ಪ್ರಧಾನಿ ಎಂದರೆ ದೊಡ್ಡಣ್ಣನಿದ್ದಂತೆ: ಮೋದಿಯನ್ನು ಹೊಗಳಿದ ತೆಲಂಗಾಣ ಸಿಎಂ!

Date:

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರವು ತೆರಿಗೆಯ ಪಾಲನ್ನು ಸರಿಯಾಗಿ ಹಂಚುತ್ತಿಲ್ಲ ಎಂಬ ಬಗ್ಗೆ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ನಡುವೆಯೇ ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಸಿಎಂ ರೇವಂತ್ ರೆಡ್ಡಿ, ಪ್ರಧಾನಿ ಮೋದಿಯವರನ್ನು ‘ದೊಡ್ಡಣ್ಣ’ ಎಂದು ಕರೆಯುವ ಮೂಲಕ ಬಿಜೆಪಿಯವರನ್ನೇ ಅಚ್ಚರಿಗೊಳಗಾಗುವಂತೆ ಮಾಡಿದ್ದಾರೆ.

ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ವಿದ್ಯುತ್, ರೈಲು ಮತ್ತು ರಸ್ತೆ ವಲಯಗಳಿಗೆ ಸಂಬಂಧಿಸಿದ 56,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಪೂರ್ಣಗೊಂಡ ಹಲವಾರು ಯೋಜನೆಗಳನ್ನು ಕೂಡ ಉದ್ಘಾಟಿಸಿದರು.

ಈ ಸಮಾರಂಭದಲ್ಲಿ ಮಾತನಾಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, “ಪ್ರಧಾನಿ ಎಂದರೆ ದೊಡ್ಡಣ್ಣನಿದ್ದಂತೆ. ಮೋದಿಯವರ ತವರು ರಾಜ್ಯವಾದ ಗುಜರಾತ್​ನಂತೆ ಪ್ರಗತಿ ಸಾಧಿಸಲು ತೆಲಂಗಾಣ ರಾಜ್ಯಕ್ಕೆ ಅವರ ಬೆಂಬಲ ಬೇಕು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್ ಆಡಳಿತದ ರಾಜ್ಯವಾದ ತೆಲಂಗಾಣವು ಕೇಂದ್ರದೊಂದಿಗೆ ಸಂಘರ್ಷ ಬಯಸುವುದಿಲ್ಲ ಮತ್ತು ಸೌಹಾರ್ದಯುತ ಸಂಬಂಧವನ್ನು ಬಯಸುತ್ತದೆ” ಎಂದು ಇದೇ ವೇಳೆ ಹೇಳಿಕೆ ನೀಡಿದ್ದಾರೆ.

“ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವ ಪ್ರಧಾನಿ ಮೋದಿಯವರ ದೂರದೃಷ್ಟಿಗೆ ನಾನು ಬೆಂಬಲ ಸೂಚಿಸಲು ಬಯಸುತ್ತೇನೆ. ಮುಂಬೈ, ದೆಹಲಿ, ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್ ಈ ಐದು ಮೆಟ್ರೋಪಾಲಿಟನ್ ನಗರಗಳು ಪ್ರಧಾನಿ ಮೋದಿಯವರ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸಿನಲ್ಲಿ ಕೊಡುಗೆ ನೀಡಿವೆ” ಎಂದು ತೆಲಂಗಾಣ ಸಿಎಂ ರೆಡ್ಡಿ ಹೇಳಿದರು.

ಸಮಾರಂಭದಲ್ಲಿ ಪ್ರಧಾನಿಯವರ ಬಗ್ಗೆ ಸಿಎಂ ರೇವಂತ್ ರೆಡ್ಡಿ ಈ ಹೇಳಿಕೆ ನೀಡುತ್ತಿದ್ದಂತೆಯೇ ವೇದಿಕೆಯಲ್ಲಿ ಉಪಸ್ಥಿತರಾಗಿದ್ದ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ನಗೆ ಬೀರಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಎ ಅವಧಿಗಿಂತ ಬಿಜೆಪಿ ಅವಧಿಯಲ್ಲಿ 86 ಪಟ್ಟು ಹೆಚ್ಚು ಇ.ಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಯುಪಿಎ...

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...