ಸದನ ಆರಂಭಕ್ಕೆ ಮುನ್ನವೇ ರದ್ದಾದ ರೇಷನ್‌ ಕಾರ್ಡ್‌ ವಾಪಸ್‌ ನೀಡಿ: ಸರ್ಕಾರಕ್ಕೆ ಆರ್‌ ಅಶೋಕ್‌ ಎಚ್ಚರಿಕೆ

Date:

Advertisements

ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್‌ ಕಾರ್ಡ್‌ ವಾಪಸ್‌ ನೀಡಬೇಕು. ಇಲ್ಲವಾದರೆ ತೀವ್ರ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಮತ್ತು ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಎಚ್ಚರಿಕೆ ನೀಡಿದರು.

ಜಯನಗರದ ಅರಸು ಕಾಲೋನಿಯಲ್ಲಿ ರೇಷನ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಅವರು ಭೇಟಿ ಮಾಡಿದ‌ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ. ಅನ್ನವನ್ನು ಕದ್ದು ಲಕ್ಷಾಂತರ ಜನರಿಗೆ ಅನ್ಯಾಯ ಮಾಡಿದ್ದಾರೆ. ಅರಸು ಕಾಲೋನಿಯಲ್ಲಿ 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆ, ಈಗ ಅರ್ಹತೆ ಕಳೆದುಕೊಂಡಿದ್ದಾರೆ. ಅಂಕಿ ಅಂಶದ ಪ್ರಕಾರ, 250 ಸರ್ಕಾರಿ ನೌಕರರ ಬಳಿ ರೇಷನ್‌ ಕಾರ್ಡ್‌ ಇದ್ದರೂ, 12 ಲಕ್ಷ ಜನರ ಕಾರ್ಡ್‌ ರದ್ದು ಮಾಡಲು ಸರ್ಕಾರ ಮುಂದಾಗಿದೆ” ಎಂದು ಆರೋಪಿಸಿದರು.

“ಏನೂ ಭಯ ಬೇಡವೆಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಆಹಾರ ಸಚಿವರು ಮತ್ತೆ ಅರ್ಜಿ ಹಾಕಿ ಎಂದು ಹೇಳುತ್ತಾರೆ. ಕಾಂಗ್ರೆಸ್‌ ನಾಯಕರು ತಪ್ಪು ಮಾಡಿದ ಮೇಲೆ ಜನರು ಯಾಕೆ ಮರಳಿ ಅರ್ಜಿ ಹಾಕಬೇಕು? ಮರಳಿ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೆ ಒಂದು ಕಾರ್ಡ್‌ಗೆ 10-15 ಸಾವಿರ ರೂ. ಲಂಚ ನೀಡಬೇಕಾಗುತ್ತದೆ. ಯಾರೂ ಅರ್ಜಿ ಹಾಕಬಾರದು, ಸರ್ಕಾರವೇ ಮರಳಿ ರೇಷನ್‌ ಕಾರ್ಡ್‌ ಕೊಡಬೇಕು. ದೇವಸ್ಥಾನದ ಮುಂದೆ ಹೂ ಮಾರುವವರು, ಸೊಪ್ಪು ಮಾರುವವರ ರೇಷನ್‌ ಕಾರ್ಡ್‌ ರದ್ದುಪಡಿಸಲಾಗಿದೆ. ಇದರ ವಿರುದ್ಧ ಸದನದಲ್ಲಿ ಹಾಗೂ ಹೊರಗೆ ಪ್ರತಿಭಟಿಸಲಾಗುವುದು” ಎಂದು ತಿಳಿಸಿದರು.‌

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

“ಏಕಾ‌ ಏಕಿ ರೇಷನ್‌ ಕಾರ್ಡ್‌ ರದ್ದು ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣ ಖಾಲಿಯಾಗಿದ್ದು, ರಸ್ತೆ ಗುಂಡಿ ಮುಚ್ಚಲು ಕೂಡ ಹಣವಿಲ್ಲ. 20-30 ಸಾವಿರ ಕೋಟಿ ರೂ. ಉಳಿಸಿ, ಶಾಸಕರ ಬಂಡಾಯ ಶಮನಕ್ಕೆ ಬಳಸಲಾಗುತ್ತದೆ. ಸಚಿವರ ಮನೆ ಆಧುನೀಕರಣಕ್ಕೆ 40-50 ಕೋಟಿ ರೂ., ಸಿಎಂ ಮನೆ ನವೀಕರಣಕ್ಕೆ 2 ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ಬಡ ಜನರಿಗೆ ಅಕ್ಕಿ ಕೊಡಲು ಸರ್ಕಾರದ ಬಳಿ ಹಣವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಆರ್‌.ಅಶೋಕ್ ಅವರು ಸಂಜಯಗಾಂಧಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿ, “ಕಾಂಗ್ರೆಸ್‌ ಸರ್ಕಾರ ಕಳೆದ 16 ತಿಂಗಳಲ್ಲಿ ಜನರ ತಲೆಗೆ ಚಪ್ಪಡಿ ಎಳೆಯುವ ಕೆಲಸ ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಹಣ ಕೊರತೆಯಿಂದಾಗಿ ಔಷಧಿ ಖರೀದಿ ಸಾಧ್ಯವಾಗುತ್ತಿಲ್ಲ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಅನುದಾನ ಕಡಿತ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ವಹಣೆಗೂ ಹಣವಿಲ್ಲ. ಇದಕ್ಕಾಗಿ ಸೇವಾ ಶುಲ್ಕವನ್ನು ಏರಿಸಲಾಗಿದೆ. ಅನ್ನ ಮತ್ತು ಆರೋಗ್ಯದ ವಿಚಾರದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಜನರಿಗೆ ಮೋಸ ಮಾಡಿದೆ” ಎಂದು ದೂರಿದರು.

“ಮುಡಾ ಹಗರಣದ ನಂತರ ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡು ಜನರ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಲಂಚ ಇದ್ದರೆ ಮಾತ್ರ ವಿಧಾನಸೌಧಕ್ಕೆ ಪ್ರವೇಶ ಎಂಬ ಸ್ಥಿತಿ ಇದೆ. ಆರೋಗ್ಯ ಸೇವೆಯನ್ನು ಸಂಪೂರ್ಣ ಉಚಿತವಾಗಿ ನೀಡಬೇಕು. ಇದರ ಮೇಲೂ ಸರ್ಕಾರ ವಕ್ರದೃಷ್ಟಿ ಬೀರಿದೆ” ಎಂದು ಆಕ್ರೋಶ ಹೊರಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X