿಂದಲೂ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಹಣದಲ್ಲಿ ಸುಮಾರು 25000 ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೂ, 15000 ಕೋಟಿ ರೂಪಾಯಿ ಹಣವನ್ನು ಅನ್ಯ ಉದ್ದೇಶಕ್ಕೂ ಬಳಸಿರುವುದು ಕಾಯ್ದೆಯನ್ನು ಉಲ್ಲಂಘಿಸಿದಂತೆ ಆಗುತ್ತದೆ. ಅಷ್ಟೇ ಅಲ್ಲ, ಕಳೆದ ಬಿಜೆಪಿ ಸರ್ಕಾರ ಮಾಡಿದ ಕೆಲಸವನ್ನೇ ಕಾಂಗ್ರೆಸ್ ಸರ್ಕಾರ ಮಾಡಿದಂತಾಗಿದೆ” ಎಂದು ಸರ್ಕಾರದ ವಿರುದ್ದ ಡಿಎಸ್‌ಎಸ್‌ ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಡಿಎಸ್‌ಎಸ್‌ ಆಗ್ರಹ

“ಅದಷ್ಟೇ ಅಲ್ಲದೆ ಸರ್ಕಾರದ ಸಮಾಜ ಕಲ್ಯಾಣ ಸಚಿವರೂ ಸೇರಿದಂತೆ ಈ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿರುವುದು ಶೋಚನೀಯ. ದಲಿತರ ಒಗ್ಗಟ್ಟಿನ ಓಟುಗಳಿಂದ ಸರ್ಕಾರ ರಚಿಸಿದ ಕಾಂಗ್ರೆಸ್, ಈಗ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದು ಸಮುದಾಯದಲ್ಲಿ ಅಸಮಾಧಾನವನ್ನು ಉಂಟು ಮಾಡಿದೆ” ಎಂದು ತಿಳಿಸಿದೆ.

“ಗ್ಯಾರಂಟಿ ಯೋಜನೆಗಳು ಉತ್ತಮ ಯೋಜನೆಗಳೇ. ಆದರೆ ಅವುಗಳ ಉದ್ದೇಶವೇ ಬೇರೆ, ಎಸ್‌ಸಿಎಸ್‌ಪಿ/ ಟಿಎಸ್‌ಪಿ ಕಾಯ್ದೆಯ ಉದ್ದೇಶವೇ ಬೇರೆ. ಕರ್ನಾಟಕ ಮಾನವ ಅಭಿವೃದ್ಧಿ ವರದಿ 2015ರ ಪ್ರಕಾರ ಇತರೆ ಸಮುದಾಯಗಳಿಗೆ ಹೋಲಿಸಿಕೊಂಡರೆ ದಲಿತರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಹೀಗಿರುವಾಗ ಸಚಿವರು ಮತ್ತು ಮುಖ್ಯಮಂತ್ರಿಗಳು ಹೇಳುತ್ತಿರವಂತೆ, ದಲಿತರಿಗೆ ಮೀಸಲಿಟ್ಟ ಹಣವನ್ನು ಎಸ್‌ಸಿಎಸ್‌ಪಿ/ ಟಿಎಸ್‌ಪಿಯ ಹೊರತಾದ ಅಭಿವೃದ್ಧಿ ಯೋಜನೆಗಳಿಗೆ ಬಳಸುವುದೂ ಬಡತನ ನಿರ್ಮೂಲನೆಯ ಉದ್ದೇಶವನ್ನೇ ಹೊಂದಿದೆ ಎಂಬ ಸಮರ್ಥನೆ ಒಪ್ಪತಕ್ಕುದಲ್ಲ” ಎಂದು ಹೇಳಿದೆ.

“ಹಾಗೇನಾದರೂ ಅವರ ಮಾತು ನಿಜವಾಗಿದ್ದರೆ ಕಳೆದ 2014ರಿಂದ ಇದೇ ದಲಿತರಿಗಾಗಿ ಮೀಸಲಿಟ್ಟ 29,5687 ಕೋಟಿ ಹಣವನ್ನು ಯಾವುದಕ್ಕೆಲ್ಲಾ ಖರ್ಚು ಮಾಡಲಾಗಿದೆ? ಎಷ್ಟು ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬಂದಿವೆ? ಎಂಬ ಅಂಕಿ ಅಂಶಗಳನ್ನು ಸರ್ಕಾರ ಬಿಡುಗಡೆ ಮಾಡಬೇಕಿದೆ ಹಾಗೂ ಉನ್ನತ ಮಟ್ಟದ ಸಮಿತಿಯೊಂದನ್ನು ನೇಮಿಸಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಗುತ್ತಿದೆ? ಎಷ್ಟು ಅಭಿವೃದ್ಧಿ ಆಗಿದೆ? ಎಂಬುದನ್ನು ಅಧ್ಯಯನ ಮಾಡಿ ವರದಿ ಬಿಡುಗಡೆ ಮಾಡಬೇಕಿದೆ” ಎಂದು ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...