ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿಕೆಗೆ ಪರಿಶೀಲನೆ: ಗೃಹ ಸಚಿವ ಪರಮೇಶ್ವರ್

Date:

ಪಿಎಸ್ಐ ನೇಮಕಾತಿ ಪರೀಕ್ಷೆ ನಿಗಧಿಯಾಗಿದ್ದ ದಿನವೇ (ಸೆ.22) ಯುಪಿಎಸ್‌ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

- Advertisement -

ಸದಾಶಿವನಗರದ‌ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಯುಪಿಎಸ್‌ಸಿಗಿಂತ ಮೊದಲೇ ನಾವು ಪಿಎಸ್‌ಐ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದ್ದೇವೆ. ಮುಂದೂಡುವ ಬಗ್ಗೆ ಸಾಧ್ಯತೆ ಇದ್ದರೆ, ಹೆಚ್ಚಿನ ಮನವಿಗಳು ಬಂದಿದ್ದರೆ ಪರಿಗಣಿಸಬಹುದು. ಈ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ಈಗಾಗಲೇ ಪಿಎಸ್ಐ ನೇಮಕಾತಿ ಬಹಳ ವಿಳಂಬವಾಗಿದೆ. ಈ ಹಿಂದೆ ಗೃಹ ಸಚಿವನಾಗಿದ್ದಾಗ ಯಾವುದೇ ಅಡೆತಡೆಗಳಿಲ್ಲದೇ ಸಾವಿರಾರು ಹುದ್ದೆಗಳ ನೇಮಕಾತಿ ಸುಲಭವಾಗಿ ನಡೆದಿದೆ‌. ಪಿಎಸ್ಐ ಹಗರಣದ ಬಳಿಕ ವಿಳಂಬವಾಗುತ್ತಿದೆ. ಫಲಿತಾಂಶ ಪ್ರಕಟಿಸಲು ಸಹ ಕೋರ್ಟ್‌ಗೆ ಹೋಗುತ್ತಿದ್ದಾರೆ. ಆದರೂ ಫಲಿತಾಂಶ‌ ಪ್ರಕಟಿಸಲು ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ” ಎಂದು ಹೇಳಿದರು.

“ಹೆಚ್.ಡಿ.ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ವಿರುದ್ಧ ಅಕ್ರಮದ ಕುರಿತು ಪ್ರಾಸಿಕ್ಯೂಷನ್‌ಗೆ ವರ್ಷಾನುಗಟ್ಟಲೇ ಅವಕಾಶ ಕೊಟ್ಟಿಲ್ಲ ಎಂಬುದನ್ನು ಅಭಿಷೇಕ್ ಮನು ಸಿಂಘ್ವಿ ಅವರು ನ್ಯಾಯಾಲಯದ‌ ಮುಂದೆ ಪ್ರಸ್ತಾಪಿಸಿದ್ದಾರೆ. ರಾಜ್ಯಪಾಲರು ತರಾತುರಿಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಅಂಶವನ್ನು ಗಮನಕ್ಕೆ ತಂದಿದ್ದಾರೆ. ಈ ವಿಚಾರವನ್ನು ರಾಷ್ಟ್ರಪತಿ ಭೇಟಿಗೆ ಹೋದಾಗ ಪ್ರಸ್ತಾಪಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...